ಕ್ರೀಡಾ ಮನೋಭಾವದಿಂದ ಆಟೋಟದಲ್ಲಿ ಪಾಲ್ಗೊಳ್ಳಿ : ಡಿಸಿ ಮಹಾಂತೇಶ
ಗುಂಡು ಎಸೆಯುವ ಮೂಲಕ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
Team Udayavani, Feb 6, 2021, 2:31 PM IST
ದಾವಣಗೆರೆ: ವರ್ಷಪೂರ್ತಿ ಒತ್ತಡದಿಂದ ಕೆಲಸ ಮಾಡುವ ನೌಕರರಿಗೆ ಕ್ರೀಡಾಕೂಟ ಒಂದು ಪುನಶ್ಚೇತನ ನೀಡುವ ಕಾರ್ಯಕ್ರಮವಾಗಿದೆ.
ಎಲ್ಲರೂ ಕ್ರೀಡಾ ಮನೋಭಾವದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕು. ಕ್ರೀಡೆಗಳಲ್ಲಿ ಗೆಲ್ಲುವುದು ಮುಖ್ಯವಲ್ಲ. ಭಾಗವಹಿಸಿ ಖುಷಿಯಿಂದ
ಆಟವಾಡುವುದು ಮುಖ್ಯ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಸಹಯೋಗದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದಿನನಿತ್ಯದ ಕರ್ತವ್ಯಗಳು ಮತ್ತು ಒತ್ತಡದಿಂದ ಬಿಡುವು ಮಾಡಿಕೊಂಡು ಎಲ್ಲರೂ ಕೂಡಿ ಆಟ ಆಡಿ, ನಮ್ಮನ್ನು ನಾವು ಪುನಶ್ಚೇತನಗೊಳಿಸಿಕೊಳ್ಳಲು ಈ ಕ್ರೀಡಾಕೂಟ ಒಂದು ಒಳ್ಳೆಯ ಅವಕಾಶವಾಗಿದೆ. ಹಾಗೆಯೇ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿಯೂ ಹುರುಪಿನಿಂದ ಪಾಲ್ಗೊಳ್ಳಬೇಕು ಎಂದರು. ಕ್ರೀಡಾ ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕೆ.ವಿ.ಶಾಂತಕುಮಾರಿ ಮಾತನಾಡಿ, ಈಗಿನ ಮಕ್ಕಳಲ್ಲಿ ಕ್ರೀಡೆಗಳ ಬಗ್ಗೆ ಜ್ಞಾನದ ಕೊರತೆ ಇದೆ. ಅವರು ಆಟ ಆಡುವುದೂ ಕಡಿಮೆ
ಆಗಿದೆ. ಸದಾ ಓದು, ಕಂಪ್ಯೂಟರ್, ಮೊಬೈಲ್ ಮುಂದೆ ಯಾಂತ್ರೀಕೃತವಾಗಿರುತ್ತಾರೆ. ಅವರೂ ಕ್ರೀಡೆಯಲ್ಲಿ ತೊಡಗುವಂತೆ ಪ್ರೇರೇಪಿಸಿ ಪೋಷಕರೂ ಆಡಬೇಕು ಎಂದರು.
ಮಹಾನಗರ ಪಾಲಿಕೆ ಮಹಾಪೌರ ಬಿ.ಜಿ.ಅಜಯಕುಮಾರ್ ಮಾತನಾಡಿ, ಇಂದಿನ ಕ್ರೀಡಾಕೂಟದಲ್ಲಿ ಸಾವಿರಕ್ಕೂ ಮೀರಿ ನೌಕರರು ಕ್ರೀಡೆಯಲ್ಲಿ ಭಾಗವಹಿಸಲು ನೋಂದಾಯಿಸಿರುವುದ ಉತ್ತಮ ಬೆಳವಣಿಗೆ. ಕಾರ್ಯಾಂಗ ಉತ್ತಮವಾಗಿದ್ದರೆ ಆಡಳಿತ ಸುಗಮವಾಗಿ ನಡೆಯುತ್ತದೆ. ಕಾರ್ಯಾಂಗವನ್ನು ಪ್ರತಿನಿಧಿಸುವ ಸರ್ಕಾರಿ ನೌಕರರು ಚಟುವಟಿಕೆಯಿಂದ ಇದ್ದರೆ ಒಂದೆರಡು ತಾಸು ಹೆಚ್ಚು ಕೆಲಸ ಮಾಡುತ್ತಾರೆ. ಈ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಅವಶ್ಯಕ ಎಂದರು.
ಜಿಪಂ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರ್, ತಹಶೀಲ್ದಾರ್ ಬಿ.ಎನ್.ಗಿರೀಶ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಾಲಾಕ್ಷಿ ವೇದಿಕೆಯಲ್ಲಿದ್ದರು. ಕ್ರೀಡಾಕೂಟದಲ್ಲಿ 1035 ನೌಕರರು ವಿವಿಧ ಕ್ರೀಡೆಗಳಿಗೆ ಹೆಸರು ನೋಂದಾಯಿಸಿದ್ದು ಶುಕ್ರವಾರ ಅಥ್ಲೆಟಿಕ್ಸ್, ಕಬಡ್ಡಿ,
ವಾಲಿಬಾಲ್, ಬಾಲ್ ಬ್ಯಾಡ್ಮಿಂಟನ್, ಥ್ರೋಬಾಲ್ ಕ್ರೀಡೆಗಳು ನಡೆದವು.
ಓದಿ : ಸಿಂಗಾನಲ್ಲೂರು ರಸ್ತೆ ಅಭಿವೃದ್ಧಿಗೆ ಕ್ರಮ: ಸಚಿವ ಕೆ.ಎಸ್.ಈಶ್ವರಪ್ಪ ಭರವಸೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್!
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.