ಮನೆ ನಿರ್ಮಿಸದವರ ಮಂಜೂರಾತಿ ರದ್ದು


Team Udayavani, Nov 3, 2021, 12:44 PM IST

davanagere news

ದಾವಣಗೆರೆ: ವಿವಿಧ ವಸತಿ ಯೋಜನೆಗಳಡಿ ಮನೆ ಮಂಜೂರಾತಿಗೊಂಡು ಈವರೆಗೆ ಮನೆಗಳನಿರ್ಮಾಣ ಮಾಡದಂತಹವರ ಮಂಜೂರಾತಿರದ್ದುಪಡಿಸಬೇಕು. ಬೇರೆ ಅರ್ಹ ಫಲಾನುಭವಿಗಳಿಗೆಮಂಜೂರಾತಿ ನೀಡಿ ಎಂದು ಸಂಸದ ಡಾ| ಜಿ.ಎಂ.ಸಿದ್ದೇಶ್ವರ, ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಗಳವಾರ ಜಿಲ್ಲಾ ಪಂಚಾಯತ್‌ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಪ್ರಧಾನಮಂತ್ರಿಆವಾಸ್‌ (ನಗರ) ಯೋಜನೆ ಯಡಿ ಜಿಲ್ಲೆಯವಿವಿಧ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ1346 ಫಲಾನುಭವಿಗಳು ನಿಗದಿತ ಅವಧಿಯಲ್ಲಿ ಮನೆ ಪ್ರಾರಂಭಿಸದೇ ಇರುವುದರಿಂದ ಆನ್‌ಲೈನ್‌ತಂತ್ರಾಂಶದಲ್ಲಿ ಬ್ಲಾಕ್‌ ಮಾಡಲಾಗಿದೆ. ಕಳೆದ ಜೂ. 28ರಂದು ರಾಜೀವ್‌ಗಾಂಧಿ ವಸತಿ ನಿಗಮದಿಂದ ಬ್ಲಾಕ್‌ ಮಾಡಲಾಗಿರುವ ಮನೆಗಳನ್ನು ರದ್ದುಪಡಿಸುವಂತೆ ಆದೇಶಿಸಲಾಗಿದೆ ಎಂದರು.

ವಾಜಪೇಯಿ ನಗರ ವಸತಿ, ಡಾ| ಬಿ.ಆರ್‌.ಅಂಬೇಡ್ಕರ್‌, ದೇವರಾಜ ಅರಸು ವಸತಿ,ಪಿಎಂಎವೈ (ನಗರ) ಯೋಜನೆಗಳಡಿ ಜಿಲ್ಲೆಯಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿಮಂಜೂರಾದ 5,360 ಮನೆಗಳಲ್ಲಿ 1492 ಮನೆಗಳುಪೂರ್ಣಗೊಂಡಿವೆ, 2657 ಮನೆಗಳು ಪ್ರಗತಿಯವಿವಿಧ ಹಂತದಲ್ಲಿವೆ. 1,211 ಮನೆಗಳ ನಿರ್ಮಾಣಇನ್ನೂ ಪ್ರಾರಂಭವೇ ಆಗಿಲ್ಲ ಎಂದು ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕಿ ನಜ್ಮಾ ಮಾಹಿತಿ ನೀಡಿದರು.

ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದಸಂಸದರು , ತಂತ್ರಾಂಶದಲ್ಲಿ ಬ್ಲಾಕ್‌ ಆಗಿರುವಮನೆಗಳನ್ನು ರದ್ದುಪಡಿಸಿ. ಅದನ್ನು ಹೊಸದಾಗಿಪಡೆದು ಬೇರೆ ಅರ್ಹರಿಗೆ ಮನೆ ಮಂಜೂರಾತಿಮಾಡಬೇಕು. ಮನೆ ನಿರ್ಮಾಣ ಪ್ರಾರಂಭಿಸದೇಇರುವವರಿಗೆ ಕೂಡಲೇ ಅಂತಿಮ ನೋಟಿಸ್‌ನೀಡಿ. ನಿಗದಿತ ಅವಧಿಯೊಳಗೆ ಮನೆ ನಿರ್ಮಾಣಪ್ರಾರಂಭಿಸದಿದ್ದರೆ. ಮಂಜೂರಾತಿ ರದ್ದುಪಡಿಸಿ.ಆಯಾ ಕ್ಷೇತ್ರಗಳ ಶಾಸಕರ ಗಮನಕ್ಕೆ ತಂದು ಅರ್ಹಫಲಾನುಭವಿಗಳಿಗೆ ಮಂಜೂರಾತಿ ಮಾಡಲು ತಕ್ಷಣಕ್ರಮ ಜರುಗಿಸಬೇಕು.

ಅಧಿಕಾರಿಗಳು ಒಂದುವಾರದ ಒಳಗಾಗಿ ವರದಿ ಸಲ್ಲಿಸಬೇಕು ಎಂದುಸೂಚನೆ ನೀಡಿದರು.ಜಲಜೀವನ್‌ ಮಿಷನ್‌ ಯೋಜನೆಯಡಿಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕ ಕುಡಿಯುವನೀರಿನ ಕಾಮಗಾರಿ ಪೂರೈಸಲು ಒಟ್ಟು 353ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗಿದೆ.

ಈಗಾಗಲೆ 62 ಕಾಮಗಾರಿ ಪೂರ್ಣಗೊಂಡಿವೆ.ಆದರೆ ಕೆಲವು ಗ್ರಾಮಗಳಲ್ಲಿ ಕಾಮಗಾರಿ, ಮೀಟರ್‌ಅಳವಡಿಕೆಗೆ ಗ್ರಾಮಸ್ಥರ ವಿರೋಧವಿದೆ ಎಂದುಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯವಿಭಾಗ ಕಾರ್ಯಪಾಲಕ ಇಂಜಿನಿಯರ್‌ ತಿಳಿಸಿದರು.ಶಾಸಕ ಎಸ್‌.ವಿ. ರಾಮಚಂದ್ರ, ಪ್ರೊ| ಎನ್‌.ಲಿಂಗಣ್ಣ ಇತರರು ಇದ್ದರು.

ಟಾಪ್ ನ್ಯೂಸ್

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.