Davanagere ಅಪ್ರಾಪ್ತನಿಂದ ಆಟೋ ಚಾಲನೆ; ಮಾಲಿಕನಿಗೆ ದಂಡ ವಿಧಿಸಿದ ನ್ಯಾಯಾಲಯ
Team Udayavani, Jul 29, 2024, 10:10 PM IST
ದಾವಣಗೆರೆ: ಅಪ್ರಾಪ್ತ ಬಾಲಕನ ವಾಹನ ಚಲಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ದಾವಣಗೆರೆ ನ್ಯಾಯಾಲಯ ವಾಹನ ಮಾಲಿಕನಿಗೆ 26 ಸಾವಿರ ರೂ. ದಂಡ ವಿಧಿಸಿದೆ.
ಆಟೋರಿಕ್ಷಾ ಮಾಲಿಕ ರಹೀಂ ಎಂಬುವವರಿಗೆ 26 ಸಾವಿರ ರೂ. ದಂಡ ವಿಧಿಸಲಾಗಿದೆ. ನಗರದಲ್ಲಿ ಅಪ್ರಾಪ್ತರು ವಾಹನ ಚಾಲನೆ ಮಾಡುವುದನ್ನು ತಡೆಯಲು ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಅವರ ಮಾರ್ಗದರ್ಶನ ಮತ್ತು ಸೂಚನೆಯಂತೆ ದಾವಣಗೆರೆ ಟ್ರಾಫಿಕ್ ಪೊಲೀಸ್ ಸಿಪಿಐ ನಲವಾಗಲು ಮಂಜುನಾಥ್ ನೇತೃತ್ವದಲ್ಲಿ ಉತ್ತರ ಸಂಚಾರ ಠಾಣೆ ಪಿಎಸ್‌ಐ ಗಳೊಂದಿಗೆ ವಿಶೇಷ ಕಾರ್ಯಾಚರಣೆ ಕೈಗೊಂಡ ಸಮಯದಲ್ಲಿ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ರಹೀಮ್ ಎಂಬ ವ್ಯಕ್ತಿ ವಿಮೆ ಚಾಲ್ತಿ ಇಲ್ಲದ ತನ್ನ ಆಟೋರಿಕ್ಷಾ ವನ್ನು ಅಪ್ರಾಪ್ತ ವಯಸ್ಸಿನ (17 ವರ್ಷ) ಬಾಲಕನಿಗೆ ಚಲಾಯಿಸಲು ನೀಡಿದ್ದು ಪತ್ತೆಯಾಗಿದ್ದು ರಿಕ್ಷಾವನ್ನು ಜಪ್ತಿ ಪಡಿಸಿಕೊಂಡು ದಾವಣಗೆರೆ ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಆಟೋ ರಿಕ್ಷಾ ಮಾಲಿಕ ರಹೀಂ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಆಟೋವನ್ನು ಅಪ್ರಾಪ್ತ ವಯಸ್ಕನಿಗೆ ಚಾಲನೆ ಮಾಡಲು ಕೊಟ್ಟಿದ್ದಕ್ಕೆ ಆರೋಪಿಗೆ 26 ಸಾವಿರ ರೂಪಾಯಿ ದಂಡ ವಿಧಿಸಿದೆ.
ಇದೇ ರೀತಿ ಸಂಚಾರ ನಿಯಮ ಉಲ್ಲಂಘನೆ ಮಾಡುವ ಸವಾರರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ ಕ್ರಮ ಜರುಗಿಸಲಾಗುವುದು ಹಾಗೂ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.