ಚಿರತೆ ಸೆರೆ ಹಿಡಿಯಲು ಜಂಟಿ ಕಾರ್ಯಾಚರಣೆ
Team Udayavani, Sep 29, 2021, 3:23 PM IST
ಹೊನ್ನಾಳಿ: ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳವಿವಿಧ ಗ್ರಾಮಗಳಲ್ಲಿ ಚಿರತೆ ಹಾಗೂ ಎರಡು ಮರಿಗಳು ಕಾಣಿಸಿಕೊಂಡಿರುವುದರಿಂದ ಜನರು ಭಯಭೀತರಾಗಿದ್ದಾರೆ ಚಿರತೆ ಹಾಗೂ ಎರಡು ಮರಿಗಳನ್ನು ಸೆರೆ ಹಿಡಿದು ಕಾಡಿಗೆ ಕಳುಹಿಸಲು ಜಂಟಿ ಕಾರ್ಯಾಚರಣೆ ಪಡೆಯನ್ನು ರಚಿಸಲು ಮಂಗಳವಾರ ತಾಲೂಕು ಕಚೇರಿಯಲ್ಲಿ ನಡೆದ ತುರ್ತುಸಭೆಯಲ್ಲಿ ನಿರ್ಧರಿಸಲಾಯಿತು.
ತಹಶೀಲ್ದಾರ್ ಬಸನಗೌಡ ಕೊಟೂರು ಅವರ ಅಧ್ಯಕ್ಷತೆಯಲ್ಲಿಈ ಸಭೆ ನಡೆಯಿತು. ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನದಾನಿಹಳ್ಳಿ, ಬಸವನಹಳ್ಳಿ, ಅರಬಗಟ್ಟೆ, ಕಡದಕಟ್ಟೆ, ಸೊರಟೂರು, ಮಾದನಬಾವಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾಣಿಸಿಕೊಂಡ ಚಿರತೆ ಹಾಗೂ ಎರಡು ಮರಿಗಳನ್ನು ಕೇಜ್ ಮೂಲಕ ಸೆರೆ ಹಿಡಿದುಕಾಡಿಗೆ ಮರಳಿಸಲು ತಂಡಗಳನ್ನು ರಚನೆ ಮಾಡಲಾಯಿತು.ತಂಡದ ಮೇಲುಸ್ತುವಾರಿಗೆ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ನಿಯುಕ್ತಿಗೊಳಿಸಲಾಯಿತು.
ಜಂಟಿ ಕಾರ್ಯಾಚರಣೆ ಪಡೆಯಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಹಶೀಲ್ದಾರರು, ತಾಪಂ ಇಒಗಳು, ಚನ್ನಗಿರಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರು, ಹೊನ್ನಾಳಿ ಮತ್ತು ನ್ಯಾಮತಿ ಪೊಲೀಸ್ ವೃತ್ತದ ಇನ್ಸ್‌ಪೆಕ್ಟರ್ ಹಾಗೂ ಪಿಎಸ್‌ಐಗಳು, ಅಗ್ನಿಶಾಮಕದಳದ ಅಧಿಕಾರಿ, ಸಂಬಂಧಪಟ್ಟ ಗ್ರಾಮಗಳಪಂಚಾಯಿತಿ ಅಭಿವೃದ್ಧಿ ಅ ಧಿಕಾರಿಗಳು ಹಾಗೂ ವಲಯ ಅರಣ್ಯಾಧಿಕಾರಿಗಳು ಮೇಲುಸ್ತುವಾರಿ ಅಧಿ ಕಾರಿಗಳಾಗಿದ್ದಾರೆ. ನ್ಯಾಮತಿತಹಶೀಲ್ದಾರ್ ತನುಜಾ, ಅರಣ್ಯಾಧಿ ಕಾರಿ ದೇವರಾಜ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.