ಇಂದಿನಿಂದ ರಾಜನಹಳ್ಳಿಯಲ್ಲಿ ವಾಲ್ಮೀಕಿ ಜಾತ್ರೆ ಸಂಭ್ರಮ
|ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮ ಆಯೋಜನೆ |ಲಕ್ಷಾಂತರ ಜನ ಭಾಗಿಯಾಗುವ ನಿರೀಕ್ಷೆ
Team Udayavani, Feb 8, 2021, 2:32 PM IST
ಹರಿಹರ: ಆದಿಗುರು ಮಹರ್ಷಿ ವಾಲ್ಮೀಕಿ ಜಾತ್ರೆಗೆ ತಾಲೂಕಿನ ರಾಜನಹಳ್ಳಿ ಹಾಗೂ ಶ್ರೀಮಠ ಸಂಪೂರ್ಣ ಸಜ್ಜಾಗಿದ್ದು, ಫೆ. 8 ಮತ್ತು 9 ರಂದು ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳ ಆಯೋಜನೆಯಾಗಿದೆ. ನಾಡಿನ ಕೋಟೆ, ಕೊತ್ತಲಗಳನ್ನು ಕಟ್ಟಿದ, ಸ್ವತಃ ಪಾಳೆಗಾರರು, ರಾಜರಾಗಿ ಆಡಳಿತ ನಡೆಸಿದ ನಾಯಕ ಸಮಾಜದವರ ಸ್ವಾಭಿಮಾನದ ಸಂಕೇತವಾಗಿರುವ ವಾಲ್ಮೀಕಿ ಜಾತ್ರೆ ಈ ಬಾರಿ ಸಮುದಾಯದ ಸಾಂಸ್ಕೃತಿಕ ಪರಂಪರೆಯ ಹೆಗ್ಗುರುತಾಗಲಿದೆ ಎಂದು ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಹೇಳಿದ್ದಾರೆ.
ಈ ಹಿಂದಿನ ಎರಡು ಜಾತ್ರೆಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಮೂರನೇ ಜಾತ್ರೆಯಲ್ಲೂ ರಾಜ್ಯದ ಎಲ್ಲಾ ಪ್ರದೇಶದ ನಾಯಕ ಸಮಾಜದವರ ಮಹಾ ಸಮಾಗಮ ಯಶಸ್ವಿಯಾಗಲಿದೆ. ಕೊರೊನಾ ನಿಬಂಧನೆಗಳ ಮಧ್ಯೆಯೂ ಲಕ್ಷಾಂತರ ಜನರು ನಿಯಮಾನುಸಾರ ಭಾಗವಹಿಸಲಿದ್ದಾರೆಂದು ಆಯೋಜನಕರು ತಿಳಿಸಿದ್ದಾರೆ.
ವಾಹನ ನಿಲುಗಡೆಗೆ 50 ಎಕರೆ ಜಾಗ, ಒಮ್ಮೆಗೆ ನಾಲ್ಕು ಹೆಲಿಕ್ಯಾಪ್ಟರ್‌ಗಳಲ್ಲಿ ವಿಐಪಿಗಳು ಆಗಮಿಸಿದರೆ ತೊಂದರೆಯಾಗದಿರಲಿ ಎಂದು ನಾಲ್ಕು ಹೆಲಿಪ್ಯಾಡ್ ಗಳನ್ನು ಸಿದ್ಧಪಡಿಸಲಾಗಿದೆ. ಎರಡೂ ದಿನ 24×7 ಮಾದರಿಯಲ್ಲಿ ಬರೋಬ್ಬರಿ 100 ಕೌಂಟರ್‌ಗಳಲ್ಲಿ ಅನ್ನ ದಾಸೋಹ, ಮಹಿಳೆಯರು, ಪುರುಷರಿಗೆ ಸ್ನಾನ ಗೃಹ, ಶೌಚಾಲಯ ಸೌಲಭ್ಯ ಕಲ್ಪಿಸಲಾಗಿದೆ. 60×60 ಅಡಿ ಅಳತೆಯ ಶಾಶ್ವತ ವೇದಿಕೆ, 250×450 ಅಳತೆಯ ಮಹಾಮಂಟಪ ನಿರ್ಮಿಸಲಾಗಿದೆ. ಮಹಿಳೆಯರಿಗೆ ಪ್ರತ್ಯೇಕ ಸೇರಿದಂತೆ 50 ಸಾವಿರ ಆಸನ ವ್ಯವಸ್ಥೆ, ವೀಕ್ಷಣೆಗಾಗಿ 15 ದೊಡ್ಡ ಗಾತ್ರದ ಎಲ್‌ಇಡಿ ಟಿವಿ ವ್ಯವಸ್ಥೆ ಮಾಡಲಾಗಿದೆ.
