ಸಚಿವ-ಸಂಸದರ ಹೇಳಿಕೆಗೆ ಯುವ ಕಾಂಗ್ರೆಸ್ ಆಕ್ರೋಶ
Team Udayavani, Aug 30, 2021, 7:05 PM IST
ದಾವಣಗೆರೆ: ರಾಜ್ಯ ಮಾತ್ರವಲ್ಲ, ದೇಶವನ್ನೇ ಬೆಚ್ಚಿ ಬೀಳಿಸಿರುವ ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಕುರಿತಂತೆ ಗೃಹ ಸಚಿವ ಅರಗ ಜ್ಞಾನೇಂದ್ರ, ದಾವಣಗೆರೆ ಸಂಸದ ಡಾ| ಜಿ.ಎಂ. ಸಿದ್ದೇಶ್ವರ ಹೇಳಿಕೆ ಖಂಡನೀಯ ಎಂದು ಆರೋಪಿಸಿ ಭಾನುವಾರ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಿಖೀಲ್ಕೊಂಡಜ್ಜಿ ಮಾತನಾಡಿ, ಗೃಹ ಸಚಿವ ಅರಗ ಜ್ಞಾನೇಂದ್ರ, ದಾವಣಗೆರೆ ಸಂಸದ ಡಾ| ಜಿ.ಎಂ. ಸಿದ್ದೇಶ್ವರ ಅವರಿಗೆ ರಾಜ್ಯ, ದೇಶದ ದೈನಂದಿನ ಘಟನೆಗಳ ಬಗ್ಗೆ ಮಾಹಿತಿಯೇ ಇಲ್ಲ ಎಂದ ಮೇಲೆ ಸಂಸದರು ಸಾರ್ವಜನಿಕ ಕ್ಷೇತ್ರದಲ್ಲಿ ಇರುವುದು ಎಷ್ಟು ಸೂಕ್ತ, ದಾವಣಗೆರೆ ಸಂಸದರು ಜಿಲ್ಲೆಯ ಜನರ ಸಮಸ್ಯೆಗಳ ಬಗ್ಗೆ ಪತ್ರಿಕೆಗಳಲ್ಲಿ ಬಂದರೆ ನಾನು ಪತ್ರಿಕೆಯನ್ನು ನೋಡುವುದಿಲ್ಲ ಎಂದು ಸುಮ್ಮನಿರುತ್ತಾರೆಯೇ ಎಂದು ಪ್ರಶ್ನಿಸಿದರು.
ಸಂಸದರಿಗೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಬಗ್ಗೆ ಪ್ರಶ್ನಿಸಿದರೆ ನಡೆದುಕೊಂಡು ಓಡಾಡಿ ಎಂದಿದ್ದರು. ಪೆಟ್ರೋಲ್-ಡೀಸೆಲ್ ಹಾಕಿಸಲು ಹಣವಿಲ್ಲದಿದ್ದರೆ ನನ್ನ ಬಳಿ ಬನ್ನಿ ಎಂದು ಸಹ ಹೇಳಿದ್ದರು.
ಮೈಸೂರಿನಲ್ಲಿ ಯುವತಿಯ ಮೇಲೆ ನಡೆದ ಅತ್ಯಾಚಾರದ ಬಗ್ಗೆ ಪ್ರಶ್ನಿಸಿದರೆ ನನಗೆ ಮಾಹಿತಿಯೇ ಇಲ್ಲ ಎನ್ನುತ್ತಿರುವುದನ್ನು ನೋಡಿದರೆ ಸಂಸದರು ತಾವು ಜನಪ್ರತಿನಿಧಿ ಎಂಬುದನ್ನು ಮರೆತಂತಿದೆ ಎಂದು ವಾಗ್ಧಾಳಿ ನಡೆಸಿದರು.
ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಇಲಾಹಿ ಸಿಕಂದರ್ ಮಾತನಾಡಿ, ಗೃಹ ಸಚಿವರು ತಮ್ಮ ಖಾತೆಯ ಮಹತ್ವವನ್ನೇ ತಿಳಿದಂತಿಲ್ಲ. ರಾಜ್ಯದ ಜನರ ರಕ್ಷಣೆ ನೀಡಬೇಕಾದಂತಹ ಮಹತ್ತರ ಖಾತೆಯಲ್ಲಿ ಇರುವಂತಹ ಅರಗ ಜ್ಞಾನೇಂದ್ರ ಅವರು ಉಡಾಫೆ ಮಾತುಗಳಿಂದ ಗೃಹಖಾತೆಯ ಮಹತ್ವವನ್ನೇ ಕಳೆಯುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಎಚ್. ಜೆ. ಮೊಹಿದ್ದಿನ್ ಮಾತನಾಡಿ, ದೇಶದಲ್ಲಿ ತಮಗೆ ಬೇಕಾದ ವಿಷಯಗಳ ಬಗ್ಗೆ ಕಾನೂನು ತಿದ್ದುಪಡಿ ಮಾಡುತ್ತಿರುವ ಸರ್ಕಾರ, ಅತ್ಯಾಚಾರದ ಬಗ್ಗೆ ಮಾತ್ರ ಮೃದು ಧೋರಣೆ ತೋರುತ್ತಿರುವುದು ವಿಷಾದನೀಯ ಎಂದು ದೂರಿದರು.
ಸಾಮಾಜಿಕ ಜಾಲತಾಣ ರಾಜ್ಯ ಕಾರ್ಯದರ್ಶಿ ಕೆ. ಎಲ್.ಹರೀಶ್ ಬಸಾಪುರ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂಜಿತ್, ವಿನಯ್ ಜೋಗಪ್ಪನವರ್, ಇಮ್ರಾನ್ ಖಾನ್, ವಾಜಿದ್, ಇರ್ಫಾನ್, ಓ.ಜಿ. ಕಿರಣ್, ಐಜ್ ಅಹಮದ್, ಜಫರುಲ್ಲ, ನದೀಮ್, ನವೀನ್ ನಾಲವಾಡಿ, ಜಬೀವುಲ್ಲಾ, ಖ್ವಾಜಾ, ಮೈನುದ್ದಿನ್, ಮೊಹಮದ್ ಬಾಷಾ, ತಿಪ್ಪೇಶ್, ಬಿಲಾಲ್,ವಿನೋದ್, ಸಂತೋಷ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.