ಉತ್ತಮ ಪಾಂಡಿತ್ಯ-ಸಂಸ್ಕಾರ ರೂಢಿಸಿಕೊಳ್ಳಲು ಕರೆ
ಸನಾತನ ಆಚರಣೆಯ ವೈಜ್ಞಾನಿಕ ಹಿನ್ನೆಲೆ ಅರಿಯಿರಿ: ಡಾ| ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ
Team Udayavani, Feb 3, 2021, 12:39 PM IST
ಹೊನ್ನಾಳಿ: ನಮ್ಮ ಸನಾತನ ಆಚರಣೆಗಳಲ್ಲಿನ ವೈಜ್ಞಾನಿಕ ಹಿನ್ನೆಲೆಯನ್ನು ಅರಿಯಬೇಕಿದೆ. ಪುರೋಹಿತರು-ಅರ್ಚಕರು ವೀರಶೈವ
ಧರ್ಮದ ಅತ್ಯುತ್ತಮ ಗ್ರಂಥಗಳನ್ನು ಆಕರ ಗ್ರಂಥಗಳನ್ನಾಗಿ ಬಳಸಿಕೊಂಡು ಉತ್ತಮ ಪಾಂಡಿತ್ಯ, ಸಂಸ್ಕಾರಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಡಾ| ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಇಲ್ಲಿನ ಹಿರೇಕಲ್ಮಠದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅಖೀಲ ಕರ್ನಾಟಕ ವೀರಶೈವ ಪುರೋಹಿತ ಮಹಾಸಭಾದ ಪ್ರಥಮ ಅ ಧಿವೇಶನ ಹಾಗೂ ವೀರಶೈವ ಶೋಡಷ ಸಂಸ್ಕಾರಗಳ ಬಗೆಗಿನ ವಿಚಾರಸಂಕಿರಣದ ಸಾನ್ನಿಧ್ಯ ವಹಿಸಿ ಶ್ರೀಗಳು ಮಾತನಾಡಿದರು.
ಅಖೀಲ ಕರ್ನಾಟಕ ವೀರಶೈವ ಪುರೋಹಿತ ಮಹಾಸಭಾ ಸಂಘಟನೆಯ ನಿಟ್ಟಿನಲ್ಲಿ ಉತ್ತಮ ಹೆಜ್ಜೆಗಳನ್ನು ಇಡುತ್ತಿದೆ. ತುಮಕೂರು ಜಿಲ್ಲಾ ಕೇಂದ್ರದಲ್ಲಿ ರಾಜ್ಯ ಮಟ್ಟದ ಕಚೇರಿ ಇದೆ. ಮುಂದಿನ ದಿನಗಳಲ್ಲಿ ವಿಕೇಂದ್ರೀಕರಣ ವ್ಯವಸ್ಥೆ ಜಾರಿಗೊಳ್ಳಬೇಕು. ದೇಶಾದ್ಯಂತ ವೀರಶೈವ
ಧರ್ಮದ ಪಂಚಪೀಠಗಳು ಇರುವ ಹಾಗೆ ರಾಜ್ಯದ ವಿವಿಧ ಭಾಗಗಳಲ್ಲಿ ಅಖೀಲ ಕರ್ನಾಟಕ ವೀರಶೈವ ಪುರೋಹಿತ ಮಹಾಸಭಾ ಐದು ಶಾಖೆಗಳನ್ನು ತೆರೆಯಬೇಕು. ಬಳಿಕ ಜಿಲ್ಲಾ ಹಾಗೂ ತಾಲೂಕು ಘಟಕಗಳನ್ನು ರಚಿಸುವ ಮೂಲಕ ಸಂಘಟನೆಯನ್ನು ಶಕ್ತಿಶಾಲಿಯಾಗಿಸುವ
ಮಹತ್ವದ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಸಂಘಟಿತ ಹೋರಾಟ ನಡೆಸಬೇಕು ಎಂದರು.
ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಮಾತನಾಡಿ, ನಮಗೆ ಮಾರ್ಗದರ್ಶನ ನೀಡುವ ಧರ್ಮಗುರುಗಳನ್ನು ನಾವು ಯಾವ ಭಾವನೆಯಿಂದ ನೋಡುತ್ತೇವೋ ಅದೇ ಭಾವನೆಯಿಂದ ಪುರೋಹಿತರು-ಅರ್ಚಕರನ್ನೂ ನೋಡುತ್ತೇವೆ. ನಮ್ಮ ಸಮಾಜದಲ್ಲಿನ ಎಲ್ಲಾ ಕಾರ್ಯಗಳಿಗೂ ಪುರೋಹಿತರು ಬೇಕು. ಇದು ಅವರ ಕಾರ್ಯವೈಖರಿಗೆ ಹಿಡಿದ ಕನ್ನಡಿಯಾಗಿದೆ ಎಂದು ಹೇಳಿದರು.
