ಶಿವಣ್ಣ , ರಾಘಣ್ಣನ ಜತೆ ಸಿನಿಮಾ ಮಾಡೋ ಆಸೆ: ಪುನೀತ್‌

Team Udayavani, Mar 4, 2019, 11:40 AM IST

4-march-17.jpg

ದಾವಣಗೆರೆ: ಶಿವಣ್ಣ (ಶಿವರಾಜ್‌ಕುಮಾರ್‌), ರಾಘಣ್ಣ (ರಾಘವೇಂದ್ರ ರಾಜ್‌ಕುಮಾರ್‌) ಅವರೊಟ್ಟಿಗೆ ಸಿನಿಮಾ ಮಾಡಬೇಕು ಎಂಬ ಆಸೆ ಬಹಳ ದಿನಗಳಿಂದ ಇದೆ. ಮೂವರಿಗೂ ಒಪ್ಪುವ ಒಳ್ಳೆಯ ಕಥೆಗಾಗಿ ಕಾಯುತ್ತಿದ್ದೇವೆ ಎಂದು ಚಿತ್ರನಟ ಪುನೀತ್‌ ರಾಜ್‌ಕುಮಾರ್‌ ಹೇಳಿದರು.

ಭಾನುವಾರ ತಮ್ಮ ಅಭಿನಯದ ‘ನಟಸಾರ್ವಭೌಮ’ ಚಿತ್ರದ ರೋಡ್‌ ಶೋನಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮೂವರು ಸಹೋದರರು ಒಂದಾಗಿ ಸಿನಿಮಾ ಮಾಡಬೇಕು ಎಂಬ ಆಸೆ ಇದೆ. ಆದರೆ, ಅದಕ್ಕೆ ಇನ್ನೂ ಸಮಯ ಕೂಡಿ ಬಂದಿಲ್ಲ. ಒಳ್ಳೆಯ ಕಥೆಗಾಗಿ ಕಾಯುತ್ತಿದ್ದೇವೆ. ಖಂಡಿತವಾಗಿಯೂ ಮೂವರು ಒಂದು ಚಿತ್ರ ಮಾಡುತ್ತೇವೆ ಎಂದರು.

ನಟಸಾರ್ವಭೌಮ… ದಾವಣಗೆರೆಯಲ್ಲಿ 25 ದಿನ ಪೂರೈಸಿದೆ. ಒಂದು ಚಿತ್ರದ ಗೆಲುವಿನ ನಂತರ ಚಿತ್ರವನ್ನು ಗೆಲ್ಲಿಸಿದ ಅಭಿಮಾನಿಗಳನ್ನು ಕಂಡು ಖುಷಿ ಹಂಚಿಕೊಳ್ಳುವುದು ಬಹಳ ಸಂತೋಷದ ವಿಚಾರ. ಹಾವೇರಿ, ರಾಣೆಬೆನ್ನೂರುನಲ್ಲಿ ರೋಡ್‌ ಶೋ ಮಾಡಿ, ದಾವಣಗೆರೆಗೆ ಬಂದಿದ್ದೇವೆ ಎಂದು ತಿಳಿಸಿದರು.

ದಾವಣಗೆರೆ ನನ್ನ ಫೆವರೇಟ್‌ ಪ್ಲೇಸ್‌. ದಾವಣಗೆರೆ ಅಂದರೆ ಸಖತ್‌ ಇಷ್ಟ. ಈ ಹಿಂದೆ ದೊಡ್ಮನೆ ಹುಡುಗ… ಚಿತ್ರ ಬಿಡುಗಡೆ ಸಂದರ್ಭದಲ್ಲಿ ದಾವಣಗೆರೆಗೆ ಬಂದಿದ್ದೆ. ಅಪ್ಪಾಜಿ(ಡಾ| ರಾಜ್‌ ಕುಮಾರ್‌) ಯಾವಾಗಲೂ ದಾವಣಗೆರೆ ಬಗ್ಗೆ ಹೇಳುತ್ತಿದ್ದರು. ಅಪ್ಪಾಜಿ ಜೊತೆಗೂ ದಾವಣಗೆರೆಗೆ ಬಂದಿದ್ದೇನೆ ಎಂದು ಸ್ಮರಿಸಿದರು.

ಮಂಡ್ಯದಲ್ಲಿ ಚುನಾವಣೆಗೆ ಯಾರು ಸ್ಪರ್ಧಿಸಬೇಕು, ನಟಿ ಸುಮಲತಾ ಅವರಿಗೆ ಬೆಂಬಲ ನೀಡುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪುನೀತ್‌ ರಾಜ್‌ಕುಮಾರ್‌, ನಟ, ನಟಿಯರ ರಾಜಕೀಯದ ಪ್ರವೇಶದ ಬಗ್ಗೆ ನಾನು ಏನೂ ಹೇಳೊಲ್ಲ, ನಾನೊಬ್ಬ ನಟ ಅಷ್ಟೆ. ನಮ್ಮ ಕುಟುಂಬ ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಹೋಗಿಲ್ಲ ಎಂದು ಹೇಳಿದರು.

ಕನ್ನಡದ ನಟ-ನಟಿಯರು ಬೇರೆ ಭಾಷಾ ಚಿತ್ರಗಳಲ್ಲಿ ಅಭಿನಯಿಸುತ್ತಿರುವುದಕ್ಕೆ ಇಲ್ಲಿ ಅವಕಾಶಗಳ ಕೊರತೆ ಇದೆಯಾ ಎಂಬ ಪ್ರಶ್ನೆಗೆ, ಅದು ಪ್ರೊಡಕ್ಷನ್‌ ಮೇಲೆ ನಿರ್ಧಾರವಾಗುತ್ತದೆ. ಅವಕಾಶ ಸಿಕ್ಕ ಕಡೆ ನಟರು ಹೋಗುತ್ತಾರೆ ಎಂದರು.

ತಮ್ಮ ಮುಂದಿನ ಚಿತ್ರ ಯುವರತ್ನ… ಚಿತ್ರೀಕರಣ ಹುಬ್ಬಳ್ಳಿಯಲ್ಲಿ ನಡೆಯುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ನಟಿ ವಿಜಯಲಕ್ಷ್ಮಿಗೆ ಸಹಾಯದ ಕುರಿತಂತೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಲಿಲ್ಲ. ನಿರ್ದೇಶಕ ಪವನ್‌ ಒಡೆಯರ್‌, ಶಿವರಾಜ್‌ಕುಮಾರ್‌ ಅಭಿಮಾನಿ ಬಳಗದ ಜಿಲ್ಲಾ ಅಧ್ಯಕ್ಷ ಯೋಗೇಶ್‌, ಗೌರವಾಧ್ಯಕ್ಷ ಬಿ. ವಾಸುದೇವ್‌, ಕಾರ್ಯದರ್ಶಿ ಪ್ರಕಾಶ್‌, ದುರ್ಗೇಶ್‌ ಇತರರು ಇದ್ದರು.

ಟಾಪ್ ನ್ಯೂಸ್

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.