ಗ್ರಾಮೀಣ ಭಾಗದ ಸಮಸ್ಯೆ ನಿವಾರಣೆಗೆ ಒತ್ತು ಕೊಡಿ
ಮತದಾರರ ವಿಶ್ವಾಸ ಕಾಪಾಡಿಕೊಳ್ಳಬೇಕು
Team Udayavani, Jan 24, 2021, 4:07 PM IST
ಜಗಳೂರು: ಗ್ರಾಮೀಣ ಭಾಗದ ಸಮಸ್ಯೆಗಳನ್ನ ಗುರುತಿಸಿ ಸ್ಥಳದಲ್ಲಿಯೇ ಬಗೆಹರಿಸಿ ಮತದಾರರ ವಿಶ್ವಾಸ ಕಾಪಾಡಿಕೊಳ್ಳಬೇಕು ಎಂದು ನೂತನ ಗ್ರಾಪಂ ಸದಸ್ಯರಿಗೆ ಮಾಜಿ ಶಾಸಕ ಎಚ್.ಪಿ. ರಾಜೇಶ್ ಸಲಹೆ ನೀಡಿದರು.
ತಾಲೂಕಿನ ಬಿದರಿಕೆರೆ ತೋಟದಲ್ಲಿ ಹಿರೇಮಲ್ಲನಹೊಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಚ್.ಎಂ. ಹೊಳೆ ಹಾಗು ಸಿ.ಎಂ. ಹೊಳೆಯ ಗ್ರಾಪಂ
ಸದಸ್ಯರನ್ನು ಅಭಿನಂದಿಸಿ ಅವರು ಮಾತನಾಡಿದರು.
ತೊರೆಸಾಲು ಭಾಗ ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಪಕ್ಷದ ಚಿನ್ಹೆ ಇಲ್ಲದಿದ್ದರೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿರುವುದು ಪಕ್ಷಕ್ಕೆ ಚೈತನ್ಯ ತುಂಬಿದಂತಾಗಿದೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ತಳ ಮಟ್ಟದಿಂದ ಸಂಘಟಿಸಲು ನಿಮ್ಮ ಸಹಕಾರ ಅಗತ್ಯ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಸಿ.ಎಂ. ಹೊಳೆ ಕೃಷ್ಣಪ್ಪ, ಗ್ರಾಪಂ ಸದಸ್ಯರಾದ ಶಿವಣ್ಣ, ರಂಗಪ್ಪ, ಸುರೇಶ್, ಈರಮ್ಮ, ಶಿವಣ್ಣ, ರಜಿಯಾಬಿ, ಕಲೀಲ್ ಸಾಬ್, ದ್ಯಾಮಕ್ಕ, ತಿಪ್ಪೇಸ್ವಾಮಿ, ಶಿವರುದ್ರಮ್ಮ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ
Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
Davanagere: ಬಿಜೆಪಿಯ ಬಾಯಿಚಟದ ಮೂರ್ನಾಲ್ಕು ಜನರ ವಿರುದ್ದ ರೇಣುಕಾಚಾರ್ಯ ಟೀಕೆ
MUST WATCH
ಹೊಸ ಸೇರ್ಪಡೆ
Pro Kabaddi;ಬೆಂಗಳೂರು ಬುಲ್ಸ್ ಜಯಭೇರಿ: ತಮಿಳ್ ತಲೈವಾಸ್‌ಗೆ 32-36 ಅಂಕಗಳ ಸೋಲು
Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡರ್ ಸ್ಫೋ*ಟ: ಅಪಾರ ಹಾನಿ
Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.