ಹರಿಹರ ಎಥೆನಾಲ್ ಘಟಕಕ್ಕೆ ಜೀವಕಳೆ
Team Udayavani, Feb 28, 2022, 10:39 AM IST
ದಾವಣಗೆರೆ: ಕೇಂದ್ರ ಸರ್ಕಾರದ ನೂತನ ಎಥೆನಾಲ್ ನೀತಿಹಾಗೂ ರಾಜ್ಯ ಸರ್ಕಾರದ ಉತ್ತೇಜನದಿಂದ ಮಂಗಳೂರುರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ (ಎಂಆರ್‌ಪಿಎಲ್)ಸಂಸ್ಥೆ ಹರಿಹರದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಬೃಹತ್ 2ಜಿಎಥೆನಾಲ್ ಘಟಕ ಯೋಜನೆಗೆ ಜೀವಕಳೆ ಬಂದಿದೆ.ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಸಂಸ್ಥೆಹರಿಹರದಲ್ಲಿ 966 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ಮೂರುವರ್ಷಗಳ ಹಿಂದೆಯೇ ನಿರ್ಧರಿಸಿದೆ.
ಇದಕ್ಕಾಗಿ ಈಗಾಗಲೇಹರಿಹರ ತಾಲೂಕಿನ ಸಾರಥಿ ಗ್ರಾಮದ ಬಳಿ ಕೆಐಎಡಿಬಿಯಿಂದ40 ಎಕರೆ ಜಮೀನು ಸಹ ಪಡೆದುಕೊಂಡಿದೆ. ಪರಿಸರಇಲಾಖೆಯ ನಿರಪೇಕ್ಷಣೆ ಹಾಗೂ ತಾಂತ್ರಿಕ ಕಾರ್ಯಸಾಧ್ಯತಾವರದಿ ವಿಳಂಬದಿಂದ ಇನ್ನೂ ಕಾರ್ಯಾನುಷ್ಠಾನಗೊಂಡಿಲ್ಲ.ಕೇಂದ್ರ ಸರ್ಕಾರವು ಪರಿಸರ ಸಂರಕ್ಷಣೆ, ಆರ್ಥಿಕ ಚಟುವಟಿಕೆಹಾಗೂ ರೈತರ ಹಿತದೃಷ್ಟಿಯನ್ನಿಟ್ಟುಕೊಂಡು ಎಥೆನಾಲ್ ನೀತಿರೂಪಿಸಿರುವುದರಿಂದ ಪ್ರಕ್ರಿಯೆಗಳು ಸರಳಗೊಂಡಿದ್ದು,ಇದರಿಂದ ಎಥೆನಾಲ್ ಘಟಕ ಸ್ಥಾಪನೆಗೆ ಉತ್ತೇಜನ ಸಿಕ್ಕಂತಾಗಿದೆ.ಈ ಘಟಕ ಕಾರ್ಯಾರಂಭವಾದರೆ ಇದು ರಾಜ್ಯದ ಅತಿ ದೊಡ್ಡ2ಜಿ ಎಥೆನಾಲ್ ಘಟಕ ಎನ್ನಿಸಿಕೊಳ್ಳಲಿದೆ.
ಕೇಂದ್ರ ಸರ್ಕಾರ ರೂಪಿಸಿದ ಎಥೆನಾಲ್ ನೀತಿಯನ್ನುಸದುಪಯೋಗ ಪಡಿಸಿಕೊಂಡು ಕರ್ನಾಟಕ ರಾಜ್ಯ ಹೆಚ್ಚಿನ ಲಾಭಪಡೆದುಕೊಳ್ಳಲಿದೆ ಎಂದು ಇತ್ತೀಚೆಗಷ್ಟೇ ಹಾವೇರಿ ಜಿಲ್ಲೆಯಶಿಗ್ಗಾವಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ತನ್ಮೂಲಕ ರಾಜ್ಯ ಸರ್ಕಾರ ಸಹ ಎಥೆನಾಲ್ ಘಟಕಗಳಸ್ಥಾಪನೆ ಹಾಗೂ ಎಥೆನಾಲ್ ಉತ್ಪಾದನೆಗೆ ಹೆಚ್ಚಿನ ಪ್ರೋತ್ಸಾಹನೀಡುತ್ತಿರುವುದರಿಂದ ಹರಿಹರದಲ್ಲಿ ಪ್ರಸ್ತಾಪಿತ ಎಂಪಿಆರ್‌ಎಲ್‌ನ ಎಥೆನಾಲ್ ಘಟಕ ಶೀಘ್ರ ಕಾರ್ಯಾರಂಭಗೊಳ್ಳಬಹುದುಎಂಬ ನಿರೀಕ್ಷೆ ಗರಿಗೆದರಿದೆ.\
ಎಚ್.ಕೆ. ನಟರಾಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.