ಜಿಲ್ಲಾ ಧಿಕಾರಿ ಮಹಾಂತೇಶ ಬೀಳಗಿ ಸಮಾರಂಭ ಉದ್ಘಾಟಿಸಿ ಮಾತನಾಡಿ, ನಾವು ಉತ್ತಮವಾಗಿ ಕಾರ್ಯ ನಿರ್ವಹಿಸಲು ಧಾರ್ಮಿಕ ಗುರುಗಳ ಮಾರ್ಗದರ್ಶನ ಅಗತ್ಯ. ಪೂಜಾ ವಿ ಧಿ ವಿಧಾನಗಳನ್ನು ಸಮಾಜಕ್ಕೆ ಅರುಹಲು ಪುರೋಹಿತರು ಬೇಕು. ಮೋಕ್ಷ ಹೊಂದಲು ನಮಗೆ ಧರ್ಮ ರಹದಾರಿ ಒದಗಿಸುತ್ತದೆ. ಆದ್ದರಿಂದ, ನಾವೆಲ್ಲರೂ ಧರ್ಮ ಮಾರ್ಗದಲ್ಲಿ ನಡೆದು ಬದುಕನ್ನು ಅರ್ಥಪೂರ್ಣವಾಗಿಸಿಕೊಳ್ಳೋಣ ಎಂದರು.
ಹೊಟ್ಯಾಪುರ ಹಿರೇಮಠದ ಗಿರಿಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ರಾಂಪುರ ಬೃಹನ್ಮಠದ ಶಿವಕುಮಾರ ಹಾಲಸ್ವಾಮೀಜಿ, ಜೆಡಿಎಸ್ ಜಿಲ್ಲಾಧ್ಯಕ್ಷ ಚಿದಾನಂದಪ್ಪ, ಗೀತಾ ರವೀಂದ್ರ, ಬಿಜೆಪಿ ಮುಖಂಡ ಎಂ.ಪಿ. ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಹನುಮಂತರಾಯ, ಮಹಾಸಭಾದ ರಾಜ್ಯ ಖಜಾಂಚಿ ಕೆ.ಆರ್. ನಗರದ ಕೆ.ಜಿ. ಮಹದೇವಸ್ವಾಮಿ ಮಾತನಾಡಿದರು. ಅಖೀಲ ಕರ್ನಾಟಕ ವೀರಶೈವ ಪುರೋಹಿತ ಮಹಾಸಭಾದ ರಾಜ್ಯಾಧ್ಯಕ್ಷ ಚನ್ನೇಶ ಶಾಸ್ತ್ರಿ ಅಧ್ಯಕ್ಷತೆ ವಹಿಸಿದ್ದರು. ಡಿವೈಎಸ್ಪಿ ಪ್ರಶಾಂತ್ ಎಸ್.ಮುನ್ನೋಳಿ ಮತ್ತಿತರರು ಉಪಸ್ಥಿತರಿದ್ದರು.
ಅಖೀಲ ಕರ್ನಾಟಕ ವೀರಶೈವ ಪುರೋಹಿತ ಮಹಾಸಭಾದ ರಾಜ್ಯ ನಿರ್ದೇಶಕ ಎಚ್.ಜಿ. ನಾಗರಾಜ ಶಾಸ್ತ್ರಿ ಸ್ವಾಗತಿಸಿದರು. ನಿವೃತ್ತ ಮುಖ್ಯ ಶಿಕ್ಷಕ ಎಂ.ಪಿ.ಎಂ ವಿಜಯಾನಂದಸ್ವಾಮಿ ನಿರೂಪಿಸಿದರು. ಎಂ.ಎಸ್. ಶಾಸ್ತ್ರಿ ಹೊಳೆಮಠ ವಂದಿಸಿದರು.
ಓದಿ : ಖಲಿಸ್ತಾನದ ಪರ ಬಿಜೆಪಿ ಕಾರ್ಯಕರ್ತರೇ ಕರಪತ್ರ ಹಂಚಿದ್ದರು: ರಾಮಲಿಂಗಾರೆಡ್ಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಚಾಲಕ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.