![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Apr 21, 2024, 8:38 AM IST
ದಾವಣಗೆರೆ: “ದೇಶಕ್ಕೆ ಮೋದಿ, ದಾವಣಗೆರೆಗೆ ಗಾಯಿತ್ರಿ ಸಿದ್ದೇಶ್ವರ’ ಎಂದು ಜನ ಈಗಾಗಲೇ ತೀರ್ಮಾನ ಮಾಡಿದ್ದಾರೆ. ಶುಕ್ರವಾರ ನಾಮಪತ್ರ ಸಲ್ಲಿಕೆ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಜನಸ್ತೋಮ ನಮ್ಮ ಗೆಲುವಿನ ದಿಕ್ಸೂಚಿ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಹೇಳಿದರು.
ನಗರದ ಟಿವಿ ಸ್ಟೇಶನ್ ಪಾರ್ಕ್, ಡಿಸಿಎಂ ಟೌನ್‌ಶಿಪ್‌ನ ರಾಜನಹಳ್ಳಿ ಹನುಮಂತಪ್ಪ ಪಾರ್ಕ್, ಜಯನಗರದ ಉದ್ಯಾನವನ, ಸ್ವಾಮಿ ವಿವೇಕಾನಂದ ಪಾರ್ಕ್, ರೈಲ್ವೆ ನಿಲ್ದಾಣ, ಆಟೋ ನಿಲ್ದಾಣ, ಇಂಡಿಯನ್ ಕಾμ ಬಾರ್ ಸೇರಿದಂತೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಬಳಿ ಮತಯಾಚಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು. ದೇಶದಲ್ಲಿ ನರೇಂದ್ರ ಮೋದಿ ಅವರ ಆಡಳಿತ, ಲೋಕಸಭಾ ಕ್ಷೇತ್ರದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ ಅವರ ಅಭಿವೃದ್ಧಿ ಕಾರ್ಯಗಳನ್ನು ಮನಗಂಡು ಮತದಾರರು ದೇಶಕ್ಕೆ ಮೋದಿ, ದಾವಣಗೆರೆಗೆ ಗಾಯಿತ್ರಿ ಸಿದ್ದೇಶ್ವರ ಎಂದು ತೀರ್ಮಾನ ಮಾಡಿದ್ದಾರೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಜಿಹಾದಿಗಳು ಹೆಚ್ಚಾಗುತ್ತಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಭಯೋತ್ಪಾದಕರು ಹೆಚ್ಚಾಗುತ್ತಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದ ಸಾಮಾನ್ಯ ಜನರಿಗೂ ರಕ್ಷಣೆ ಇಲ್ಲದಂತೆ ಆಗುತ್ತದೆ. ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದು 10 ವರ್ಷಆಯಿತು. ಭಯೋತ್ಪಾದಕರು ದೇಶ ಬಿಟ್ಟು ಹೋಗಿದ್ದಾರೆ. ನಮಗೆ ಮೋದಿಯವರು ಇನ್ನೊಮ್ಮೆ ಪ್ರಧಾನಿ ಆಗಬೇಕು. ಅದಕ್ಕಾಗಿ ಬಿಜೆಪಿಗೆ ಮತ ಹಾಕಬೇಕು ಎಂದು ಮನವಿ ಮಾಡಿದರು.
ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ಕಮಲಾ ನಿರಾಣಿ, ಮಾಜಿ ಮೇಯರ್‌ಎಸ್.ಟಿ. ವಿರೇಶ್, ಹೇಮಂತ್ ಕುಮಾರ್, ವೀರೇಶ್ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಇದ್ದರು.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
You seem to have an Ad Blocker on.
To continue reading, please turn it off or whitelist Udayavani.