ವಲಸೆ ಕಾರ್ಮಿಕರ ಸ್ಥಿತಿ-ಸೌಲಭ್ಯ ಪರಿಶೀಲನೆ
ಸ್ಥಳಕ್ಕೆ ತೆರಳಿ ಕಾರ್ಮಿಕರ ಸ್ಥಿತಿಗತಿ ಅವಲೋಕಿಸಿದ ಹಿರಿಯ ಸಿವಿಲ್ ನ್ಯಾಯಾಧೀಶ
Team Udayavani, Apr 12, 2020, 11:50 AM IST
ದಾವಣಗೆರೆ: ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಪ್ರಭು ಎನ್.ಬಡಿಗೇರ್ ವಲಸೆ ಕಟ್ಟಡ ಕಾರ್ಮಿಕರ ಸ್ಥಿತಿಗತಿ ಬಗ್ಗೆ ವಿಚಾರಿಸಿದರು.
ದಾವಣಗೆರೆ: ಕರೊನಾ ವೈರಸ್ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಹಾಗೂ ಕೇಂದ್ರ ಕಾನೂನು ಸೇವಾ ಪ್ರಾಧಿಕಾರದ ಸೂಚನೆಯಂತೆ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಭು ಎನ್. ಬಡಿಗೇರ್ ಶನಿವಾರ ನಗರದಲ್ಲಿನ ವಲಸೆ ಕೂಲಿ ಕಾರ್ಮಿಕರ ಸ್ಥಿತಿಗತಿ ಅವಲೋಕಿಸಿದರು.
ಪಾಲಿಕೆಯ 381 ಪೌರಕಾರ್ಮಿಕರಿಗಾಗಿ ದೊಡ್ಡ ಬೂದಿಹಾಳ್‌ನಲ್ಲಿ ನಿರ್ಮಿಸುತ್ತಿರುವ ಗೃಹಭಾಗ್ಯ ವಸತಿ ಸಮುಚ್ಚಯದ ಕಟ್ಟಡ ಕಾಮಗಾರಿಯಲ್ಲಿ 42 ಮಂದಿ ಕಾರ್ಮಿಕರು ತೊಡಗಿದ್ದಾರೆ. ಈ ಪೈಕಿ ಮಧ್ಯಪ್ರದೇಶದ 27, ತಮಿಳುನಾಡಿನ ಒಬ್ಬರು ಹಾಗೂ ಕರ್ನಾಟಕದ ವಿಜಯಪುರ, ರಾಯಚೂರು, ಉಡುಪಿ ಜಿಲ್ಲೆಗಳ 14 ಕಾರ್ಮಿಕರಿದ್ದಾರೆ. ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ನ್ಯಾಯಾಧೀಶ ಪ್ರಭು ಎನ್. ಬಡಿಗೇರ್, ಪಾಲಿಕೆ ವತಿಯಿಂದ ಮಾಸ್ಕ್, ಕೈಗವಸು, ಕುಡಿವ ನೀರು, ಶೌಚಗೃಹ ವ್ಯವಸ್ಥೆ ಮಾಡಿದ್ದಾರೆಯೇ ಎಂಬುದಾಗಿ ಪ್ರಶ್ನಿಸಿ, ಎಲ್ಲರೂ ತಪ್ಪದೇ ಮಾಸ್ಕ್ ಧರಿಸಬೇಕೆಂದರು.
ಕೆಲವರು ಮಾಸ್ಕ್ ಬದಲಿ ಕರವಸ್ತ್ರ ಧರಿಸಿದ್ದವರು ಮಾಸ್ಕ್ ತೊಳೆಯಲು ಹಾಕಿದ್ದೇವೆ ಎಂದು ತಿಳಿಸಿದರು. ಗುತ್ತಿಗೆದಾರರೇ ಈ ಕಾರ್ಮಿಕರಿಗೆ ಊಟ ಕಲ್ಪಿಸುತ್ತಿದ್ದಾರೆ ಎಂದು ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ನ್ಯಾಯಾಧೀಶರ ಗಮನಕ್ಕೆ ತಂದರು. ಸ್ಮಾರ್ಟ್‌ಸಿಟಿ ಯೋಜನೆಯಡಿ ಚರಂಡಿ ಕಾಮಗಾರಿಯನ್ನು ತೆಲಂಗಾಣದ 15 ಹಾಗೂ ಕರ್ನಾಟಕದ 8 ಮಂದಿ ನಿರ್ವಹಿಸುತ್ತಿದ್ದಾರೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಇವರೆಲ್ಲರೂ ರಾಜೀವ್‌ಗಾಂಧಿ ಬಡಾವಣೆಯ ಪಾರ್ಕ್ ಜಾಗದಲ್ಲಿ ತಂಗಿದ್ದಾರೆ. ಅಲ್ಲಿಯೂ ಭೇಟಿಯಿತ್ತ ನ್ಯಾಯಾಧೀಶರು ಸ್ಮಾರ್ಟ್ ಸಿಟಿ ಎಂಡಿ ಭೇಟಿ ನೀಡಿದ್ದಾರೆಯೆ? ನಿಮಗೆ ಊಟ, ನೀರಿನ ಸಮಸ್ಯೆ ಇದೆಯೇ ಎಂದು ಪ್ರಶ್ನಿಸಿದರು.
ಜಿಲ್ಲಾಡಳಿತದಿಂದ ಈ ಭಾಗಕ್ಕೆ ಎರಡು ಬಾರಿ ಆಹಾರಧಾನ್ಯ ನೀಡಲಾಗಿದೆ. ಪಾಲಿಕೆಯಿಂದ ಐದು ದಿನಗಳ ಕಾಲ ಹಾಲು ವಿತರಿಸಿದ್ದೇವೆ. ವಿದ್ಯುತ್ ಸರಬರಾಜು ವ್ಯವಸ್ಥೆ ಸರಿಪಡಿಸಲಾಗುವುದು ಎಂದು ಆಯುಕ್ತರು ಇದೇ ಸಂದರ್ಭದಲ್ಲಿ ತಿಳಿಸಿದರು. ಲಾಕ್‌ಡೌನ್ ಹಿನ್ನೆಲೆಯಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸದಿದ್ದರೂ ಕೂಲಿ ನಿಲ್ಲಿಸದಿರುವಂತೆ ಸೂಚನೆ ಇದೆ. ಅದರಂತೆ ಸಂಬಳ ನಿಲ್ಲಿಸಬೇಡಿ ಎಂದು ಸ್ಮಾರ್ಟ್‌ಸಿಟಿ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.