![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Aug 8, 2023, 7:00 PM IST
ದಾವಣಗೆರೆ: ಹಣಕಾಸು ವಿಚಾರದ ಗಲಾಟೆ ಸಂಬಂಧ ಜೈಲಿಗೆ ಹೋಗಿ ಬಂದ ನಂತರ ಕಿರುಕುಳ ನೀಡುತ್ತಿದ್ದವನನ್ನು ಕೊಲೆ ಮಾಡಿದ ಘಟನೆ ಸೋಮವಾರ ತಡರಾತ್ರಿ ದಾವಣಗೆರೆ ತಾಲೂಕಿನ ಮಲ್ಲಶೆಟ್ಟಿಹಳ್ಳಿ ಕ್ರಾಸ್ ಬಳಿ ನಡೆದಿದೆ.
ದಾವಣಗೆರೆ ಹೊರ ವಲಯದ ರಾಮನಗರದ ನಿವಾಸಿ ನರಸಿಂಹ (26) ಕೊಲೆಯಾದವನು. ಅದೇ ರಾಮನಗರದ ನಿವಾಸಿ ಶಿವಯೋಗೇಶ್ ಕೊಲೆ ಮಾಡಿರುವ ಆರೋಪಿ.
ಮೇಸ್ತ್ರಿ ಆಗಿದ್ದ ಶಿವಯೋಗೇಶ್ ಮತ್ತು ಕೊಲೆಗೀಡಾಗಿರುವ ನರಸಿಂಹನ ನಡುವೆ ಹಣಕಾಸು ವ್ಯವಹಾರ ಇತ್ತು. ಸಾಲ ಪಡೆದಿದ್ದ ನರಸಿಂಹ ವಾಪಸ್ ನೀಡರಲಿಲ್ಲ. ಶಿವಯೋಗೇಶ್ ಹಣ ಕೇಳುತ್ತಿದ್ದ ಕಾರಣಕ್ಕೆ ನರಸಿಂಹನು ಶಿವಯೋಗೇಶ್ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಕೆಲ ದಿನಗಳ ಕಾಲ ಜೈಲು ಶಿಕ್ಷೆಗೆ ಒಳಗಾಗಿದ್ದನು.
ಇದನ್ನೂ ಓದಿ:Bhadravathi ಕಾಲೇಜಿನಲ್ಲಿ ಪ್ರಕಾಶ್ ರಾಜ್ ಸಂವಾದ: ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ
ಜೈಲಿನಿಂದ ಹೊರ ಬಂದ ಮೇಲೆ ನರಸಿಂಹ ಬೆದರಿಕೆ ಹಾಕುವುದನ್ನು ಮುಂದುವರಿಸಿದ್ದರಿಂದ ರೋಸಿ ಹೋಗಿದ್ದ ಶಿವಯೋಗೇಶ್ ಸೋಮವಾರ ರಾತ್ರಿ ಮಾತುಕತೆ ನಡೆಸುವ ನೆಪದಲ್ಲಿ ಮಲ್ಲಶೆಟ್ಟಿಹಳ್ಳಿ ಕ್ರಾಸ್ ಬಳಿಗೆ ಕರೆಸಿ ಕೊಂಡಿದ್ದ. ಮಾತಿಗೆ ಮಾತು ಬೆಳೆದು ಶಿವಯೋಗೇಶ್ ಕಟ್ಟಿಗೆಯಿಂದ ತಲೆಗೆ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವದಿಂದ ನರಸಿಂಹ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಪ್ರಕರಣ ದಾಖಲಿಸಿಕೊಂಡ ದಾವಣಗೆರೆ ಗ್ರಾಮಾಂತರ ಪೊಲೀಸರು ಶಿವಯೋಗೇಶ್‌ನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
You seem to have an Ad Blocker on.
To continue reading, please turn it off or whitelist Udayavani.