ಎಂಎಸ್‌ಪಿಗೆ ಕಾಯ್ದೆ ಮಾನ್ಯತೆ ನೀಡಲು ಒತ್ತಾಯ
Team Udayavani, Oct 12, 2021, 2:49 PM IST
ದಾವಣಗೆರೆ: ಕೇಂದ್ರ ಸರ್ಕಾರ ಕನಿಷ್ಠ ಬೆಂಬಲಬೆಲೆ ಯೋಜನೆಗೆ ಕಾಯ್ದೆ ರೂಪಿಸಬೇಕುಮತ್ತು ಕ್ವಿಂಟಲ್ ಮೆಕ್ಕೆಜೋಳಕ್ಕೆ 3,500ರೂಪಾಯಿ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ಸೋಮವಾರ ಕರ್ನಾಟಕ ರಾಜ್ಯರೈತ ಸಂಘ ಮತ್ತು ಹಸಿರು ಸೇನೆ(ಹುಚ್ಚವ್ವನಹಳ್ಳಿಮಂಜುನಾಥ್ ಬಣ) ಕಾರ್ಯಕರ್ತರು ಪ್ರತಿಭಟನೆ,ಬೈಕ್ ರ್ಯಾಲಿ ನಡೆಸಿದರು.
ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯೋಜನೆಯಡಿ ಕೃಷಿ ಉತ್ಪನ್ನಗಳಿಗೆ ಬೆಲೆನಿಗದಿ ಮಾಡುತ್ತದೆ. ಆದರೆ, ಕನಿಷ್ಠ ಬೆಂಬಲಬೆಲೆ ಯೋಜನೆಗೆ ಕಾನೂನಿನ ಮಾನ್ಯತೆಇಲ್ಲದೇ ಇರುವುದರಿಂದ ಕನಿಷ್ಠ ಬೆಂಬಲ ಬೆಲೆಯೋಜನೆಗೆ ಬೆಲೆಯೇ ಇಲ್ಲದಂತಾಗುತ್ತದೆ.ಮುಕ್ತ ಮಾರುಕಟ್ಟೆಯಲ್ಲಿ ಸರ್ಕಾರ ನಿಗದಿಪಡಿಸಿದಧಾರಣೆಗಿಂತ ಲೂ ಕಡಿಮೆ ದರಕ್ಕೆ ಬೆಳೆಗಳಖರೀದಿಮಾಡಲಾಗುತ್ತಿದೆ.
ಕೇಂದ್ರ ಸರ್ಕಾರ ಕೂಡಲೇಕನಿಷ್ಠ ಬೆಂಬಲ ಬೆಲೆ ಯೋಜನೆ ಕಾಯ್ದೆ ರೂಪನೀಡಬೇಕು ಎಂದು ಪ್ರತಿಭಟನಾ ನಿರತ ರೈತರು ಒತ್ತಾಯಿಸಿದರು.
ಕೇಂದ್ರ ಸರ್ಕಾರ ಕ್ವಿಂಟಲ್‌ಮೆಕ್ಕೆ ಜೋಳಕ್ಕೆ1860ರೂಪಾಯಿ ನಿಗದಿಪಡಿಸಿದೆ. ಆದರೆ, ಅದರಂತೆಯಾವ ವರ್ತಕರು ಖರೀದಿ ಮಾಡುವುದೇಇಲ್ಲ. 1200-1400 ರೂಪಾಯಿಯಂತೆ ಖರೀದಿಮಾಡುತ್ತಾರೆ. ರೈತರಿಗೆ ಪ್ರತಿ ಕ್ವಿಂಟಲ್‌ಗೆ 460-660 ರೂಪಾಯಿ ನಷ್ಟವಾಗುತ್ತದೆ.
ಕನಿಷ್ಠ ಬೆಂಬಲಬೆಲೆ ಯೋಜನೆಗೆ ಕಾಯ್ದೆ ರೂಪ ನೀಡಿದರೆನಿಗದಿತ ದರಕ್ಕಿಂತಲೂ ಕಡಿಮೆ ಬೆಲೆಗೆ ಖರೀದಿಮಾಡಲಿಕ್ಕೆ ಬರುವುದೇ ಇಲ್ಲ. ಒಂದೊಮ್ಮೆಕಡಿಮೆ ಬೆಲೆಗೆ ಖರೀದಿ ಮಾಡಿದವರಿಗೆ ಲೈಸೆನ್ಸ್‌ರದ್ಧು, 1 ವರ್ಷ ಜೈಲು, ದಂಡದಂತಹ ಉಗ್ರಕ್ರಮ ತೆಗೆದುಕೊಳ್ಳುವ ಅವಕಾಶ ಮಾಡಿಕೊಟ್ಟಲ್ಲಿ ಎಲ್ಲ ರೈತರಿಗೆ ಅನುಕೂಲ ಆಗುತ್ತದೆ.
ಕನಿಷ್ಠಬೆಂಬಲ ಬೆಲೆ ಯೋಜನೆಗೂ ಒಂದು ಮಾನ್ಯತೆದೊರೆಯುತ್ತದೆ. ಹಾಗಾಗಿ ಸರ್ಕಾರ ಕೂಡಲೇ ಕನಿಷ್ಠ ಬೆಂಬಲ ಬೆಲೆ ಯೋಜನೆ ಕಾಯ್ದೆ ರೂಪನೀಡುವಮೂಲಕರೈತರ10 ತಿಂಗಳಹೋರಾಟಕ್ಕೆಸ್ಪಂದಿಸಬೇಕು ಎಂದು ಒತ್ತಾಯಿಸಿದರು.ಕನಿಷ್ಠ ಬೆಂಬಲ ಬೆಲೆ ಯೋಜನೆಗೆ ಕಾಯ್ದೆರೂಪ ನೀಡಿದಲ್ಲಿ ದೇಶದ್ಯಾಂತ ಮೆಕ್ಕೆಜೋಳಕ್ಕೆಒಂದೇ ಧಾರಣೆ ಇರುತ್ತದೆ.
ಇಲ್ಲದೇ ಹೋದಲ್ಲಿದಾವಣಗೆರೆಯಲ್ಲಿ ಬೆಲೆ ಜಾಸ್ತಿ ಇದ್ದರೆ ಬಿಹಾರಮುಂತಾದ ಕಡೆಯಿಂದ ಮೆಕ್ಕೆಜೋಳವನ್ನಕಡಿಮೆ ದರಕ್ಕೆ ಖರೀದಿಸಿ ತಂದು, ಇಲ್ಲಿ ಮಾರಾಟಮಾಡಲಾಗುತ್ತದೆ. ಕನಿಷ್ಠ ಬೆಂಬಲ ಬೆಲೆಯೋಜನೆಗೆ ಕಾಯ್ದೆ ರೂಪ ನೀಡುವುದು ಎಲ್ಲಕಡೆಯಿಂದ ಉತ್ತಮ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.