ಗದ್ದುಗೆ ಗುದ್ದಾಟದಲ್ಲಿ ಯಾರಿಗೆ ಜಯದ ಹಾರ?
24ಕೆ ಮಹಾನಗರ ಪಾಲಿಕೆ ಮೇಯರ್-ಉಪ ಮೇಯರ್ ಚುನಾವಣೆ
Team Udayavani, Feb 8, 2021, 2:43 PM IST
ದಾವಣಗೆರೆ: ಮಹಾನಗರ ಪಾಲಿಕೆ ಮೇಯರ್-ಉಪ ಮೇಯರ್ ಚುನಾವಣೆ ಫೆ. 24 ರಂದು ನಡೆಯಲಿದ್ದು,
ಕುತೂಹಲಕ್ಕೆ ಕಾರಣವಾಗಿದೆ.
ಮಹಾನಗರ ಪಾಲಿಕೆ ಮೇಯರ್- ಉಪ ಮೇಯರ್ ಯಾರಾಗಬಹುದು ಎಂಬುದಕ್ಕಿಂತಲೂ ಮೇಯರ್-ಉಪ ಮೇಯರ್ ಸ್ಥಾನ ಆಡಳಿತಾರೂಢ ಬಿಜೆಪಿಗೆ ಇಲ್ಲವೇ ಪ್ರತಿ ಪಕ್ಷ ಕಾಂಗ್ರೆಸ್‌ಗೆ ದೊರೆಯುವುದೇ ಎಂಬ ಕೌತುಕದ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಕಾರಣ ಮತದಾರರ ಪಟ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯರ ಹೆಸರು ಸೇರ್ಪಡೆ ವಿಷಯವಾಗಿ ಬಿಜೆಪಿ, ಕಾಂಗ್ರೆಸ್ ಅನುಸರಿಸುತ್ತಿರುವ ರಾಜಕೀಯ ನಡೆ.
ಮೇಯರ್- ಉಪ ಮೇಯರ್ ಪಟ್ಟಕ್ಕಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಜಿದ್ದಾಜಿದ್ದಿ ನಡೆಸುತ್ತಿವೆ. ಕಳೆದ ಬಾರಿ ಚುನಾವಣಾ ಸಂದರ್ಭದಲ್ಲಿ ಬಿಜೆಪಿ
ಅಕ್ರಮವಾಗಿ ಮತದಾರರ ಪಟ್ಟಿಯಲ್ಲಿ 7 ಜನ ವಿಧಾನ ಪರಿಷತ್ ಸದಸ್ಯರ ಹೆಸರು ಸೇರಿಸಿರುವ ಜೊತೆಗೆ ಈಗ ಸಚಿವ ಆರ್. ಶಂಕರ್, ವಿಧಾನ ಪರಿಷತ್ ಸದಸ್ಯ ಚಿದಾನಂದ ಗೌಡರ ಹೆಸರು ಸೇರಿಸಿದೆ ಎಂಬುದು ಕಾಂಗ್ರೆಸ್‌ನ ಪ್ರಬಲ ಆರೋಪ.
ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ ಹೆಸರು ಸೇರಿಸುವ ಮಾತೇ ಇಲ್ಲ. ಪರಿಷತ್ ಸದಸ್ಯರು ಅಧಿಕೃತ ಹಾಗೂ ಸಂವಿಧಾನತ್ಮಕವಾಗಿಯೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಂಡಿದ್ದಾರೆ. ಮತದಾರರ ಪಟ್ಟಿಯಲ್ಲಿ ಪರಿಷತ್ ಸದಸ್ಯರ ಹೆಸರು ಸೇರ್ಪಡೆ ಚುನಾವಣಾಧಿಕಾರಿಗಳಿಗೆ ಸಂಬಂಧಿತ ವಿಷಯ ಎನ್ನುವುದು ಬಿಜೆಪಿ ವಾದ. ಮೇಯರ್- ಉಪ ಮೇಯರ್ ಚುನಾವಣಾ ಮತದಾರರ ಪಟ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯರ ಹೆಸರು ಸೇರ್ಪಡೆ ವಿಷಯವಾಗಿ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಮಾತ್ರವಲ್ಲ, ಉಚ್ಚ ನ್ಯಾಯಾಲಯದ ಮೊರೆ ಹೋಗಿದೆ. ಹಾಗಾಗಿ ಮೇಯರ್-ಉಪ ಮೇಯರ್ ಚುನಾವಣೆ ಕುತೂಹಲ ಮೂಡಿಸಿದೆ. ಮಹಾನಗರ ಪಾಲಿಕೆಯಲ್ಲಿ ಅಧಿಕಾರ
ಕಳೆದುಕೊಂಡಿರುವ ಕಾಂಗ್ರೆಸ್ ಈ ಬಾರಿ ಮೇಯರ್-ಉಪ ಮೇಯರ್ ಪಟ್ಟ ಗಿಟ್ಟಿಸಿಕೊಳ್ಳುವ ನಿಟ್ಟಿನಲ್ಲಿ ಕಾನೂನು ಹೋರಾಟದ ಜೊತೆಗೆ ಎಲ್ಲಾ
ರಾಜಕೀಯ ತಂತ್ರಗಳನ್ನೂ ಅನುಸರಿಸುತ್ತಿದೆ. ಏನಾದರೂ ಸರಿ, ಮೇಯರ್-ಉಪ ಮೇಯರ್‌ಗಿರಿ ದಕ್ಕಿಸಿಕೊಳ್ಳಲೇಬೇಕು ಎನ್ನುವ ನಿಟ್ಟಿನಲ್ಲಿ ಶತ ಪ್ರಯತ್ನ ನಡೆಸಿದೆ.
ಒಟ್ಟಾರೆ 58 ಜನರು ಮೇಯರ್-ಉಪ ಮೇಯರ್ ಚುನಾವಣೆಗೆ ಮತದಾನ ಮಾಡಲಿದ್ದಾರೆ. ಮೇಯರ್-ಉಪ ಮೇಯರ್ ಸ್ಥಾನಕ್ಕೇರಲು 30 ಮತ ಪಡೆಯಬೇಕಾಗುತ್ತದೆ. ಸದ್ಯ ಬಿಜೆಪಿ ಆಗತ್ಯ ಸಂಖ್ಯಾಬಲ ಹೊಂದಿದೆ. ಹಾಗಾಗಿ ಈ ಬಾರಿಯೂ ಬಿಜೆಪಿಯೇ ಮೇಯರ್-ಉಪ ಮೇಯರ್ ಪಟ್ಟ ಅಲಂಕರಿಸಬಹುದು ಎಂಬ ಲೆಕ್ಕಾಚಾರ ಇದೆ. ಆದರೆ ಮೇಯರ್-ಉಪ ಮೇಯರ್ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್‌ನ ನಡೆ ಬಹಳ ಪ್ರಮುಖ ನಿರ್ಣಾಯಕ ಪಾತ್ರ ವಹಿಸಲಿದೆ. ಕಾಂಗ್ರೆಸ್‌ನ ಮುಂದಿನ ರಾಜಕೀಯ ನಡೆ ಏನು ಎಂಬುದು ಚಿದಂಬರ ರಹಸ್ಯವಾಗಿದೆ. ಒಟ್ಟಾರೆ ಬಿಜೆಪಿ-ಕಾಂಗ್ರೆಸ್ ರಣತಂತ್ರ ರೂಪಿಸುವಲ್ಲಿ ನಿರತವಾಗಿವೆ. ಯಾವ ಪಕ್ಷದ ತಂತ್ರಗಾರಿಕೆ ಯಶ ಕಾಣಲಿದೆ ಎಂಬುದಕ್ಕೆ 24 ರವರೆಗೆ ಕಾಯಬೇಕಾಗಿದೆ.
*ರಾ. ರವಿಬಾಬು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.