ಏ.1 ಜ್ಞಾನದಿನವಾಗಿ ಸರ್ಕಾರ ಆಚರಿಸಲಿ
Team Udayavani, Jan 26, 2019, 7:56 AM IST
ದಾವಣಗೆರೆ: ತುಮಕೂರಿನ ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಯವರ ಜನ್ಮದಿನವಾದ ಏ.1ನೇ ತಾರೀಕನ್ನು ಜ್ಞಾನ ದಿನವಾಗಿ ಸರ್ಕಾರ ಆಚರಿಸಬೇಕು ಎಂದು ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಆಗ್ರಹಿಸಿದರು.
ನಗರದ ಕಾಯಿಪೇಟೆಯ ಬಸವೇಶ್ವರ ಪುತ್ಥಳಿ ಮುಂಭಾಗದಲ್ಲಿ ಶುಕ್ರವಾರ ಸ್ವಾಗತ್ ಯುವಕರ ಸಂಘದಿಂದ ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ಹಮ್ಮಿಕೊಂಡಿದ್ದ ನುಡಿನಮನ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ದೇಶದಲ್ಲೆಡೆ ಏ.1 ನ್ನು ಮೂರ್ಖರ ದಿನವೆಂದು ಆಚರಿಸಲಾಗುತ್ತಿದೆ. ಆದರೆ, ಆ ದಿನವನ್ನು ಜ್ಞಾನದ ದಿನವಾಗಿ ಆಚರಿಸುವ ಮೂಲಕ ಸಿದ್ಧಗಂಗಾ ಶ್ರೀಗಳಿಗೆ ಗೌರವ ಸಲ್ಲಿಸಬೇಕು ಎಂದರು.
ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂಬ ಆಗ್ರಹ ಎಲ್ಲೆಡೆ ಕೇಳಿಬರುತ್ತಿದೆ. ಆದರೆ, ಶ್ರೀಗಳು ಎಂದೂ ಪ್ರಶಸ್ತಿ ಬಯಸಿದವರಲ್ಲ. ಅವರಿಗೆ ಭಾರತರತ್ನ ನೀಡಬೇಕು ಎಂಬುದು ಕೇವಲ ಒಬ್ಬರ ಮಾತಲ್ಲ. ಕೋಟ್ಯಾಂತರ ಭಕ್ತರ ಆಗ್ರಹವಾಗಿದೆ. ಈ ಪ್ರಶಸ್ತಿ ನೀಡುವುದರಿಂದ ಪ್ರಶಸ್ತಿಯ ಗೌರವ ಮತ್ತಷ್ಟು ಹೆಚ್ಚುತ್ತದೆ ಎಂದು ಹೇಳಿದರು.
ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಸಾನ್ನಿಧ್ಯವಹಿಸಿ ಮಾತನಾಡಿ, ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ಭಾರತ ರತ್ನ ನೀಡಬೇಕೆಂಬುದು ಅಸಂಖ್ಯಾತ ಭಕ್ತರ ಆಗ್ರಹವಾಗಿದೆ. ಅನ್ನ, ಅಕ್ಷರ, ಆಶ್ರಯದಂತಹ ತ್ರಿವಿಧ ದಾಸೋಹಗಳಿಂದ ಶ್ರೀಗಳಿಂದು ಕೋಟ್ಯಾಂತರ ಜನರ ಮನಸ್ಸಿನಲ್ಲಿ ದೊಡ್ಡರತ್ನವಾಗಿ ಮನೆ ಮಾಡಿದ್ದಾರೆ. ಹುಟ್ಟಿದ ಬಳಿಕ ಒಳ್ಳೆಯ ಕಾರ್ಯಗಳ ಮೂಲಕ ಹೇಗೆ ಜನರು ಜೀವನ ಸಾರ್ಥಕ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಸನ್ಮಾರ್ಗದ ದಾರಿ ತೋರಿಸಿರುವ ದಿವ್ಯಜ್ಯೋತಿಯಾಗಿದ್ದಾರೆ ಎಂದರು.
ಚಿತ್ರದುರ್ಗದ ಮುರುಘಾಮಠದ ಮೇಲೆ ಸಿದ್ಧಗಂಗಾ ಶ್ರೀಗಳು ಅಪಾರ ಭಕ್ತಿಶ್ರದ್ಧೆಯನ್ನು ಹೊಂದಿದ್ದರು. ಮೊಟ್ಟಮೊದಲ ಬಾರಿಗೆ ಜಯದೇವ ಶ್ರೀಗಳು ಪ್ರಾರಂಭಿಸಿದ ಉಚಿತ ಪ್ರಸಾದ ನಿಲಯದ ಪರಿಕಲ್ಪನೆಯನ್ನು ತಮ್ಮ ಮಠದ ಮೂಲಕವೂ ಹೆಚ್ಚು ಕಾರ್ಯರೂಪಕ್ಕೆ ತಂದರು ಎಂದು ಸ್ಮರಿಸಿಕೊಂಡರು.
ಆವರಗೊಳ್ಳ ಪುರವರ್ಗ ಹಿರೇಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಸಿದ್ಧಗಂಗಾ ಶಾಲೆ ಮುಖ್ಯೋಪಾಧ್ಯಾಯಿನಿ ಜಸ್ಟಿನ್ ಡಿಸೋಜಾ, ಪತ್ರಕರ್ತ ವೀರಪ್ಪ ಎಂ. ಬಾವಿ,ಹದಡಿ ನಟರಾಜ್, ಶಂಕರ್, ಶಾಂತಕುಮಾರ್ ಸೋಗಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.