ಕಸ ವಿಲೇವಾರಿ ಗ್ರಾಮ ಪಂಚಾಯಿತಿ ಜವಾಬ್ದಾರಿ
Team Udayavani, Nov 3, 2021, 4:54 PM IST
ದಾವಣಗೆರೆ: ರಾಷ್ಟ್ರೀಯ ಗ್ರಾಮೀಣಜೀವನೋಪಾಯ ಮಿಷನ್, ಗ್ರಾಮ ಪಂಚಾಯತಿಮಟ್ಟದಲ್ಲಿ ಸ್ವತ್ಛ ಸಂಕೀರ್ಣ ಘಟಕದ ನಿರ್ವಹಣೆ ವಹಿಸಿಕೊಂಡಿದೆ. ಕಸ ವಿಲೇವಾರಿ ಮಾಡುವುದು ಆಯಾ ಗ್ರಾಮ ಪಂಚಾಯಿತಿಗಳ ಜವಾಬ್ದಾರಿ ಎಂದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಮಂಗಳವಾರ ಜಿಲ್ಲಾ ಪಂಚಾಯತ್ ಆವರಣದಲ್ಲಿವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಬಳಿಕಮಾತನಾಡಿದ ಅವರು, ಕಸ ವಿಲೇವಾರಿಗಾಗಿಹೊರಗುತ್ತಿಗೆ ಆಧಾರದ ಮೇಲೆ ಅದಕ್ಕೆ ಸಿಬ್ಬಂದಿನೇಮಕ, ತರಬೇತಿ, ವೇತನ ನೀಡಲಾಗುತ್ತದೆಎಂದರು. ಘನ ತ್ಯಾಜ್ಯ ವಿಲೇವಾರಿ ನಿರ್ವಹಣೆ ದೃಷ್ಟಿಯಿಂದ ರಾಜ್ಯದಲ್ಲಿ ಕಸ ಸಂಗ್ರಹಣೆಗೆವಾಹನ ಖರೀದಿಸಲಾಗಿದೆ.
ಅದಕ್ಕೆ ಮಹಿಳಾ ಚಾಲಕರೇ ಬೇಕೆಂದು ಅಪೇಕ್ಷೆ ವ್ಯಕ್ತವಾಗಿತ್ತು. ಅದಕ್ಕೆಅವಕಾಶ ಮಾಡಿಕೊಡಲಾಗಿದೆ. ತರಬೇತಿ ಪಡೆದಮಹಿಳೆಯರು ಗ್ರಾಮ ಪಂಚಾಯತಿ ವ್ಯಾಪ್ತಿಯಎಲ್ಲ ಗ್ರಾಮಗಳಿಂದಲೂ ಕಸ ಸಂಗ್ರಹಿಸಿ ವಿಲೇವಾರಿಮಾಡಬೇಕು. ಕಸದಿಂದ ಬಂದ ಆದಾಯವನ್ನುಸಿಬ್ಬಂದಿ, ವಾಹನ ವೆಚ್ಚಕ್ಕೆ ಬಳಸಿಕೊಳ್ಳಲು ಅವಕಾಶನೀಡಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲೂಕಿನ 10, ಚನ್ನಗಿರಿ ತಾಲೂಕಿನ17, ಹರಿಹರ ತಾಲೂಕಿನ 5, ಹೊನ್ನಾಳಿ ತಾಲೂಕಿನ7, ನ್ಯಾಮತಿ ತಾಲೂಕಿನ 3, ಮತ್ತು ಜಗಳೂರುತಾಲೂಕಿನ 1 ಗ್ರಾಮ ಪಂಚಾಯತಿಗಳಲ್ಲಿ ಸುಮಾರು17 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವಒಟ್ಟು 42 ಸ್ವತ್ಛ ಸಂಕೀರ್ಣ ಘಟಕಗಳು ಉದ್ಘಾಟನೆಗೆಸಿದ್ಧವಾಗಿವೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಪರಿಣಾಮಕಾರಿಅನುಷ್ಠಾನಕ್ಕಾಗಿ ಜಿಲ್ಲೆಯಲ್ಲಿ ಉಚಿತ ಸಹಾಯವಾಣಿ 18004252203 ಪ್ರಾರಂಭಿಸಲಾಗಿದೆ ಎಂದ ಸಚಿವರು, ಇದಕ್ಕೆ ಸಂಬಂಧಿಸಿದ ಪೋಸ್ಟರ್ ಬಿಡುಗಡೆಮಾಡಿದರು.ಸಂಸದ ಡಾ| ಜಿ.ಎಂ. ಸಿದ್ದೇಶ್ವರ, ಶಾಸಕರಾದಎಸ್.ಎ. ರವೀಂದ್ರನಾಥ್, ಎಸ್.ವಿ. ರಾಮಚಂದ್ರ,ಪ್ರೊ| ಎನ್.ಲಿಂಗಣ್ಣ, ಜಿಲ್ಲಾಧಿಕಾರಿ ಮಹಾಂತೇಶಬೀಳಗಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.