ಪೊಲೀಸರಿಗೆ ಹೆಚ್ಚಿನ ಸವಲತ್ತು ಸಿಗಲಿ: ಸಿದ್ದೇಶ್ವರ


Team Udayavani, Sep 27, 2021, 2:56 PM IST

davanagere news

ದಾವಣಗೆರೆ: ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿನಿರ್ವಹಿಸುವ ಕೆಲಸ ದೇಶಸೇವೆಯೇ ಆಗಿದೆ ಎಂದು ಸಂಸದಡಾ| ಜಿ.ಎಂ. ಸಿದ್ದೇಶ್ವರ ಹೇಳಿದರು.

ನಗರದ ಹಳೆ ಡಿ.ಎ.ಆರ್‌. ಕಚೇರಿ ಆವರಣದಲ್ಲಿ ಭಾನುವಾರ ನಡೆದ ಜಿಲ್ಲಾ ನಿವೃತ್ತ ಪೊಲೀಸ್‌ ಅಧಿಕಾರಿಗಳ ಭವನ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿಪಾಲ್ಗೊಂಡು ಅವರು ಮಾತನಾಡಿದರು. ಸೈನಿಕರು ದೇಶದಗಡಿ ಭಾಗದಲ್ಲಿ ರಕ್ಷಣೆ ನೀಡಿದರೆ, ಪೊಲೀಸರು ದೇಶದಒಳಗೆ ಜನಸಾಮಾನ್ಯರಿಗೆ ರಕ್ಷಣೆ ನೀಡುವ ಮೂಲಕದೇಶಸೇವೆಯಲ್ಲಿ ತೊಡಗಿದ್ದಾರೆ ಎಂದು ಬಣ್ಣಿಸಿದರು.

ಪೊಲೀಸ್‌ ಕೆಲಸ ಬಹಳ ಗೌರವದ ಕೆಲಸ. ಯಾವುದೇಗಣ್ಯರ ಆಗಮನದ ಸಂದರ್ಭದಲ್ಲಿ ರಕ್ಷಣೆ ಒದಗಿಸುವಕಾರ್ಯದಲ್ಲಿ ಪೊಲೀಸರು ಪಡುವ ಕಷ್ಟ ನೋಡಿದರೆ ಅಯ್ಯೋ ಅನ್ನಿಸುತ್ತದೆ. ಆದರೆ ಪೊಲೀಸರು ತಮ್ಮ ಪಾಲಿನ ಕರ್ತವ್ಯನಿರ್ವಹಿಸುತ್ತಲೇ ಇರುತ್ತಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುತ್ತಿರುವ ಪೊಲೀಸರು ಇಲ್ಲದೆ ಹೋಗಿದ್ದರೆ ಒಬ್ಬರತಲೆ ಇನ್ನೊಬ್ಬರ ಕೈಯಲ್ಲಿ ಇರುವಂತಹ ವಾತಾವರಣನಿರ್ಮಾಣವಾಗುತ್ತಿತ್ತು. ದೇಶದ ಒಳಗೆ ಕಾನೂನು ರಕ್ಷಣೆಮಾಡುವ ಇಲಾಖೆ ಅಂದರೆ ಅದು ಪೊಲೀಸ್‌ ಇಲಾಖೆಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ದೇಶ, ಸಮಾಜಕ್ಕೆ ಗೌರವ ತರುವ ಕೆಲಸ ಮಾಡುತ್ತಿರುವಪೊಲೀಸ್‌ ಸಿಬ್ಬಂದಿಗೆ ಹಿಂದೆ ಅಂತಹ ಸೌಲಭ್ಯಗಳುದೊರೆಯುತ್ತಿರಲಿಲ್ಲ. ಈಗ ಮನೆ ಒಳಗೊಂಡಂತೆ ಇತರೆಸೌಲಭ್ಯಗಳು ದೊರೆಯುತ್ತಿದೆ. ಇನ್ನೂ ಹೆಚ್ಚಿನ ಮಟ್ಟದಲ್ಲಿಸೌಲಭ್ಯಗಳು ದೊರೆಯಬೇಕಿದೆ. ಎಲ್ಲ ಜಿಲ್ಲೆಗಳಲ್ಲೂದಾವಣಗೆರೆ ಮಾದರಿಯಲ್ಲಿ ಸುಂದರ, ಸುಸಜ್ಜಿತ ನಿವೃತ್ತಪೊಲೀಸ್‌ ಅಧಿಕಾರಿಗಳ ಭವನಗಳು ಆಗಬೇಕು ಎಂದು ಆಶಿಸಿದರು.

