Davanagere; ಸಿದ್ದರಾಮಯ್ಯ ಬೆಂಬಲ ವಿಚಾರದಲ್ಲಿ ಶಾಮನೂರು ಮೌನವೇಕೆ?: ಜಿ.ಬಿ. ವಿನಯಕುಮಾರ್
Team Udayavani, Aug 10, 2024, 3:08 PM IST
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಬಲ ಸೂಚಿಸುವ ವಿಚಾರದಲ್ಲಿ ಶಾಮನೂರು ಕುಟುಂಬದವರು ಮೌನವಹಿಸಿರುವುದೇಕೆ ಎಂದು ಕುರುಬ ಸಮಾಜದ ಯುವ ಮುಖಂಡ ಜಿ.ಬಿ. ವಿನಯಕುಮಾರ್ ಪ್ರಶ್ನಿಸಿದರು.
ಶನಿವಾರ (ಆ.10) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಪರ ರಾಜ್ಯಾದ್ಯಂತ ಹೋರಾಟ, ಜನಾಂದೋಲನಗಳು ನಡೆಯುತ್ತಿದ್ದರೂ ಶಾಮನೂರು ಕುಟುಂಬದ ರಾಜಕಾರಣಿಗಳು ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಲ್ಲುವ ಯಾವ ನಡೆಯನ್ನೂ ಈವರೆಗೆ ತೋರಿಲ್ಲ. ಲೋಕಸಭೆ ಚುನಾವಣೆ ವೇಳೆ ಸಿದ್ದರಾಮಯ್ಯ ಅವರು ಕ್ಷೇತ್ರದಲ್ಲಿ ನಾಲ್ಕು ಬಾರಿ ಡಾ. ಪ್ರಭಾ ಮಲ್ಲಿಕಾರ್ಜುನ್ ಪರ ರ್‍ಯಾಲಿ ನಡೆಸಿದರು. ಇಲ್ಲಿ ನಾನೇ ಅಭ್ಯರ್ಥಿ ಎಂದು ತಿಳಿದು ಮತ ಹಾಕುವಂತೆ ಮತದಾರರಲ್ಲಿ ಮನವಿಯೂ ಮಾಡಿ ಅವರನ್ನು ಗೆಲ್ಲಿಸಿದ್ದಾರೆ. ಆದರೆ, ಸಂಸದರು ಮುಖ್ಯಮಂತ್ರಿಯವರಿಗೆ ನೊಟೀಸ್ ನೀಡಿದ ರಾಜ್ಯಪಾಲರ ನಡೆ ಬಗ್ಗೆ ಲೋಕಸಭೆಯಲ್ಲಿ ಮಾತನಾಡಿಲ್ಲ ಎಂದರು.
ಮೈಸೂರಿನಲ್ಲಿ ನಡೆದ ಜನಾಂದೋಲನದಲ್ಲಿಯೂ ಭಾಗವಹಿಸಿಲ್ಲ. ದಾವಣಗೆರೆಯಲ್ಲಿ ಅಹಿಂದ ಒಕ್ಕೂಟದಿಂದ ನಡೆಸಿದ ಹೋರಾಟದಲ್ಲಿಯೂ ಯಾರೂ ಭಾಗವಹಿಸಿಲ್ಲ. ಹಿರಿಯರಾದ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಲೋಕಸಭೆ ಚುನಾವಣೆ ವೇಳೆ ಶಿವಮೊಗ್ಗಕ್ಕೆ ಹೋಗಿ ಅಲ್ಲಿ ಬಿಜೆಪಿಯ ಬಿ.ವೈ. ರಾಘವೇಂದ್ರ ಅವರನ್ನು ಬೆಂಬಲಿಸುವ ಹೇಳಿಕೆ ನೀಡುತ್ತಾರೆ. ಆದರೆ, ಸಿದ್ದರಾಮಯ್ಯ ಅವರ ಮೇಲೆ ವಿರೋಧ ಪಕ್ಷದವರು ಸುಳ್ಳು ಆರೋಪ ಮಾಡಿದರೂ ಸುಮ್ಮನಿರುವುದು ಏಕೆ ಎಂದು ವಿನಯಕುಮಾರ್ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.