Davanagere; ಟಿಪ್ಪರ್ ಹರಿದು ಎರಡು ವರ್ಷದ ಮಗು ಸ್ಥಳದಲ್ಲೇ ಮೃತ್ಯು
Team Udayavani, Jun 21, 2023, 6:04 PM IST
ದಾವಣಗೆರೆ: ಟಿಪ್ಪರ್ ಹರಿದ ಪರಿಣಾಮ ಎರಡು ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಬುಧವಾರ ಹಳೇ ಕುಂದುವಾಡದಲ್ಲಿ ಸಂಭವಿಸಿದೆ.
ಕುಂದುವಾಡ ಗ್ರಾಮದ ಗಣೇಶ್ ಅವರ ಪುತ್ರಿ ಚರಸ್ವಿ ಸಾವನ್ನಪ್ಪಿದ ಬಾಲಕಿ. ಅಂಗನವಾಡಿ ಮುಗಿದ ನಂತರ ಮಧ್ಯಾಹ್ನ ತನ್ನ ಅಜ್ಜಿಯೊಂದಿಗೆ ಮನೆಗೆ ಬರುತ್ತಿದ್ದ ಬಾಲಕಿ ಮೇಲೆ ಟಿಪ್ಪರ್ ಹರಿದಿದೆ. ತಲೆ ಮೇಲೆಯೇ ಚಕ್ರ ಹರಿದ ರಭಸಕ್ಕೆ ಬಾಲಕಿ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಅಜಾಗರೂಕತೆಯಿಂದ ಲಾರಿ ಚಾಲನೆ ಮಾಡಿದ ಪರಿಣಾಮ ಪುಟ್ಟ ಜೀವ ಬಲಿಯಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಗ್ರಾಮಸ್ಥರು ಕೆಲ ಕಾಲ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಲಾರಿ ಚಾಲಕ, ಮಾಲಕನ ಬಂಧನಕ್ಕೆ ಒತ್ತಾಯಿಸಿದ್ದಾರೆ. ದಕ್ಷಿಣ ಸಂಚಾರಿ ಠಾಣೆ, ವಿದ್ಯಾನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.