13ರಿಂದ ಸಂತ ಸೇವಾಲಾಲ್ ಜಯಂತಿ
ಸೂರಗೊಂಡನಕೊಪ್ಪದಲ್ಲಿ ಸರಳ ಆಚರಣೆಗೆ ತೀರ್ಮಾನ
Team Udayavani, Feb 6, 2021, 2:40 PM IST
ದಾವಣಗೆರೆ: ಸಂತ ಸೇವಾಲಾಲ್ ಅವರ 282ನೇ ಜಯಂತಿ ಉತ್ಸವವನ್ನು ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ಫೆ. 13ರಿಂದ 15ವರೆಗೆ ಮೂರು ದಿನಗಳ ಕಾಲ ಜಿಲ್ಲೆಯ ನ್ಯಾಮತಿ ತಾಲೂಕು ಸೂರಗೊಂಡನಕೊಪ್ಪದಲ್ಲಿ
ಆಚರಿಸಲಾಗುತ್ತಿದ್ದು, ಆಯಾ ಇಲಾಖೆ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಸಮನ್ವಯದೊಂದಿಗೆ ಅಚ್ಚುಕಟ್ಟಾಗಿ ನಿರ್ವಹಿಸಿ
ಉತ್ಸವ ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಕುಡಚಿ ಕ್ಷೇತ್ರದ ಶಾಸಕ ಪಿ. ರಾಜೀವ ಸೂಚಿಸಿದರು.
ಸೂರಗೊಂಡನಕೊಪ್ಪದ ಸಂತ ಸೇವಾಲಾಲ್ ಕ್ಷೇತ್ರದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಂತ ಸೇವಾಲಾಲ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಉತ್ಸವದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿಗಳು ಆಗಮಿಸುವುದು ಖಚಿತವಾಗಿದ್ದು, ಇದಕ್ಕಾಗಿ ಅಗತ್ಯ ಹೆಲಿಪ್ಯಾಡ್ ನಿರ್ಮಾಣ ಆಗಬೇಕು. ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ದುರಸ್ತಿ ಕಾರ್ಯ ಆಗಬೇಕು ಎಂದರು.
ನಾಡಿನ ಹಲವು ಭಾಗಗಳಿಂದ ಕ್ಷೇತ್ರಕ್ಕೆ ಭಕ್ತಾದಿಗಳು ಆಗಮಿಸುವ ನಿರೀಕ್ಷೆಯಿದ್ದು ಉತ್ಸವ ದಿನಗಳಂದು ಹೊನ್ನಾಳಿ, ಹರಿಹರ, ಶಿವಮೊಗ್ಗ, ಶಿಕಾರಿಪುರ, ದಾವಣಗೆರೆ, ಸವಳಂಗ, ಮುಂತಾದ ಕಡೆಗಳಿಂದ ಕೆಎಸ್‌ಆರ್‌ಟಿಸಿಯವರು ವಿಶೇಷ ಬಸ್ ವ್ಯವಸ್ಥೆ ಮಾಡಬೇಕು. ಜಾತ್ರೆಯ ಅವಧಿಯಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಬೆಸ್ಕಾಂ ಕ್ರಮ ವಹಿಸಬೇಕು. ಹೆಚ್ಚು ಜನ ಸೇರುವುದರಿಂದ ಪರಿಸರ ಸ್ವತ್ಛತೆ ಕಾಯ್ದುಕೊಳ್ಳಲು ನಿರ್ಮಿತಿ ಕೇಂದ್ರದಿಂದ ತಾತ್ಕಾಲಿಕ ಶೌಚಾಲಯ, ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಬೇಕು. ಕ್ಷೇತ್ರದಲ್ಲಿ ಸ್ವತ್ಛತೆಗಾಗಿಯೇ ಅಗತ್ಯ
ಸಿಬ್ಬಂದಿಯನ್ನು ನಿಯೋಜಿಸಬೇಕು. ವಾಹನಗಳ ಪಾರ್ಕಿಂಗ್ ವ್ಯವಸ್ಥೆಗೆ ಸ್ಥಳ ಗುರುತಿಸಿ ಸಿದ್ಧಪಡಿಸಬೇಕು. ಸಮರ್ಪಕ ಕುಡಿಯುವ ನೀರು ಪೂರೈಕೆಗಾಗಿ ಟ್ಯಾಂಕರ್‌ಗಳನ್ನು ಒದಗಿಸಬೇಕು ಎಂದು ರಾಜೀವ್ ತಿಳಿಸಿದರು.
