ವಿಜಯೇಂದ್ರ ರಾಜಕಾರಣಕ್ಕೆ ಹಾನಗಲ್ಲ ಬುನಾದಿ?
ಪುತ್ರನಿಗೆ ರಾಜಕೀಯ ಭವಿಷ್ಯ ಕಲ್ಪಿಸಲು ಬಿಎಸ್‌ವೈ ಚಿಂತನೆ
Team Udayavani, Jul 27, 2021, 6:12 PM IST
ಎಚ್.ಕೆ. ನಟರಾಜ
ದಾವಣಗೆರೆ: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಇತ್ತ ಹಾವೇರಿ ಜಿಲ್ಲೆಯ ರಾಜಕಾರಣದಲ್ಲಿಯೂ ಭಾರೀ ಸಂಚಲನ ಶುರುವಾಗಿದೆ. ಅವರ ರಾಜ್ಯ ರಾಜಕೀಯದ ವಾರಸುದಾರರಾಗಿ ಪುತ್ರ ವಿಜಯೇಂದ್ರ ಹಾನಗಲ್ಲ ಕ್ಷೇತ್ರದ ಮೂಲಕ ಅಧಿಕಾರ ರಾಜಕಾರಣಕ್ಕೆ ಪ್ರವೇಶ ಮಾಡಲಿದ್ದಾರೆ ಎಂಬ ಸುದ್ದಿ ಸದ್ದು ಮಾಡುತ್ತಿದೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಬಂದಾಗ ಯಡಿಯೂರಪ್ಪ ಅವರು ಬಿಜೆಪಿ ಹೈಕಮಾಂಡ್‌ನೊಂದಿಗೆ ಕೆಲ ಒಪ್ಪಂದ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಆ ಪ್ರಕಾರ ಪುತ್ರ ವಿಜಯೇಂದ್ರ ಅವರಿಗೆ ಸಿ.ಎಂ. ಉದಾಸಿ ನಿಧನಾನಂತರ ತೆರವಾಗಿರುವ ಹಾನಗಲ್ಲ ವಿಧಾನಸಭೆ ಕ್ಷೇತ್ರದ ಟಿಕೆಟ್ ನೀಡಿ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಬೇಕು. ಬಳಿಕ ಅವರಿಗೆ ಉಪಮುಖ್ಯಮಂತ್ರಿ ಇಲ್ಲವೇ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕು ಎಂಬ ಮಾತುಕತೆ ಆಗಿದೆ. ಇದರ ಪ್ರಕಾರ ವಿಜಯೇಂದ್ರ ಹಾನಗಲ್ಲ ಕ್ಷೇತ್ರದಿಂದ ಟಿಕೆಟ್ ಪಡೆದು ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಪಕ್ಷದ ಮುಖಂಡರಿಂದಲೇ ಕೇಳಿಬರುತ್ತಿದೆ. ಹೀಗಾಗಿ ಹಾವೇರಿ ರಾಜಕಾರಣ ಮತ್ತೆ ಗರಿಗೆದರಿದೆ.
