Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Team Udayavani, Sep 19, 2024, 10:14 PM IST
ದಾವಣಗೆರೆ:ನಗರದ ಬೇತೂರು ರಸ್ತೆಯ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ.
ಗುರುವಾರ ಸಂಜೆ ಬೇತೂರು ರಸ್ತೆಯಲ್ಲಿ ಗಣೇಶನ ಮೆರವಣಿಗೆ ನಡೆಯುತ್ತಿದ್ದ ವೇಳೆ ಏಕಾಏಕಿ ಕಲ್ಲುಗಳ ತೂರಾಟ ನಡೆದಿದ್ದು ಇಬ್ಬರು ಪೊಲೀಸ್ ಸಿಬ್ಬಂದಿ ಸೇರಿದಂತೆ 5ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಕೂಡಲೇ ಪೊಲೀಸ್ ಸಿಬ್ಬಂದಿ ಪರಿಸ್ಥಿತಿ ನಿಯಂತ್ರಣ ಮಾಡಿದ್ದಾರೆ. ಈಗ ಪರಿಸ್ಥಿತಿ ಶಾಂತವಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು.
ವೆಂಕಾಭೋವಿ ಕಾಲೋನಿಯ ಗಣೇಶನ ಮೆರವಣಿಗೆ ಪ್ರತಿ ವರ್ಷದ ಮಾರ್ಗದಲ್ಲೇ ಸಾಗುತ್ತಿದ್ದಾಗ ಈ ಘಟನೆ ನಡೆದಿದೆ.
ತಾವು ಒಳಗೊಂಡಂತೆ ಎಲ್ಲ ಅಧಿಕಾರಿಗಳು ರೌಂಡ್ಸ್ ಮಾಡುತ್ತಿದ್ದೇವೆ. ಪರಿಸ್ಥಿತಿ ಶಾಂತ ವಾಗಿದೆ. ಗಣೇಶನ ಮೂರ್ತಿಯನ್ನು ವಿಸರ್ಜನೆಗೆ ಕಳಿಸಿಕೊಡಲಾಗಿದೆ ಎಂದು ತಿಳಿಸಿದರು.
ಬುಧವಾರ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಒಕ್ಕೂಟದ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
144 ಸೆಕ್ಷನ್ ಜಾರಿ ಸಂಬಂಧಿಸಿದಂತೆ ಜಿಲ್ಲಾ ಧಿಕಾರಿಗಳ ಜೊತೆ ಮಾತನಾಡಲಾಗಿದೆ. ಬೇತೂರು ರಸ್ತೆಯಲ್ಲಿನ ಘಟನೆಗೆ ಸಂಬಂಧಿಸಿದಂತೆ ಯಾರನ್ನೂ ವಶಕ್ಕೆ ತೆಗೆದು ಕೊಂಡಿಲ್ಲ. ಎಲ್ಲವನ್ನೂ ಪರಿಶೀಲನೆ ನಡೆಸಿದ ನಂತರ ಸೂಕ್ತ ಕ್ರಮ ತೆಗೆದುಕೊಳ್ಳ ಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honnali: ಮಹಿಳೆಯನ್ನು ತವರಿನಿಂದ ಒತ್ತಾಯಪೂರ್ವಕವಾಗಿ ಕರೆದುಕೊಂಡ ಹೋದ ಪತಿ, ಸಂಬಂಧಿಕರು
ಬಜೆಟ್‌ನಲ್ಲಿ ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನಕ್ಕೆ ಪ್ರಣವಾನಂದ ಸ್ವಾಮೀಜಿ ಆಗ್ರಹ
CM Post: ಐದು ವರ್ಷವೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
Congress: ಇದೇ ಅವಧಿಯಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ: ಶಾಸಕ ಶಿವಗಂಗಾ
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.