ವಸತಿ ಸೌಲಭ್ಯ ಕಲ್ಪಿಸಿ: ಕ್ಷೇತ್ರಕ್ಕೆ ವಿವಿಧ ಭಾಗಗಳಿಂದ ಆಗಮಿಸುವ ಮಾಲಾಧಾರಿಗಳಿಗೆ ದಾವಣಗೆರೆ, ಶಿಕಾರಿಪುರ, ಸವಳಂಗ ಸೇರಿದಂತೆ ಅಗತ್ಯ ಇರುವೆಡೆ ವಿಶ್ರಾಂತಿ ತಾಣ ನಿರ್ಮಿಸಿ, ಅಲ್ಲಿ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು. ಫೆ. 13ರಿಂದ 15ವರೆಗೂ ಕ್ಷೇತ್ರದಲ್ಲಿ ಪ್ರಸಾದ ವಿತರಣೆ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದ್ದು, ಆಹಾರದ ಗುಣಮಟ್ಟ ಪರಿಶೀಲನೆ ಕಾರ್ಯಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಪಿ. ರಾಜೀವ್ ತಿಳಿಸಿದರು.
ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಮಾತನಾಡಿ, ಉತ್ಸವ ಸಂದರ್ಭದಲ್ಲಿ ಕ್ಷೇತ್ರದಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರ ಸ್ಥಾಪಿಸಿ, ಅಗತ್ಯ ಔಷಧ, ವೈದ್ಯರು, ಆಂಬ್ಯುಲೆನ್ಸ್ ಹಾಗೂ ಸಿಬ್ಬಂದಿಯನ್ನು ಆರೋಗ್ಯ ಇಲಾಖೆ ನಿಯೋಜಿಸಬೇಕು. ಕೋವಿಡ್
ಪರೀಕ್ಷೆಗೆ ವ್ಯವಸ್ಥೆಗೊಳಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಡಿವೈಎಸ್‌ಪಿ ಪ್ರಶಾಂತ್ ಮಾತನಾಡಿ, ಉತ್ಸವವನ್ನು ಯಶಸ್ವಿಯಾಗಿಸಲು, ಪೊಲೀಸ್ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಪಾರ್ಕಿಂಗ್, ಬ್ಯಾರಿಕೇಡ್ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದ್ದು, ಜಾತ್ರಾ ಸ್ಥಳದಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿ,
ನಿರ್ವಹಣೆಗೆ ಸಿಬ್ಬಂದಿ ನಿಯೋಜಿಸಲಾಗುವುದು ಎಂದರು.
ಜಿ.ಪಂ. ಸದಸ್ಯ ಸುರೇಂದ್ರನಾಯ್ಕ, ತಾ.ಪಂ ಸದಸ್ಯ ಪೀರ್ಯ ನಾಯ್ಕ, ತಾಂಡಾ ಅಭಿವೃದ್ಧಿ ನಿಗಮದ ನಿರ್ದೇಶಕಿ ಸುನಿತಾಬಾಯಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ನ್ಯಾಮತಿ ತಹಸೀಲ್ದಾರ್ ತನುಜಾ, ಹೊನ್ನಾಳಿ ತಹಶೀಲ್ದಾರ್ ಬಸನಗೌಡರ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ್ ಸೇರಿದಂತೆ ವಿವಿಧ ಗಣ್ಯರು, ಸಮಿತಿಯ ಪದಾಧಿ ಕಾರಿಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಓದಿ : ಟಿಇಎಸ್ 45 2021 ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ಭಾರತೀಯ ಸೇನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.