ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ
Team Udayavani, Feb 13, 2019, 8:00 AM IST
ದಾವಣಗೆರೆ: ವಕೀಲರ ಕಲ್ಯಾಣ ನಿಧಿಗೆ ಬಜೆಟ್‌ನಲ್ಲಿ ಹಣ ಮೀಸಲು, ವಕೀಲರ ಸುರಕ್ಷತಾ ಕಾಯ್ದೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಂಗಳವಾರ ರಾಷ್ಟ್ರ ವ್ಯಾಪ್ತಿ ಪ್ರತಿಭಟನೆ ಕರೆ ಬೆಂಬಲಿಸಿ, ವಕೀಲರು ಕಲಾಪದಿಂದ ಹೊರ ಉಳಿದು ಪ್ರತಿಭಟಿಸಿದ್ದಾರೆ.
ಈ ಬಾರಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ ವಕೀಲರ ಕಲ್ಯಾಣ ನಿಧಿಗೆ ಹಣ ಮೀಸಲಿಡ ಬಗ್ಗೆ ವಕೀಲರ ಸಂಘ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆಯಲ್ಲದೆ, ಕಲ್ಯಾಣ ನಿಧಿಗೆ 5,000 ಕೋಟಿ ಅನುದಾನ ಮೀಸಲಿಡಲು ದಾವಣಗೆರೆ ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ವಕೀಲರು ಪ್ರತಿಭಟಿಸಿದರು.
ವಕೀಲರ ಸಂಘಕ್ಕೆ ಕಟ್ಟಡ, ಮೂಲಭೂತ ಸೌಕರ್ಯ, ಮಹಿಳಾ ವಕೀಲರಿಗೆ ಶೌಚಾಲಯ ಸೌಲಭ್ಯ ಕಲ್ಪಿಸಲು ಸರ್ಕಾರ ಮುಂದಾಗಬೇಕೆಂದು ಒತ್ತಾಯಿಸಲಾಗಿದೆ. ವಕೀಲರು ಮತ್ತವರ ಕುಟುಂಬದವರಿಗೆ ವಿಮಾ ಸೌಲಭ್ಯ, ಹೊಸದಾಗಿ ವೃತ್ತಿ ಆರಂಭಿಸುವವರಿಗೆ 5 ವರ್ಷದವರೆಗೆ ಕನಿಷ್ಠ 10 ಸಾವಿರ ರೂ. ಸ್ಟೈಪಂಡ್, ವಕೀಲರು ಕಾಯಿಲೆಯಿಂದ ಮರಣ ಹೊಂದಿದಲ್ಲಿ ಅವರ ಕುಟುಂಬದವರಿಗೆ ಆರ್ಥಿಕ ನೆರವು, ಕಡಿಮೆ ದರದಲ್ಲಿ ವಸತಿ ಒದಗಿಸುವುದು, ವಕೀಲರ ಸುರಕ್ಷತೆಗಾಗಿ ಕಾಯ್ದೆ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸಂಘದ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಸಂಘದ ಜಿಲ್ಲಾಧ್ಯಕ್ಷ ಎನ್.ಟಿ. ಮಂಜುನಾಥ್, ಕಾರ್ಯದರ್ಶಿ ಬಿ.ಎಸ್. ಲಿಂಗರಾಜ್, ಎಲ್.ಶ್ಯಾಮ್ ಇತರರು ಮನವಿ ಸಲ್ಲಿಸಿದ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.