ರಸ್ತೆಗೆ ಮೀಸಲಾದ ಜಾಗ ಒತ್ತುವರಿ ತೆರವುಗೊಳಿಸಿ
Team Udayavani, Dec 23, 2021, 5:58 PM IST
ದಾವಣಗೆರೆ: ತಾಲೂಕಿನ ಮಲ್ಲಶೆಟ್ಟಿಹಳ್ಳಿ ಗ್ರಾಮದಸರ್ವೇ ನಂಬರ್ 5 ,6,7,8 ಮತ್ತು 16, 24 ರಲ್ಲಿ ರಸ್ತೆಗೆಮೀಸಲಾಗಿರುವ ಜಾಗದ ಒತ್ತುವರಿ ಜ.15ರ ಒಳಗೆತೆರವುಗೊಳಿಸಬೇಕು ಎಂದು ಎಐಟಿಯುಸಿ ಜಿಲ್ಲಾಪ್ರಧಾನ ಕಾರ್ಯದರ್ಶಿ ಆವರಗೆರೆ ಎಚ್.ಜಿ. ಉಮೇಶ್‌ಒತ್ತಾಯಿಸಿದ್ದಾರೆ.ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರೈತ ಸಂಘದ ಜಿಲ್ಲಾ ಮುಖಂಡರು, ಉದ್ಯಮಿಗಳುರಸ್ತೆಗೆ ಮೀಸಲಿಟ್ಟಿರುವ 6 ಗುಂಟೆ ಜಾಗ ಒತ್ತುವರಿಮಾಡಿಕೊಂಡಿದ್ದಾರೆ.
ನ್ಯಾಯಾಲಯ ಆದೇಶ ನೀಡಿದ್ದರೂಜಿಲ್ಲಾ, ತಾಲೂಕು ಆಡಳಿತ ಆದೇಶವನ್ನು ಪಾಲನೆ ಮಾಡಿಲ್ಲ.ಜ. 15ರ ಒಳಗೆ ತೆರವು ಮಾಡಿಸದಿದ್ದಲ್ಲಿ ರಾಷ್ಟ್ರೀಯ ಹೆದ್ದಾರಿತಡೆ ನಡೆಸಲಾಗುವುದು ಎಂದು ಎಚ್ಚರಿಸಿದರು.ಮಲ್ಲಶೆಟ್ಟಿಹಳ್ಳಿ ಗ್ರಾಮದ ಸರ್ವೇ ನಂಬರ್ 8/2 ರನಕಾಶೆ ಮತ್ತು ಅನುಮೋದಿತ ಕಟ್ಟಡ ವಿನ್ಯಾಸ ನಕ್ಷೆಯಲ್ಲಿರಸ್ತೆ ಇದೆ. ಆದರೆ, ವಾಸ್ತವವಾಗಿ ಅಲ್ಲಿ ರಸ್ತೆ ಇಲ್ಲದೆತೊಂದರೆ ಆನುಭವಿಸುವಂತಾಗಿದೆ. ಮಲ್ಲಶೆಟ್ಟಿಹಳ್ಳಿಯಿಂದಕುರ್ಕಿಯವರೆಗೆ ಸಂಪರ್ಕ ಕಲ್ಪಿಸುವ ಜಿಲ್ಲಾ ಮುಖ್ಯರಸ್ತೆಯನ್ನೇ ಒತ್ತುವರಿ ಮಾಡಿಕೊಂಡಿರುವ ಬಗ್ಗೆಜಿಲ್ಲಾಡಳಿತ, ತಾಲೂಕು ಆಡಳಿತದ ಗಮನಕ್ಕೆ ತರಲಾಗಿತ್ತು.ಅಂತಿಮವಾಗಿ ಹೈಕೋರ್ಟ್ ಮೊರೆ ಹೋಗಲಾಗಿತ್ತು. ಉಚ್ಚನ್ಯಾಯಾಲಯ ಆದೇಶ ನೀಡಿದ್ದರೂ ತೆರವುಗೊಳಿಸಿಲ್ಲ.ಕೂಡಲೇ ರಸ್ತೆ ಒತ್ತುವರಿ ತೆರವು ಮಾಡಿಸಬೇಕು. ಇಲ್ಲದಿದ್ದಲ್ಲಿಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ನ್ಯಾಯವಾದಿ ಮಂಜುಳಾ ಮಾತನಾಡಿ, ಮಲ್ಲಶೆಟ್ಟಿಹಳ್ಳಿಗ್ರಾಮದ ಸರ್ವೇ ನಂಬರ್ 5 ,6,7,8 ಮತ್ತು 16, 24 ರಲ್ಲಿರಸ್ತೆಗೆ ಮೀಸಲಾಗಿರುವ ಜಾಗದಲ್ಲಿರುವ 17 ಜನರಲ್ಲಿ 13ಜನರು ರಸ್ತೆಗೆ ಜಾಗ ಬಿಟ್ಟುಕೊಡುವುದಾಗಿ ತಿಳಿಸಿದ್ದಾರೆ.ನಾಲ್ವರು ಮಾತ್ರ ಇನ್ನಿಲ್ಲದ ರೀತಿ ಅಡ್ಡಿಪಡಿಸುತ್ತಿದ್ದಾರೆ.ನ್ಯಾಯಾಲಯದ ಆದೇಶವನ್ನೂ ಜಿಲ್ಲಾ, ತಾಲೂಕುಆಡಳಿತ ಪಾಲನೆ ಮಾಡುತ್ತಿಲ್ಲ.
ಜ.15ರ ಒಳಗೆ ಒತ್ತುವರಿತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.ಕಟ್ಟಡ ಕಟ್ಟುವ ಮತ್ತು ಕ್ವಾರಿ ಕೆಲಸಗಾರರ ಸಂಘದ ಜಿಲ್ಲಾಅಧ್ಯಕ್ಷ ಎಂ. ಲಕ್ಷ್ಮಣ್, ಕಾರ್ಯಾಧ್ಯಕ್ಷ ಪಿ.ಕೆ. ಲಿಂಗರಾಜ್,ಮಹಮ್ಮದ್ ರμàಕ್, ನರೇಗಾ ರಂಗನಾಥ್, ಜಿ.ಆರ್.ನಾಗರಾಜ್, ಭರತ್‌ಸಿಂಗ್, ಹೊನ್ನಮ್ಮ, ಮಲ್ಲಶೆಟ್ಟಿಹಳ್ಳಿಹನುಮೇಶ್ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.