Davanagere; ಮನಪಾದಲ್ಲಿ ಕಪ್ಪುಪಟ್ಟಿ: ಬಿಜೆಪಿ ಸದಸ್ಯರ ವಿರುದ್ಧ ಕ್ರಮಕ್ಕಾಗಿ ಪ್ರತಿಭಟನೆ
Team Udayavani, Feb 28, 2024, 10:12 PM IST
ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ರಾಷ್ಟ್ರಗೀತೆ, ನಾಡಗೀತೆ ಹಾಡುವ ಸಂದರ್ಭದಲ್ಲಿ ಕಪ್ಪುಪಟ್ಟಿ ಧರಿಸಿದ್ದ ಬಿಜೆಪಿ ಸದಸ್ಯರ ವಿರುದ್ಧ ಕ್ರಮ ತೆಗೆದುಕೊಳ್ಳುವ ಜೊತೆಗೆ ಸಭೆಯಿಂದ ಹೊರಕ್ಕೆ ಹಾಕಬೇಕು ಎಂದು ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು.
ರಾಷ್ಟ್ರಗೀತೆ ಮತ್ತು ನಾಡಗೀತೆ ಹಾಡುವಾಗ ಕಪ್ಪುಪಟ್ಟಿ ಕಟ್ಟಿಕೊಳ್ಳುವಂತಿಲ್ಲ. ಆದರೂ, ಬಿಜೆಪಿ ಸದಸ್ಯರು ಕಪ್ಪು ಪಟ್ಟಿ ಧರಿಸುವ ಮೂಲಕ ರಾಷ್ಟ್ರಗೀತೆ, ನಾಡಗೀತೆಗೆ ಅಪಮಾನ ಮಾಡಿರುವುದು ಅತ್ಯಂತ ಖಂಡನೀಯ. ಅಪಮಾನ ಮಾಡಿರುವ ಬಿಜೆಪಿ ಸದಸ್ಯರನ್ನು ಸಭೆಯಿಂದ ಹೊರ ಹಾಕಬೇಕು ಎಂದು ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದರು.
ತಾವು ನಾಡಗೀತೆ, ರಾಷ್ಟ್ರಗೀತೆ ಹಾಡುವಾಗ ಕಪ್ಪು ಪಟ್ಟಿ ಧರಿಸಿರಲಿಲ್ಲ ಎಂದು ಬಿಜೆಪಿ ಸದಸ್ಯರು ಹೇಳಿದರು. ಕಪ್ಪು ಪಟ್ಟಿ ಧರಿಸಿರುವುದಕ್ಕೆ ವೀಡಿಯೋ ಸಾಕ್ಷಿ ಇದೆ ಎಂದು ಕಾಂಗ್ರೆಸ್ ಸದಸ್ಯರು ಹೇಳಿದರು.
ರಾಜ್ಯ ಸಭಾ ಸದಸ್ಯರಾಗಿ ನಾಸೀರ್ ಅಹಮದ್ ಆಯ್ಕೆ ಯಾದ ನಂತರ ವಿಜಯೋತ್ಸವ ಆಚರಿಸುವಾಗ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದು ಖಂಡನೀಯ. ಅದರ ವಿರುದ್ಧ ಖಂಡನಾ ನಿರ್ಣಯ ತೆಗೆದುಕೊಳ್ಳಬೇಕು ಎಂದು ಬಿಜೆಪಿ ಸದಸ್ಯರು ಒತ್ತಾಯಿಸಿದ ಘಟನೆಯೂ ನಡೆಯಿತು.
ಮಾತಿನ ಚಕಮಕಿ ನಡೆದ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯರೊಬ್ಬರು ಅವಾಚ್ಯ ಶಬ್ದ ಬಳಸಿದರು. ಘಟನೆ ಬಯ ತನಿಖೆ ನಡೆಯುತ್ತಿದೆ. ಯಾರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೋ ಅಂತಹವರನನ್ನು ಗಲ್ಲಿಗೆ ಏರಿಸಬೇಕು ಎಂದು ಒತ್ತಾಯಿಸಿದರು.
ರಾಷ್ಟ್ರದ್ರೋಹ ಹೇಳಿಕೆ ನೀಡಿದವರ ಪರ ಇರುವವರಿಗೆ ಧಿಕ್ಕಾರ ಎಂದು ಬಿಜೆಪಿ ಸದಸ್ಯರು ಕೂಗಿದರು. ರಾಷ್ಟ್ರಗೀತೆಗೆ ಅಪಮಾನ ಮಾಡಿದವರಿಗೆ ಧಿಕ್ಕಾರ ಎಂದು ಕಾಂಗ್ರೆಸ್ ಸದಸ್ಯರು ಕೂಗಿದರು. ಸಾಕಷ್ಟು ಗದ್ದಲ ಏರ್ಪಟ್ಟಿದ್ದರಿಂದ ಮೇಯರ್ ವಿನಾಯಕ ಪೈಲ್ವಾನ್ ಸಭೆಯನ್ನು ಕೆಲ ಕಾಲ ಮುಂದೂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.