ಈಗಲಾದರೂ 2ಎ ಮೀಸಲಾತಿ ಕೊಡಿ

ಹಿಂದುಳಿದ ವರ್ಗಗಳ ಪಟ್ಟಿಗೆ ಪಂಚಮಸಾಲಿ ಸಮಾಜ ಸೇರ್ಪಡೆಗಿದು ಸಕಾಲ: ಶ್ರೀ ಜಯಮೃತ್ಯುಂಜಯ ಸ್ವಾಮೀಜಿ

Team Udayavani, Aug 11, 2021, 6:25 PM IST

11-17

ದಾವಣಗೆರೆ: ರಾಜ್ಯ ಸರ್ಕಾರ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸೌಲಭ್ಯ ಒದಗಿಸಬೇಕು ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಕೇಂದ್ರ ಸರ್ಕಾರ ಸೋಮವಾರ ಹಿಂದುಳಿದ ವರ್ಗಗಳ ಪಟ್ಟಿಗೆ ಸಮುದಾಯವನ್ನು ಸೇರ್ಪಡೆ ಮಾಡುವ ಅಧಿಕಾರವನ್ನು ರಾಜ್ಯಗಳಿಗೆ ವಹಿಸುವಂತಹ ಐತಿಹಾಸಕ ವಿಧೇಯಕ ಮಂಡಿಸಿದೆ.

ಹಾಗಾಗಿ ರಾಜ್ಯ ಸರ್ಕಾರಗಳಿಗೆ ಹಿಂದುಳಿದ ವರ್ಗಗಳ ಪಟ್ಟಿಗೆ ಸಮಾಜವನ್ನು ಸೇರಿಸುವ ಮುಕ್ತ ಅವಕಾಶ ದೊರೆತಿದೆ. ರಾಜ್ಯ ಸರ್ಕಾರಕ್ಕೆ ಇದ್ದ ಸಮಸ್ಯೆ ಬಗೆಹರಿದಿದೆ. ಹಾಗಾಗಿ ಆದಷ್ಟು ಬೇಗ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದರು. ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿಗೆ ಒತ್ತಾಯಿಸಿ ಪಂಚಮಸಾಲಿ ಮೀಸಲಾತಿ ಚಳವಳಿ ಸಮಿತಿ ನೇತೃತ್ವದಲ್ಲಿ ಜ.14 ರಿಂದ ಕೂಡಲಸಂಗಮದಿಂದ ಬೆಂಗಳೂರುವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. Freedom Park ನಲ್ಲಿ 20 ದಿನ ಧರಣಿ ನಡೆಸಲಾಗಿತ್ತು. ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿವೇಶನದಲ್ಲಿ 6 ತಿಂಗಳಲ್ಲಿ ಮೀಸಲಾತಿ ನೀಡುವ ಭರವಸೆ ನೀಡಿದ್ದರಿಂದ ತಾತ್ಕಾಲಿಕವಾಗಿ ಧರಣಿ ಹಿಂದಕ್ಕೆ ಪಡೆಯಲಾಗಿದೆ. ಸರ್ಕಾರ ನೀಡಿದ ಮಾತು, ಭರವಸೆ ಸೆಪ್ಟಂಬರ್‌ ಗೆ ಮುಕ್ತಾಯವಾಗಲಿದೆ.

ರಾಜ್ಯ ಸರ್ಕಾರ ಅದಕ್ಕಿಂತಲೂ ಮುನ್ನವೇ ಮೀಸಲಾತಿ ನೀಡುವ ವಿಶ್ವಾಸವೂ ಇದೆ. ಇಲ್ಲದಿದ್ದಲ್ಲಿ ಅ. 1 ರಿಂದ ಮತ್ತೆ ಧರಣಿ ಪ್ರಾರಂಭಿಸಲಾಗುವುದು ಎಂದು ಎಚ್ಚರಿಸಿದರು. ಬೆಂಗಳೂರಿನFreedom ಪಾರ್ಕ್‌ನಲ್ಲಿ ಧರಣಿ ಕೈಗೊಂಡಿದ್ದ ಸಂದರ್ಭದಲ್ಲಿ ನಮ್ಮ ಹಾಗೂ ಸರ್ಕಾರದ ನಡುವೆ ಮಧ್ಯಸ್ಥಿಕೆ ವಹಿಸಿದ್ದ ಬಸವರಾಜ ಬೊಮ್ಮಾಯಿ ಅವರೇ ಈಗ ಮುಖ್ಯಮಂತ್ರಿ ಆಗಿದ್ದಾರೆ. ಯಡಿಯೂರಪ್ಪ ಅವರು ಅಧಿವೇಶನದಲ್ಲಿ ಹೇಳಿಕೆ ನೀಡಿದ್ದರ ಹಿಂದೆ ಅವರೇ ಪ್ರಮುಖ ಪಾತ್ರ ವಹಿಸಿದ್ದರು.

