Davanagere; ಶವ ಹೊರ ತೆಗೆದ ವಿಚಾರಕ್ಕೆ ಗುಂಪುಗಳ ಮಾರಾಮಾರಿ: 28 ಜನರ ಬಂಧನ
ಮಳೆಯಾಗುತ್ತಿಲ್ಲ ಎಂದು ಶವ ಹೊರ ತೆಗೆದು ಸುಟ್ಟ ವಿಚಾರಕ್ಕೆ...
Team Udayavani, Sep 3, 2023, 10:10 PM IST
ದಾವಣಗೆರೆ: ಅಂತ್ಯಸಂಸ್ಕಾರ ನೆರವೇರಿಸಿದ್ದ ಪಾರ್ಥಿವ ಶರೀರವನ್ನು ಹೊರ ತೆಗೆದ ಘಟನೆ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿಗೆ ಸಂಬಂಧಿಸಿದಂತೆ 28 ಜನರನ್ನು ಮಾಯಕೊಂಡ ಪೊಲೀಸರು ಬಂಧಿಸಿದ್ದಾರೆ.
ಮಾಯಕೊಂಡ ಠಾಣಾ ವ್ಯಾಪ್ತಿಯ ನಲ್ಕುಂದ ಗ್ರಾಮದಲ್ಲಿ ಕಳೆದ ಆ. 4 ರಂದು ಲಕ್ಷ್ಮೀದೇವಿ(60)ಎಂಬುವರು ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದು ನಂತರ ಮೃತ ದೇಹವನ್ನು ಅವರ ಜಾಗದಲ್ಲಿಯೇ ಅಂತ್ಯಸಂಸ್ಕಾರ ನೆರವೇರಿಸಲಾಗಿತ್ತು. ಈಚೆಗೆ ಸುತ್ತ-ಮುತ್ತಲಿನ ಗ್ರಾಮಗಳಲ್ಲಿ ಮಳೆಯಾಗಿದ್ದು ಗ್ರಾಮದಲ್ಲಿ ಮಾತ್ರ ಮಳೆಯಾಗದ ಕಾರಣ ಗ್ರಾಮದ ಗ್ರಾಮಸ್ಥರು ಎಲ್ಲ ಸೇರಿಕೊಂಡು ಈ ಹಿಂದೆ ಮೃತಪಟ್ಟಿದ್ದ ಲಕ್ಷ್ಮೀದೇವಿಗೆ ತೊನ್ನು ಇದ್ದರೂ ಮಣ್ಣು ಮಾಡಿರುವ ಕಾರಣಕ್ಕೆ ಗ್ರಾಮದಲ್ಲಿ ಮಳೆಯಾಗುತ್ತಿಲ್ಲ. ಆದ್ದರಿಂದ ಲಕ್ಷ್ಮೀದೇವಿ ಶವವನ್ನು ಹೊರ ತೆಗೆದು ಸುಡಲು ತೀರ್ಮಾನಿಸಿ ಅದರಂತೆ ಶನಿವಾರ ಸಂಜೆ ಲಕ್ಷ್ಮೀದೇವಿಯ ಮೃತದೇಹವನ್ನು ಹೊರ ತೆಗೆದು ಅದೇ ಜಾಗದಲ್ಲಿ, ಸುಡುವ ಸಮಯದಲ್ಲಿ ನಲ್ಕುಂದ ಗ್ರಾಮದ ಸ್ವಾಮಿ ಮತ್ತು ನವೀನ್ ಕುಮಾರ್ ರವರ ನಡುವೆ ಮಾತಿನ ಜಗಳವಾಗಿದೆ. ಅದೇ ವಿಷಯವಾಗಿ ನಲ್ಕುಂದ ಗ್ರಾಮದ ದುರುಗಮ್ಮ ದೇವಸ್ಥಾನದ ಬಳಿ ಜಗಳ ನಡೆದಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎ.ಆರ್.ಬಸರಗಿ, ಗ್ರಾಮಾಂತರ ಪೊಲೀಸ್ ಉಪಾಧೀಕ್ಷಕರು ಭೇಟಿ ನೀಡಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ ಮಾಡಲಾಗಿದೆ. ಎರಡು ಪ್ರಕರಣ ದಾಖಲಾಗಿದ್ದು, 28 ಜನರನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್‌ಗೆ
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.