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕಎಸ್‌.ಎ. ರವೀಂದ್ರನಾಥ್‌ ಮಾತನಾಡಿ, ಪೊಲೀಸರುಒಳ್ಳೆಯ ರೀತಿಯಲ್ಲಿ ಕೆಲಸ ಮಾಡಬೇಕು. ಯಾರಿಗೇಆಗಲಿ ಪೊಲೀಸ್‌ ಭಾಷೆಯ ಬಳಸದೆ ಸುಸಂಸ್ಕೃತ ಭಾಷೆಬಳಸಬೇಕು. ಒಳ್ಳೆಯ ಕೆಲಸ ಮಾಡಿದರೆ ನಿವೃತ್ತಿ ನಂತರವೂಆರೋಗ್ಯ ಉತ್ತಮವಾಗಿ ಇರುತ್ತದೆ. ಮುಠಾuಳಗಿರಿ ಕೆಲಸಮಾಡಿದರೆ ಕಾಯಿಲೆ ಬರುತ್ತದೆ.

ನಿವೃತ್ತ ಪೊಲೀಸ್‌ಅಧಿಕಾರಿಗಳ ಭವನಕ್ಕೆ 10 ಲಕ್ಷ ಅನುದಾನ ನೀಡಿದ್ದು,ಇನ್ನೂ ಹೆಚ್ಚಿನ ಸಹಾಯ ಮಾಡಲು ಸಿದ್ಧ ಎಂದು ಭರವಸೆನೀಡಿದರು.ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ,ಐದು ಪೈಸೆ ಕೆಲಸ ಮಾಡಿ ಒಂದು ರೂಪಾಯಿ ಪ್ರಚಾರಪಡೆಯುವಂತಹವರು ಇದ್ದಾರೆ.

ಆ ರೀತಿಯಾಗದೆಇತರರಿಗೆ ಮಾದರಿಯಾಗುವಂತೆ ಪೊಲೀಸ್‌ ಅಧಿಕಾರಿಗಳು,ಸಿಬ್ಬಂದಿ ಕಾಯಕ ‌ಶ್ರದ್ಧೆಯಿಂದ ಕೆಲಸ ಮಾಡಬೇಕು ಎಂದುಕರೆ ನೀಡಿದರು.ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್‌ ಮಾತನಾಡಿ, ನಿವೃತ್ತಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ ಇಲಾಖೆಗೆ ಆಸ್ತಿ ಇದ್ದಂತೆ.ಎಲ್ಲರ ಸಹಕಾರದಿಂದ ಉತ್ತಮ ಭವನ ನಿರ್ಮಾಣವಾಗಿದೆ.

ರಕ್ತದಾನ, ಆರೋಗ್ಯ ಶಿಬಿರದಂತಹ ಒಳ್ಳೆಯ ಕೆಲಸಗಳುಭವನದಲ್ಲಿ ನಡೆಸಬೇಕು ಎಂದು ತಿಳಿಸಿದರು.ನಿವೃತ್ತ ಪೊಲೀಸ್‌ ಮಹಾ ನಿರ್ದೇಶಕ ಮತ್ತು ಪೊಲೀಸ್‌ಮಹಾ ನಿರೀಕ್ಷಕ ಡಾ| ಶಂಕರ ಬಿದರಿ ಭವನ ಉದ್ಘಾಟಿಸಿದರು.

ಜಿಲ್ಲಾ ನಿವೃತ್ತ ಪೊಲೀಸ್‌ ಅಧಿಕಾರಿಗಳ ಕ್ಷೇಮಾಭಿವೃದ್ಧಿಸಂಘದ ಅಧ್ಯಕ್ಷ ಜಿ.ಕೆ. ಬಸವರಾಜಪ್ಪ ಅಧ್ಯಕ್ಷತೆ ವಹಿಸಿದ್ದರು.ಸಂಘದ ರಾಜ್ಯಾಧ್ಯಕ್ಷ ಎನ್‌. ನಾಗರಾಜ್‌, ಕುಮಾರ್‌ಎಸ್‌. ಕರ್ನಿಂಗ್‌, ಎನ್‌. ಲಿಂಗಾರೆಡ್ಡಿ, ಎಂ.ಎಸ್‌.ಶಿವಾಚಾರ್ಯ, ಬಿ.ಬಿ. ಸಕ್ರಿ, ಕೆ.ಪಿ. ಚಂದ್ರಪ್ಪ, ಹಾವೇರಿ ಎಸ್ಪಿಹನುಮಂತರಾಯ, ನಿಖೀಲ್‌ ಕೊಂಡಜ್ಜಿ, ಉಮಾ ಶಂಕರಬಿದರಿ ಇತರರು ಇದ್ದರು. ಸಿದ್ಧಗಂಗಾ ಶಾಲಾ ಮಕ್ಕಳುಪ್ರಾರ್ಥಿಸಿದರು. ರವಿನಾರಾಯಣ ಸ್ವಾಗತಿಸಿದರು.

ಟಾಪ್ ನ್ಯೂಸ್

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

8

Hampankatte: ಸಿಟಿ ಮಾರ್ಕೆಟ್‌ ರಸ್ತೆಗೆ ಬೇಕಿದೆ ಕಾಯಕಲ್ಪ

7

Mangaluru: ಪಿ.ಎಂ. ರಾವ್‌ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

6(1

Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.