ಫೆ. 8 ರಂದು ಬೆಳಿಗ್ಗೆ 9ಕ್ಕೆ ಧ್ವಜಾರೋಹಣದೊಂದಿಗೆ ಜಾತ್ರೆಗೆ ಚಾಲನೆ ದೊರೆಯಲಿದೆ. 10ಕ್ಕೆ ಸರ್ವಧರ್ಮ ಸಾಮೂಹಿಕ ವಿವಾಹ, ಮಧ್ಯಾಹ್ನ 12ಕ್ಕೆ ರಾಜ್ಯ ಮಟ್ಟದ ಶಬರಿ ಮಹಿಳಾ ಜಾಗೃತಿ ಸಮಾವೇಶವಿದೆ. ಮಧ್ಯಾಹ್ನ 3ಕ್ಕೆ ರಾಜ್ಯ ಎಸ್‌ಟಿ ನೌಕರರ ಸಮಾವೇಶ, ಸಂಜೆ 5ಕ್ಕೆ ಬುಡಕಟ್ಟು ಸಮುದಾಯಗಳ ಸಂಘಟನೆ ಮತ್ತು ಸವಾಲುಗಳ ಸಮಾವೇಶ, ರಾತ್ರಿ 7ಕ್ಕೆ ರಾಷ್ಟ್ರಮಟ್ಟದ ಕಲಾತಂಡಗಳ ಸಾಂಸ್ಕೃತಿಕ ಕಾರ್ಯಕ್ರಮವಿದ್ದು,
ರಾತ್ರಿ 11ಕ್ಕೆ “ಸಂಪೂರ್ಣ ರಾಮಾಯಣ’ ನಾಟಕ ಪ್ರದರ್ಶನವಿದೆ.
ಫೆ. 9 ರಂದು ಬೆಳಿಗ್ಗೆ 7 ರಿಂದ 8ರವರೆಗೆ ಸ್ವತ್ಛತಾ ಕಾರ್ಯಕ್ರಮ. 9ಕ್ಕೆ ಆದಿಕವಿ ಮಹರ್ಷಿ ವಾಲ್ಮೀಕಿ ರಥೋತ್ಸವ, 10ಕ್ಕೆ ವಿವಿಧ ಮಠಾ ಧೀಶರ ಸಾನ್ನಿಧ್ಯದಲ್ಲಿ ಧರ್ಮಸಭೆ ಆಯೋಜನೆಯಾಗಿದೆ. ಮಧ್ಯಾಹ್ನ 12ಕ್ಕೆ ಬೃಹತ್ ಜನ ಜಾಗೃತಿ ಸಮಾವೇಶ ನಡೆಯಲಿದ್ದು, ಸಿಎಂ ಯಡಿಯೂರಪ್ಪ, ಡಿಸಿಎಂ ಡಾ| ಅಶ್ವತ್ಥನಾರಾಯಣ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಚಿವ ಎಚ್.ಡಿ. ರೇವಣ್ಣ, ಸಚಿವರಾದ ರಮೇಶ ಜಾರಕಿಹೊಳಿ, ಬಿ. ಶ್ರೀರಾಮುಲು, ಬಸವರಾಜ ಬೊಮ್ಮಾಯಿ, ಆನಂದ್ ಸಿಂಗ್ ಮೊದಲಾದವರು ಭಾಗವಹಿಸುವರು. ಚಲನಚಿತ್ರ ನಟ ಸುದೀಪ್ ಅವರಿಗೆ “ವಾಲ್ಮೀಕಿ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.