ಹಾವೇರಿ ಪ್ರೀತಿ: ಯಡಿಯೂರಪ್ಪ ಅವರಿಗೆ ಮೊದಲಿನಿಂದಲೂ ಹಾವೇರಿ ಜಿಲ್ಲೆಯೊಂದಿಗೆ ಅವಿನಾಭಾವ ಸಂಬಂಧವಿದೆ. ಜಿಲ್ಲೆಯಲ್ಲಿ ಯಡಿಯೂರಪ್ಪ ಬೆಂಬಲಿಗ ಶಾಸಕರು, ಮುಖಂಡರ ಪ್ರಭಾವವೂ ಬಲಿಷ್ಠವಾಗಿದೆ. ಇನ್ನು ಹಾನಗಲ್ಲ ಕ್ಷೇತ್ರ ಶಿವಮೊಗ್ಗದ ಗಡಿ ಕ್ಷೇತ್ರವೂ ಆಗಿದೆ. ಇದೇ ಕಾರಣಕ್ಕಾಗಿ ಯಡಿಯೂರಪ್ಪ ಅವರು ಈ ಹಿಂದೆ ಬಿಜೆಪಿಯಿಂದ ಹೊರಬಂದಾಗ ಹಾವೇರಿ ಜಿಲ್ಲೆಯಿಂದಲೇ ತಮ್ಮ ಕರ್ನಾಟಕ ಜನತಾ ಪಕ್ಷಕ್ಕೆ ಚಾಲನೆ ನೀಡಿದ್ದರು. ಈ ಎಲ್ಲ ಕಾರಣಗಳಿಂದಾಗಿ ಪುತ್ರ ವಿಜಯೇಂದ್ರ ಅವರ ರಾಜಕೀಯ ಭವಿಷ್ಯಕ್ಕೆ ಹಾನಗಲ್ಲ ಕ್ಷೇತ್ರವನ್ನೇ ಆಯ್ಕೆ ಮಾಡಿಕೊಳ್ಳಲು ಬಯಸಿದ್ದಾರೆ. ಈ ಬಗ್ಗೆ ಈಗಾಗಲೇ ಹೈಕಮಾಂಡ್ ಮನವೊಲಿಸಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ವಿರೋಧದ ಸಾಧ್ಯತೆ ಕಡಿಮೆ: ಇನ್ನು ಹಾನಗಲ್ಲ ವಿಧಾನಸಭೆ ಕ್ಷೇತ್ರದಲ್ಲಿ ಸಿ.ಎಂ. ಉದಾಸಿ ಬಳಿಕ ಅವರ ಸ್ಥಾನ ತುಂಬಬಹುದಾದ ಮೊದಲನೇ ಹಂತದ ಪ್ರಬಲ ನಾಯಕರು ಪಕ್ಷದಲ್ಲಿಲ್ಲ. ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಒಂದು ಡಜನ್ ಮೀರಿದ್ದರೂ ಅವರ್ಯಾರೂ ಹೆಚ್ಚಿನ ವರ್ಚಸ್ಸು ಹೊಂದಿಲ್ಲ. ಹೀಗಾಗಿ ಕ್ಷೇತ್ರದಲ್ಲಿ ವಿಜಯೇಂದ್ರ ಅವರನ್ನು ಕಣಕ್ಕಿಳಿಸಿದರೆ ಸ್ಥಳೀಯವಾಗಿ ಪ್ರಬಲ ವಿರೋಧ ಎದುರಾಗದು.
ಇನ್ನು ಸಿ.ಎಂ. ಉದಾಸಿಯವರ ಕುಟುಂಬದಲ್ಲಿಯೇ ಒಬ್ಬರಿಗೆ ಟಿಕೆಟ್ ಕೊಡುವ ಬಗ್ಗೆ ಚರ್ಚೆ ನಡೆದರೆ, ಸಂಸದ ಶಿವಕುಮಾರ್ ಉದಾಸಿಯವರ ಪತ್ನಿ ರೇವತಿ ಹೆಸರು ಪ್ರಸ್ತಾಪವಾಗಬಹುದು. ಆದರೆ ವಿಜಯೇಂದ್ರ ಕ್ಷೇತ್ರಕ್ಕೆ ಬರುತ್ತಾರೆಂದರೆ ಉದಾಸಿ ಕುಟುಂಬದಿಂದಲೂ ವಿರೋಧ ಎದುರಾಗಲಾರದು.
ಆದ್ದರಿಂದ ಯಡಿಯೂರಪ್ಪ ಅವರು ತಾವು ಶಾಸಕ ಸ್ಥಾನದಲ್ಲಿರುವಾಗಲೇ ಪುತ್ರ ವಿಜಯೇಂದ್ರ ಅವರಿಗೆ ಅಧಿಕಾರ ರಾಜಕಾರಣದಲ್ಲಿ ತರಲು ಹಾನಗಲ್ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿರುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ ಎನ್ನುತ್ತಾರೆ ಜಿಲ್ಲೆಯ ರಾಜಕೀಯ ವಿಶ್ಲೇಷಕರು. ಹೀಗಾಗಿ ಬಿಜೆಪಿ ಹೈಕಮಾಂಡ್ ಕೈಗೊಳ್ಳುವ ನಿರ್ಧಾರದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.