Davanagere; ಖಾಸಗಿ ಕ್ಷಣಗಳ ವಿಡಿಯೋ ವೈರಲ್: ಮನನೊಂದ ವಿದ್ಯಾರ್ಥಿಗಳಿಬ್ಬರು ಆತ್ಮಹತ್ಯೆ
Team Udayavani, Jul 29, 2023, 7:56 PM IST
ದಾವಣಗೆರೆ: ತಮ್ಮ ಖಾಸಗಿ ಕ್ಷಣಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದರಿಂದ ಮನನೊಂದು ನಗರದ ಪದವಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು (ಯುವಕ ಯುವತಿ) ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ನಗರದಲ್ಲಿ ಸಂಭವಿಸಿದೆ.
ಕಾಲೇಜಿನ ವಿದ್ಯಾರ್ಥಿಗಳಾದ ಯುವಕ ಯುವತಿಯರಿಬ್ಬರೂ ಪ್ರೇಮಿಗಳಾಗಿದ್ದು ಅವರು ಕೆಲ ದಿನಗಳ ಹಿಂದೆ ಕಾಲೇಜಿನ ಮಹಡಿ ಮೇಲೆ ಖಾಸಗಿ ಕ್ಷಣಗಳನ್ನು ಕಳೆದಿದ್ದರು. ಇದನ್ನು ಎದುರಿನ ಕಟ್ಟಡವೊಂದರಲ್ಲಿ ನಿಂತು ಕೆಲವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ವಿಡಿಯೋ ತುಣುಕುಗಳು ಎಲ್ಲೆಡೆ ಹರಿದಾಡಿದ್ದರಿಂದ ಮನ ನೊಂದ ಯುವತಿ ಶುಕ್ರವಾರ ಮಧ್ಯಾಹ್ನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡರೆ, ಈ ವಿಷಯ ತಿಳಿದು ಯುವಕ ಸಹ ಶುಕ್ರವಾರ ತಡರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕಾಲೇಜಿನ ಹುಡುಗ ಹುಡುಗಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುರಿತು ವಿದ್ಯಾರ್ಥಿಗಳ ಪೋಷಕರು ಪ್ರತ್ಯೇಕ ದೂರು ನೀಡಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್ ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್ಐಟಿ ತನಿಖೆ ಮಾಡಿಸಲಿ”
Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ
Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Director Guruprasad: ಗುರುಪ್ರಸಾದ್ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.