Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ
Team Udayavani, May 14, 2024, 6:58 PM IST
ದಾವಣಗೆರೆ: ಅಡಕೆ ಮರಗಳನ್ನು ಕಡಿದಿದ್ದ ಕೋಪದಿಂದ ಮಹಿಳೆಯನ್ನು ನೇಣು ಬಿಗಿದು ಕೊಲೆ ಮಾಡಿ ಭದ್ರಾ ನಾಲೆಯಲ್ಲಿ ಎಸೆದ್ದಿದ್ದ ಇಬ್ಬರು ಆರೋಪಿಗಳನ್ನು ಬಸವಾಪಟ್ಟಣ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ನಾಗೊಲೆ (ಅರಕೆರೆ ಗೇಟ್) ನಿವಾಸಿ ಎಚ್.ಜಿ. ಕುಮಾರ್ (50), ಅರಕೆರೆ ಗ್ರಾಮದ ಚಿದಾನಂದಪ್ಪ (54) ಬಂಧಿತರು.
ಇವರಿಬ್ಬರು ಏ. 20 ರಂದು ಅರಕೆರೆ ಗ್ರಾಮದ ನೇತ್ರಾವತಿ (47) ಎಂಬುವರನ್ನು ತೋಟದಲ್ಲಿ ಕೊಲೆ ಮಾಡಿ, ಭದ್ರಾ ನಾಲೆಯಲ್ಲಿ ಶವವನ್ನು ಎಸೆದಿದ್ದರು.
ಚನ್ನಗಿರಿ ತಾಲೂಕಿನ ಕಣಿವೆ ಬಿಳಚಿ ಗ್ರಾಮದ ಬಳಿ ಭದ್ರಾ ನಾಲೆಯಲ್ಲಿ ಮೇ 5ರಂದು ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕೊರಳಲ್ಲಿ ಹಗ್ಗ ಸುತ್ತಿದ ರೀತಿಯಲ್ಲಿದ್ದು, ಯಾರೋ ಎಲ್ಲಿಯೋ ಕೊಲೆ ಮಾಡಿ ನಾಲೆಗೆ ಹಾಕಿರಬಹುದು ಎಂಬ ಅನುಮಾನದಿಂದ ಬಸವಾಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ ಎಂ. ಸಂತೋಷ್, ಜಿ.ಮಂಜುನಾಥ್, ಚನ್ನಗಿರಿ ಡಿವೈಎಸ್ಪಿ ಪ್ರಶಾಂತ್ ಮನ್ನೋಳಿ ಮಾರ್ಗದರ್ಶನದಲ್ಲಿ ಸಂತೇಬೆನ್ನೂರು ವೃತ್ತ ನಿರೀಕ್ಷಕ ಗೋಪಾಲನಾಯ್ಕ್ ಸಿಬ್ಬಂದಿಗಳ ತಂಡ ಶವದ ಗುರುತು ಪತ್ತೆಗಾಗಿ ಜಿಲ್ಲೆಯ ಹಾಗೂ ಅಕ್ಕ ಪಕ್ಕದ ಜಿಲ್ಲೆಗಳ ಕಾಣೆಯಾದ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಿದ್ದರು. ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಪತ್ತೆ ಪ್ರಕರಣದ ಮಹಿಳೆಯ ಚಹರೆಗೂ ಹಾಗೂ ಅನಾಮಧೇಯ ಶವದ ಚಹರೆಗೂ ಹೋಲಿಕೆ ಕಂಡು ಬಂದಿತ್ತು. ಈ ವೇಳೆ ಹೆಚ್ಚಿನ ವಿಚಾರಣೆ ನಡೆಸಿದಾಗ ಕೊಲೆಯಾದ ಮಹಿಳೆ ಅರಕೆರೆ ಗ್ರಾಮದ 47 ವರ್ಷದ ನೇತ್ರಾವತಿ ಎಂಬುದು ಪತ್ತೆಯಾಯಿತು.
ಎಲ್ಲ ಆಯಾಮಗಳಲ್ಲಿ ತೀವ್ರ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು, ವಿಚಾರಣೆ ಮಾಡಿದಾಗ ಕೊಲೆಗೀಡಾದ ನೇತ್ರಾವತಿ ಏ.20 ರಂದು ಜಮೀನಿನಲ್ಲಿ ಅಡಕೆ ಗಿಡಗಳನ್ನು ಕಡಿದಿದ್ದರಿಂದ ಕೋಪಗೊಂಡ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ನಂತರ ಜಮೀನಿನ ಸಮೀಪದ ಭದ್ರಾ ಚಾನಲ್ ನಲ್ಲಿ ಶವವನ್ನು ಹಾಕಿದ್ದಾಗಿ ಆರೋಪಿಗಳು ಹೇಳಿದ್ದಾರೆ.
ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿತರ ಬಂಧನದ ಕಾರ್ಯಾಚರಣೆಗೆ ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಪ್ರಶಂಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.