13 ಗ್ರಾಮ ಪಂಚಾಯತ್ ಬಿಜೆಪಿ ತೆಕ್ಕೆಗೆ: ರೇಣುಕಾಚಾರ್ಯ
ಹನುಮಸಾಗರ ಗ್ರಾಪಂ ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅಭಿನಂದಿಸಿದರು.
Team Udayavani, Feb 7, 2021, 3:53 PM IST
ಹೊನ್ನಾಳಿ: ತಾಲೂಕಿನ 20 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಇದರಲ್ಲಿ 13 ಗ್ರಾಮ ಪಂಚಾಯಿತಿಗಳು ಬಿಜೆಪಿ ತೆಕ್ಕೆಗೆ ಬಂದಿವೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ತಾಲೂಕಿನ ಹನುಮಸಾಗರ ಗ್ರಾಮ ಪಂಚಾಯಿತಿಗೆ ಶನಿವಾರ ಭೇಟಿ ನೀಡಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿ ಅವರು ಮಾತನಾಡಿದರು. ಬೇಲಿಮಲ್ಲೂರು, ಮುಕ್ತೇನಹಳ್ಳಿ, ಲಿಂಗಾಪುರ, ಎಚ್. ಗೋಪಗೊಂಡನಹಳ್ಳಿ, ಕಮ್ಮಾರಗಟ್ಟೆ, ಕುಂಬಳೂರು, ಬನ್ನಿಕೋಡು, ಕ್ಯಾಸಿನಕೆರೆ, ಹನುಮಸಾಗರ, ಕತ್ತಿಗೆ, ಹುಣಸಗಟ್ಟ, ಕುಂದೂರು, ಬೆನಕನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅಧ್ಯಕ್ಷ, ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಬಿಜೆಪಿ ಅ ಧಿಕಾರದ ಚುಕ್ಕಾಣಿ ಹಿಡಿದಿದೆ ಎಂದರು.
ಇನ್ನೂ 8 ಗ್ರಾಪಂಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಬಾಕಿ ಇದ್ದು, ಅಲ್ಲಿಯೂ ಬಿಜೆಪಿ ಹೆಚ್ಚಿನ ಸಂಖ್ಯೆಯಲ್ಲಿ ಅಧಿ ಕಾರ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ರೇಣುಕಾಚಾರ್ಯ, ನೂತನವಾಗಿ ಆಯ್ಕೆಯಾಗಿರುವ ಗ್ರಾಪಂ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಒಟ್ಟಾಗಿ
ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಮುಂದಾಗಬೇಕು.
ಐದು ವರ್ಷಗಳ ಕಾಲ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕೆಂದು ತಿಳಿಸಿದರು. ಹೊನ್ನಾಳಿ, ನ್ಯಾಮತಿ ಅವಳಿ ತಾಲೂಕಿನ 45 ಗ್ರಾಮ
ಪಂಚಾಯಿತಿಗಳಲ್ಲಿ ಬಿಜೆಪಿ 35ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಲ್ಲಿ ಅಧಿ ಕಾರಕ್ಕೆ ಬರಲಿದೆ. ಕಾಂಗ್ರೆಸ್‌ನವರು ಅವಳಿ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷ 30ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಲ್ಲಿ ಅ ಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಆ ಪಕ್ಷದ ಮುಖಂಡರು ಹೇಳುತ್ತಿದ್ದರು. ಇದೀಗ ಅವಳಿ ತಾಲೂಕಿನ ಜನರು ಕಾಂಗ್ರೆಸ್‌ನವರಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದರು.
ಹನುಮಸಾಗರ ಗ್ರಾಪಂ ಅಧ್ಯಕ್ಷೆ ಬಸಮ್ಮ ನಾಗರಾಜಪ್ಪ, ಉಪಾಧ್ಯಕ್ಷೆ ಶೃತಿ ಮಂಜುನಾಥ್, ಮುಖಂಡರಾದ ಹಾಲೇಶಣ್ಣ, ಮಂಜುನಾಥ್, ತಾಲೂಕು ಬಿಜೆಪಿ ಅಧ್ಯಕ್ಷ ಜೆ.ಕೆ. ಸುರೇಶ್, ನೆಲಹೊನ್ನೆ ಮಂಜುನಾಥ್ ಇದ್ದರು.
ಓದಿ : ಉತ್ತರಾಖಂಡ್ ನಲ್ಲಿ ಹಿಮ ಸ್ಪೋಟ: ಹರಿದ್ವಾರ- ಋಷಿಕೇಶದಲ್ಲಿ ಪ್ರವಾಹ ಭೀತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
MUST WATCH
ಹೊಸ ಸೇರ್ಪಡೆ
ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ
Prabhutva Movie: ಮತದಾನದ ಮಹತ್ವ ತಿಳಿಸುವ ಪ್ರಭುತ್ವ…
Sandalwood: ಕನ್ನಡ ಚಿತ್ರರಂಗಕ್ಕಾಗಿ ಮಿಥ್ ಎಫ್ಎಕ್ಸ್ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.