ಕನ್ನಡ ಭಾಷೆಯಲ್ಲಿ ಸಂಸ್ಕೃತಿ ಅಡಕ
ಕನ್ನಡದಲ್ಲಿ ಹೆಚ್ಚು ಅಂಕಗಳಿಸಿದ ಮಕ್ಕಳಿಗೆ ಕನಡ ಕಸ್ತೂರಿ ಪ್ರಶಸ್ತಿಯನ್ನು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪ್ರದಾನ ಮಾಡಿದರು
Team Udayavani, Feb 1, 2021, 4:51 PM IST
ಚನ್ನಗಿರಿ: ಕನ್ನಡ ಭಾಷೆಯಲ್ಲಿ ಸಂಸ್ಕೃತಿ ಹಾಸು ಹೊಕ್ಕಾಗಿದೆ. ಭಾಷೆ ಎಂದರೆ ಅದೊಂದು ಜೀವನ ಕ್ರಮ. ಜೀವನ ಶೈಲಿ ಭಾಷೆಯಲ್ಲಿ ಅಡಗಿದೆ. ಗ್ರಾಮೀಣ ಪ್ರದೇಶಗಳಿಂದಾಗಿ ಇಂದಿಗೂ ಕೂಡ ಸಂಸ್ಕೃತಿ, ಭಾಷೆ ಉಳಿದಿದೆ. ಆಧುನಿಕ ಜಗತ್ತಿನಲ್ಲಿ ಕನ್ನಡ ಭಾಷೆಯನ್ನು ಹೇಗೆ ಉಳಿಸಿಕೊಳ್ಳಬೇಕು ಎಂದು ನಾವು ಚಿಂತಿಸಬೇಕಾಗಿದೆ ಎಂದು ರಾಜ್ಯ ಕೆಎಸ್ ಡಿಎಲ್ ನಿಗಮ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.
ಕನ್ನಡಭಿಮಾನಿ ಬಳಗದಿಂದ ಆಯೋಜಿಸಲಾಗಿದ್ದ, ಎಸ್ಸೆಸ್ಸೆಲ್ಸಿಯಲ್ಲಿ ಕನ್ನಡ ಭಾಷೆಯಲ್ಲಿ 120ಕ್ಕೂ ಹೆಚ್ಚು ಅಂಕಗಳಿಸಿದ ಮಕ್ಕಳಿಗೆ ಕನ್ನಡ ಕಸ್ತೂರಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ಭಾಷೆಯೆಂದರೆ ಅಸಡ್ಯ ಮಾಡುವಂತಹ ದಿನಮಾನದಲ್ಲಿ ಭಾಷಾಭಿಮಾನ ಇಟ್ಟುಕೊಂಡು ಹೆಚ್ಚು ಅಂಕಗಳಿಸಿ ಕನ್ನಡಭಾಷೆ ಮೇಲಿಟ್ಟಿರುವ
ಅಭಿಮಾನ ಶ್ಲಾಘನೀಯ. ತಂತ್ರಜ್ಞಾನ, ವಿಜ್ಞಾನ ಬೆಳೆದಂತೆ ನಾವು ನಮ್ಮ ಭಾಷೆಯಿಂದ ದೂರವಾಗುತ್ತಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡವನ್ನು ಓದುವಂತಾಗಿದೆ. ಭಾಷೆ ಬೆಳೆವಣಿಗೆಗೆ ನಿರಂತರ ಓದು ಬರಹ ಮುಖ್ಯ ಎಂದರು.
ಕಸಾಪ ತಾಲೂಕು ಅಧ್ಯಕ್ಷ ಎಂ.ಯು ಚನ್ನಬಸಪ್ಪ ಮಾತನಾಡಿ, ಸರಕಾರಿ ಶಾಲೆಗಳಲ್ಲಿ ಓದುವವರ ಸಂಖ್ಯೆ ಕ್ಷೀಣಿಸುತ್ತಿದೆ. ಖಾಸಗಿ ಶಾಲೆಗಳು ಹಣ ಮಾಡುವ ಸಂಸ್ಥೆಗಳಾಗಿ ಬೆಳೆಯುತ್ತಿವೆ. ಜೊತೆಗೆ ಮಾತೃಭಾಷೆಗೆ ಆದ್ಯತೆ ನೀಡದೆ ಮಕ್ಕಳನ್ನು ಇಂಗ್ಲಿಷ್ ಗುಲಾಮರನ್ನಾಗಿ
ಮಾಡುತ್ತಿವೆ ಎಂದು ವಿಷಾಧಿಸಿದರು.
ತಹಶೀಲ್ದಾರ್ ಪಟ್ಟರಾಜಗೌಡ ಮಾತನಾಡಿದರು. ಕನ್ನಡ ಭಾಷೆಯಲ್ಲಿ 120ಕ್ಕೂ ಹೆಚ್ಚು ಅಂಕಗಳಿಸಿದ 125 ಮಕ್ಕಳಿಗೆ ಕನ್ನಡ ಕಸ್ತೂರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಸ್ವಾಮೀಜಿ, ಹರಿಹರದ ರಾಮಕೃಷ್ಣ ಆಶ್ರಮದ ಶಾರದ ದೇಶಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕರವೇ ಮಹಿಳಾ ಘಟಕದ ಅಧ್ಯಕ್ಷ ಜ್ಯೋತಿ ಕೋರಿ, ಕನ್ನಡಭಿಮಾನಿ ಬಳಗದ ತಾಲೂಕು ಅಧ್ಯಕ್ಷ ಎಸ್. ಶಂಕರಪ್ಪ, ಮಂಜುನಾಥ್, ಯುಗಧರ್ಮ ರಾಮಣ್ಣ ಇತರರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Kundapura: ಟವರ್‌ನ ಬುಡದಲ್ಲೇ ನೆಟ್‌ವರ್ಕ್ ಇಲ್ಲ!
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.