ವಾಲೀಕಿ ಜಾತ್ರೆಗೆ 1.99 ಕೋಟಿ ರೂ. ಬಿಡುಗಡೆ

ರಾಮಾಯಣ ಸಂಶೋಧನಾ ಕೇಂದ್ರ-ಗ್ರಂಥಾಲಯ ನಿರ್ಮಾಣ: ಶಾಸಕ ಎಸ್‌.ವಿ. ರಾಮಚಂದ್ರ

Team Udayavani, Feb 2, 2021, 1:09 PM IST

2-3

ದಾವಣಗೆರೆ: ವಾಲ್ಮೀಕಿ ಜಯಂತಿ ಅಂಗವಾಗಿ ರಾಜನಹಳ್ಳಿಯಲ್ಲಿ ಹಮ್ಮಿಕೊಂಡಿರುವ ಜಾತ್ರಾ ಮಹೋತ್ಸವಕ್ಕೆ ಸರ್ಕಾರ 1.99 ಕೋಟಿ ರೂ. ಬಿಡುಗಡೆ ಮಾಡಿದೆ. ಅಂದಾಜು 10 ಕೋಟಿ ಹಣವನ್ನು ಮಠದ ಅಭಿವೃದ್ಧಿಗಾಗಿ ಬಿಡುಗಡೆ ಮಾಡಿದ್ದು, ಈ ಹಣದಲ್ಲಿ ರಾಮಾಯಣ ಸಂಶೋಧನಾ ಕೇಂದ್ರ ಹಾಗೂ ಗ್ರಂಥಾಲಯ ನಿರ್ಮಾಣ ಮಾಡಲಾಗುವುದು ಎಂದು ಜಗಳೂರು ಶಾಸಕ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ
ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್‌.ವಿ. ರಾಮಚಂದ್ರ ತಿಳಿಸಿದರು.

ಜಿಲ್ಲಾಡಳಿತದ ಸಹಯೋಗದೊಂದಿಗೆ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಸೋಮವಾರ ನಡೆದ 2021ನೇ ಸಾಲಿನ ಮಹರ್ಷಿ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಳೆದ ಎರಡು ವರ್ಷದಂತೆ ಈ ಬಾರಿಯೂ ವಾಲ್ಮೀಕಿ ಜಾತ್ರೆಯನ್ನು ಅದ್ಧೂರಿಯಾಗಿ ಆಚರಿಸಲಾಗುವುದು. ಆದರೆ, ಕಳೆದ ವರ್ಷಕ್ಕಿಂತ ಈ ವರ್ಷದ ಪರಿಸ್ಥಿತಿ ಭಿನ್ನವಾಗಿದ್ದು ಕೊರೊನಾ ಮಹಾಮಾರಿ ನಮ್ಮೆಲ್ಲರ ನಡುವೆ ಇದೆ. ಹಾಗಾಗಿ ನಾವೆಲ್ಲ ಅತ್ಯಂತ ಜಾಗರೂಕರಾಗಿ, ಎಚ್ಚರಿಕೆಯಿಂದ ಈ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದರು.

ಜಾತ್ರೆಯು ಕೇವಲ ಒಂದು ಜಾತಿಗೆ ಸೀಮಿತವಾಗದೆ ಎಲ್ಲರಿಗೆ ಸೇರಿದ್ದಾಗಿದೆ. ಹಿಂದುಳಿದ ಪರಿಶಿಷ್ಟ ಜನಾಂಗದ ಕಲೆ ಮತ್ತು ಸಂಸ್ಕೃತಿಯ ಪ್ರದರ್ಶನಕ್ಕೆ ಒಂದು ಉತ್ತಮ ವೇದಿಕೆಯಾಗಲಿದೆ. ಜಾತ್ರೆಗೆ ಬರುವ ಭಕ್ತಾದಿಗಳಿಗೆ ಸೂಕ್ತ ನೀರಿನ ವ್ಯವಸ್ಥೆ ಸೇರಿದಂತೆ ಉತ್ತಮ ಮೂಲ
ಸೌಕರ್ಯವನ್ನು ಒದಗಿಸಲಾಗುವುದು. ಹಿಂದಿನ ವರ್ಷದ ಜಾತ್ರೆಯ ಅನುಭವಗಳೊಂದಿಗೆ ಈ ವರ್ಷ ಯಾವುದೇ ತೊಂದರೆಯಾಗದಂತೆ ಜನತೆಯ ಸಹಕಾರದೊಂದಿಗೆ ಯಶಸ್ವಿಗೊಳಿಸಲಾಗುವುದು ಎಂದರು.
ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಮಾತನಾಡಿ, ಮಹರ್ಷಿ ವಾಲ್ಮೀಕಿ ಜಯಂತಿ ಒಂದು ಐತಿಹಾಸಿಕ ಕಾರ್ಯಕ್ರಮ ಆಗಲಿದೆ. ರಾಮಾಯಣ ಸಂಶೋಧನಾ ಕೇಂದ್ರ ಸಂಶೋಧನಾ ಆಸಕ್ತರಿಗೆ ಮತ್ತು ರಾಮಾಯಣದ ಬಗ್ಗೆ ಅಧ್ಯಯನ ನಡೆಸುವವರಿಗೆ
ಉತ್ತಮ ಕೇಂದ್ರ ಆಗಲಿದೆ ಎಂದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಹೊರ ರಾಜ್ಯಗಳಿಂದ ಬರುವ ಕಲಾವಿದರು ತಮ್ಮ ರಾಜ್ಯಗಳ ಕಲಾಪ್ರಕಾರಗಳನ್ನು ಪರಿಚಯಿಸಲಿದ್ದು, ಸುಮಾರು 200 ಕಲಾವಿದರು ಭಾಗವಹಿಸುತ್ತಿದ್ದು, ಅವರಿಗೆ ಸಿದ್ದೇಶ್ವರ ಪ್ಯಾಲೇಸ್‌ನಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದ್ದು ಆ ಕಲಾವಿದರುಗಳಿಗೆ ಆರ್‌ಟಿಪಿಸಿಆರ್‌ ಟೆಸ್ಟ್‌ ಮಾಡಿ ಒಂದೇ ದಿನದಲ್ಲಿ ವರದಿ ಪಡೆಯುವ ವ್ಯವಸ್ಥೆ ಮಾಡಲಾಗುವುದು
ಎಂದರು.

