ಅತಿಥಿ ಉಪನ್ಯಾಸಕರ ಸೇವೆ ಬಳಸಿಕೊಳ್ಳಲು ಮನವಿ
ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳ ನಿಯೋಗ ಸಚಿವ ಅಶ್ವಥ್ ನಾರಾಯಣ ಅವರಿಗೆ ಮನವಿ ಸಲ್ಲಿಸಿತು.
Team Udayavani, Feb 6, 2021, 2:49 PM IST
ದಾವಣಗೆರೆ: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕೆಲಸ ಮಾಡುವ ಎಲ್ಲ ಅತಿಥಿ ಉಪನ್ಯಾಸಕರನ್ನು ಸೇವೆ ಬಳಸಿಕೊಳ್ಳಲು ಕೋರಿ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳ ನಿಯೋಗ ಶುಕ್ರವಾರ ಉಪಮುಖ್ಯಮಂತ್ರಿ
ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿತು.
ಸರ್ಕಾರಿ ಪದವಿ ಕಾಲೇಜುಗಳಲ್ಲಿ ಶೇ.50ರಷ್ಟು ಮಾತ್ರ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವುದರಿಂದ ಅರ್ಧದಷ್ಟು ಅತಿಥಿ ಉಪನ್ಯಾಸಕರು ಉದ್ಯೋಗ ಕಳೆದುಕೊಳ್ಳುವ ಬಗ್ಗೆ ಸಚಿವರಿಗೆ ನಿಯೋಗ ಮನವರಿಕೆ ಮಾಡಿಕೊಟ್ಟಿತು.
ಸಂಘಟನೆಯ ಗೌರವಾಧ್ಯಕ್ಷ, ಹಿರಿಯ ಶಾಸಕ ಆಯನೂರು ಮಂಜುನಾಥ್, ಉಪಾಧ್ಯಕ್ಷೆ ತೇಜಸ್ವಿನಿ ರಮೇಶ್, ಭಾರತಿ ಶೆಟ್ಟಿ, ಅರುಣ ಶಹಪೂರ್, ರವಿಕುಮಾರ್ ವೈ.ಎನ್. ನಾರಾಯಣಸ್ವಾಮಿ ಉಪಸ್ಥಿತಿಯಲ್ಲಿ ಉನ್ನತ ಶಿಕ್ಷಣ ಸಚಿವರು ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳ ಸಮ್ಮುಖದಲ್ಲಿ ಸುದೀರ್ಘ ಚರ್ಚೆ ಮಾಡಿದರು.
ಮನವಿ ಆಲಿಸಿ ಚರ್ಚಿಸಿದ ಸಚಿವರು, ಸೇವೆಯಿಂದ ಹೊರಗುಳಿದ ಶೇ.50ರಷ್ಟು ಉಪನ್ಯಾಸಕರಿಗೆ ನಾಳೆಯಿಂದಲೇ ಜಾರಿಯಾಗುವಂತೆ ಮುಂದುವರಿಕೆಯ ಆದೇಶ ನೀಡಲು ಆಯುಕ್ತರಿಗೆ ಸಚಿವರು ಸೂಚನೆ ನೀಡಿದರು ಎಂದು ಸಂಘಟನೆಯ ಕಾರ್ಯಾಧ್ಯಕ್ಷ ಸಿ.ಕೆ. ಪಾಟೀಲ ತಿಳಿಸಿದ್ದಾರೆ.
ಓದಿ : ಟಿಇಎಸ್ 45 2021 ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ಭಾರತೀಯ ಸೇನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.