![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Apr 28, 2024, 2:24 PM IST
ದಾವಣಗೆರೆ: ದಾವಣಗೆರೆಯ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿ ಭಾನುವಾರ ನಡೆದ ವಿಜಯ ಸಂಕಲ್ಪ ಸಮಾವೇಶಕ್ಕೆ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಹಾವೇರಿ ಇತರೆಡೆಯಿಂದ ಜನಸಾಗರವೇ ಹರಿದು ಬಂದಿತು.
ನಿಗದಿಯಾಗಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಾಹ್ನ 2ಕ್ಕೆ ಸಮಾವೇಶಕ್ಕೆ ಆಗಮಿಸಬೇಕಿತ್ತಾದರೂ ಬೆಳಗಾವಿ, ಶಿರಸಿ ಸಮಾವೇಶದ ಹಿನ್ನೆಲೆಯಲ್ಲಿ ಒಂದು ಗಂಟೆ ತಡವಾಗಿ ಬರುತ್ತಾರೆ ಎಂದು ಗೊತ್ತಿದ್ದರೂ ಜನರು ಭಾರೀ ಉತ್ಸಾಹದಿಂದಲೇ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದತ್ತ ದೌಡಾಯಿಸಿದರು. ಸಮಾವೇಶ ಪ್ರಾರಂಭ ಮುನ್ನವೇ ಸಾವಿರಾರು ಜನರು ಸಭಾಂಗಣದಲ್ಲಿ ಇದ್ದರು.
ಗಾಯಕರಾದ ಕಂಬದ ರಂಗಯ್ಯ, ದಿವ್ಯಾ ರಾಘವನ್ ಇತರರ ಹಾಡುಗಳಿಗೆ ಭರ್ಜರಿ ಹೆಜ್ಜೆ ಹಾಕಿದರು. ಮಿಮಿಕ್ರಿ ಪ್ರಕಾಶ್ ಹಾಸ್ಯ ದ ಮೂಲಕ ಜನರ ರಂಜಿಸಿದರು. ಮೋದಿಯವರ ಬೃಹತ್ ಕಟೌಟ್, ಬಿಜೆಪಿ ಬಾವುಟ ಹಾರಾಡಿದವು. ಜೈಶ್ರೀರಾಮ್, ಮೋದಿ, ಭಾರತ್ ಮಾತಾ ಕೀ ಜೈ ಘೋಷಣೆ ಮೊಳಗಿದವು.
ಮೋದಿ ಭೇಟಿ ಹಿನ್ನೆಲೆಯಲ್ಲಿ ದಾವಣಗೆರೆಯ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿತ್ತು. ಸಮಾವೇಶ ನಡೆದ ಹೈಸ್ಕೂಲ್ ಮೈದಾನಕ್ಕೆ ಹೊಂದಿಕೊಂಡಿರುವ ರಸ್ತೆಗಳಲ್ಲಿ ಹೋಟೆಲ್, ಅಂಗಡಿ, ವಾಣಿಜ್ಯ ಸಂಕೀರ್ಣ ಗಳನ್ನು ಶನಿವಾರದಿಂದಲೇ ಮುಚ್ಚಿಸಲಾಗಿತ್ತು. ಹೈಸ್ಕೂಲ್ ಮೈದಾನ ಸಂಪರ್ಕಿ ಸುವ ಪ್ರತಿ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿತ್ತು. ಖಾಸಗಿ, ಸಾರಿಗೆ ಸಂಸ್ಥೆ ಬಸ್ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸಲಾಗಿತ್ತು. ಎ.ವಿ. ಕಮಲಮ್ಮ ಮಹಿಳಾ ಕಾಲೇಜು ರಸ್ತೆ, ಪ್ರವಾಸಿ ಮಂದಿರ ರಸ್ತೆ ಇತರೆಡೆ ಸಂಚಾರ ನಿರ್ಬಂಧಿಸಲಾಗಿತ್ತು. ಎತ್ತರದ ಕಟ್ಟಡಗಳಲ್ಲಿ ರಕ್ಷಣಾ ಸಿಬ್ಬಂದಿ ಹದ್ದಿನ ಕಣ್ಣಿಟ್ಟಿದ್ದರು. ಬಿರು ಬಿಸಿಲಿನ ನಡುವೆಯೂ ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.