ಹರಿಹರ ಕ್ಷೇತ್ರದ ಶಾಸಕ ರಾಮಪ್ಪ ಮಾತನಾಡಿ, ಜಾತ್ರಾ ಕಾರ್ಯಕ್ರಮಕ್ಕೆ ಸಹಸ್ರ ಸಂಖ್ಯೆಯಲ್ಲಿ ಜನ ಬರುವುದರಿಂದ ಎಲ್ಲ ಇಲಾಖೆಗಳ ಜವಾಬ್ದಾರಿ ಇರುತ್ತದೆ. ಪ್ರಮುಖವಾಗಿ ಬೆಸ್ಕಾಂನವರು ವಿದ್ಯುತ್‌ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು. ರಾಜ್ಯದ ತಾಲೂಕು ಹಾಗೂ
ಜಿಲ್ಲಾ ಕೇಂದ್ರಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಜನ ಬರುವುದರಿಂದ ಸ್ವಯಂ ಸೇವಕರು, ಪೊಲೀಸ್‌ ಸಿಬ್ಬಂದಿ
ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ಹಿಂದಿನ ವರ್ಷದಂತೆ ವಾಹನ ಪಾರ್ಕಿಂಗ್‌ ಗಾಗಿ ವ್ಯವಸ್ಥೆ ಮಾಡಲಾಗಿದ್ದು, ವಿಐಪಿ ಪಾರ್ಕಿಂಗ್‌ಗೂ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಗಣ್ಯರು, ಚಲನಚಿತ್ರ ನಟರು ಕಾರ್ಯಕ್ರಮಕ್ಕೆ ಬರುವುದರಿಂದ ಸಮರ್ಪಕವಾಗಿ
ಬ್ಯಾರಿಕೇಡ್‌ ವ್ಯವಸ್ಥೆ, ಪ್ರಸಾದ ಪೂರೈಸುವ ಸ್ಥಳದಲ್ಲಿ ಜನಜಂಗುಳಿ ತಡೆಯಲು ಸಾಕಷ್ಟು ಬ್ಯಾರಿಕೇಡ್‌ ಹಾಕಿ ನಿಯಂತ್ರಿಸಲಾಗುವುದು ಎಂದರು.

ಕಾರ್ಮಿಕ ಮುಖಂಡ ಎಚ್‌.ಕೆ. ರಾಮಚಂದ್ರಪ್ಪ ಮಾತನಾಡಿ, ವಾಲ್ಮೀಕಿ ಜಯಂತಿ ಜಾತ್ಯತೀತವಾಗಿದ್ದು, ದೇಶದಾದ್ಯಂತ ಪ್ರಸಾರವಾಗಬೇಕಿದೆ. ಈ ಸಂಬಂಧ ವಾರ್ತಾ ಇಲಾಖೆಯವರು ಹೆಚ್ಚಿನ ಪ್ರಚಾರ ನೀಡುವ ಮೂಲಕ ಸಹಕರಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಓ ಪದ್ಮಾ ಬಸವಂತಪ್ಪ, ದಾವಣಗೆರೆ ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್‌, ಸಮಾಜದ ಮುಖಂಡರಾದ ಉಪನ್ಯಾಸಕ ರಾಮಚಂದ್ರಪ್ಪ, ವಕೀಲರಾದ ನಾಗೇಂದ್ರಪ್ಪ, ಟಿ. ಓಬಳಪ್ಪ, ಹೊದಿಗೆರೆ ರಮೇಶ್‌, ಈಶ್ವರ್‌,
ಪಾಲಯ್ಯ, ಜಿ.ಪಂ. ಮಾಜಿ ಅಧ್ಯಕ್ಷ ಡಾ| ವೈ. ರಾಮಪ್ಪ, ಜಿ.ಪಂ. ಉಪಕಾರ್ಯದರ್ಶಿ ಆನಂದ್‌, ಡಿಎಚ್‌ಒ ಡಾ| ನಾಗರಾಜ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಡಿಡಿ ವಿಜಯಕುಮಾರ್‌, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಂಗಪ್ಪ, ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಮಂಜಾನಾಯ್ಕ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಓದಿ : ತುಮಕೂರು: ಮಸ್ಕಲ್ ಗ್ರಾಮದಲ್ಲಿ ಜೆಲಿಟಿನ್ ಕಡ್ಡಿ ಸ್ಪೋಟ; ಮನೆ ಧ್ವಂಸ

ಟಾಪ್ ನ್ಯೂಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.