ಅವರಿಗೆ ನಮ್ಮ ಸಮಾಜದ ಬಗ್ಗೆ ಎಲ್ಲವೂ ಗೊತ್ತಿದೆ. ಕೇಂದ್ರ ಸರ್ಕಾರದಿಂದ ಹಿಂದೆ ಇದ್ದಂತಹ ಸಮಸ್ಯೆಯೂ ಈಗ ಇಲ್ಲವಾಗಿದೆ. ಹಾಗಾಗಿ ಸರ್ಕಾರ ನೀಡಿದ ಮಾತಿನಂತೆ ಸಮಾಜಕ್ಕೆ 2 ಎ ಮೀಸಲಾತಿ ನೀಡುವ ವಿಶ್ವಾಸ ಇದೆ. ಅವರು ದಿಟ್ಟ ಹೆಜ್ಜೆ ಇಡುವ ಮೂಲಕ ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು ಎಂದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪಂಚಮಸಾಲಿ ಸಮಾಜದ ಋಣ ತೀರಿಸುವ ಅವಕಾಶ ಇತ್ತು. ಅವರು ರಾಜೀನಾಮೆ ನೀಡುವ ಎರಡು ದಿನಗಳ ಮುನ್ನ ಸಮಾಜಕ್ಕೆ 2 ಎ ಮೀಸಲಾತಿ ನೀಡುವ ಮೂಲಕ ಸಮಾಜದ ಋಣ ತೀರಿಸಿ, ಅದರಿಂದ ನಿಮ್ಮ ಮಕ್ಕಳಿಗೆ ಒಳ್ಳಯದಾಗುತ್ತದೆ ಎಂದು ಹೇಳಿದ್ದೆವು. ಆದರೂ ಅವರು ಮೀಸಲಾತಿ ನೀಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಬಾರಿ ಮೀಸಲಾತಿಗೆ ಒತ್ತಾಯಿಸಿ ನಡೆಸಿದ ಹೋರಾಟದ ಸಂದರ್ಭದಲ್ಲಿ ರಾಜ್ಯ ಸರ್ಕಾರ 6 ತಿಂಗಳ ಕಾಲ ಮಿತಿ ಸೆಪ್ಟಂಬರ್‌ ಗೆ ಮುಗಿಯುವುದರೊಳಗೆ ಸರ್ಕಾರ ಮೀಸಲಾತಿ ನೀಡಬೇಕು.

ಇಲ್ಲವಾದಲ್ಲಿ ಅ.1 ರಿಂದ ಮತ್ತೆ ಧರಣಿ, ಹೋರಾಟ ಪ್ರಾರಂಭಿಸಲಾಗುವುದು. ಅ.12 ರಂದು ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ನಡೆಯುವ ಪಂಚಮಸಾಲಿ ಮೀಸಲಾತಿ ಚಳವಳಿಗಾರರ ದುಂಡು ಮೇಜಿನ ಸಭೆಯಲ್ಲಿ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು. ಮೀಸಲಾತಿ ನೀಡುವ ಬಗ್ಗೆ ರಾಜ್ಯ ಸರ್ಕಾರ ಸಹ ಕೆಲವಾರು ಸಿದ್ಧತೆ ಮಾಡಿಕೊಂಡಿರಬಹುದು ಎಂದು ಹೇಳಿದರು.

ಮೀಸಲಾತಿ ಹೋರಾಟ ಸಮಾಜದ ಜನರ ಕೆಲಸ. ಸಮಾಜದ ಅನ್ನದ ಋಣದಲ್ಲಿರುವವರೆಲ್ಲರೂ ಹೋರಾಟಕ್ಕೆ ಸಹಕಾರ ನೀಡಬೇಕಾಗುತ್ತದೆ. ಇಂತಹವರು ಬರಬೇಕು ಎಂದು ಸ್ವಾಗತಿಸುವುದು, ಆಹ್ವಾನಿಸುವ ಕೆಲಸ ಮಾಡುವುದಿಲ್ಲ. ಬಂದರೆ ಸ್ವಾಗತಿಸುತ್ತೇವೆ. ಹೋಗುವವರಿಗೆ ಧನ್ಯವಾದ ಹೇಳುತ್ತೇವೆ. ಕೆಲವರು ಸಿಎಂ ಮಾಡುವ, ಉಳಿಸುವ ಪ್ರತಿಜ್ಞೆ ಮಾಡಿದರೆ, ನಾವು ಸಮಾಜದ ಮಕ್ಕಳಿಗೆ, ರೈತರಿಗೆ ಮೀಸಲಾತಿ ಕೊಡಿಸುವ ಪ್ರತಿಜ್ಞೆ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಮಾಜಿ ಶಾಸಕ ಎಚ್‌.ಎಸ್‌. ಶಿವಶಂಕರ್‌, ಮಾಜಿ ಮೇಯರ್‌ ಬಿ.ಜಿ. ಅಜಯ್‌ ಕುಮಾರ್‌, ಪ್ರಭು ಕಲುºರ್ಗಿ, ಅಶೋಕ್‌ ಗೋಪನಾಳ್‌, ಜೆ.ಪಿ. ಸತ್ತೂರು ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

1-renuuu

Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ

Davanagere: ಬಿಜೆಪಿಯ ಬಾಯಿಚಟದ ಮೂರ್ನಾಲ್ಕು ಜನರ ವಿರುದ್ದ ರೇಣುಕಾಚಾರ್ಯ ಟೀಕೆ

Davanagere: ಬಿಜೆಪಿಯ ಬಾಯಿಚಟದ ಮೂರ್ನಾಲ್ಕು ಜನರ ವಿರುದ್ದ ರೇಣುಕಾಚಾರ್ಯ ಟೀಕೆ

Gold worth Rs 12.95 crore stolen from Nyamathi SBI Bank

Nyamathi: ಎಸ್‌ಬಿಐ ಬ್ಯಾಂಕ್ ನಿಂದ 12.95 ಕೋಟಿ ರೂ ಮೌಲ್ಯದ ಚಿನ್ನ ಕಳ್ಳತನ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.