ದಾವಣಗೆರೆ: ಹಾಡಹಗಲೇ ಬರ್ಬರವಾಗಿ ಇರಿದು ಯುವತಿಯ ಹತ್ಯೆ; ದುಷ್ಕರ್ಮಿ ಪರಾರಿ
ಹತ್ಯೆಗೀಡಾದ ಯುವತಿಗೆ ನಿಶ್ಚಿತಾರ್ಥವಾಗಿತ್ತು
Team Udayavani, Dec 22, 2022, 2:23 PM IST
ದಾವಣಗೆರೆ: ಮದುವೆ ವಿಚಾರವಾಗಿ ಯುವತಿಯನ್ನ ಹಾಡು ಹಗಲೇ ಅತ್ಯಂತ ಭೀಕರವಾಗಿ ಕೊಲೆ ಮಾಡಿ ಪರಾರಿಯಾದ ಘಟನೆ ನಗರದ ಚರ್ಚ್ ರಸ್ತೆಯಲ್ಲಿ ನಡೆದಿದೆ.ದಾವಣಗೆರೆ ವಿನೋಬ ನಗರದ ಚಾಂದ್ ಸುಲ್ತಾನ್ (24) ಕೊಲೆಯಾದ ಯುವತಿ ಎಂದು ಗುರುತಿಸಲಾಗಿದೆ.
ಪಿಜೆ ಬಡಾವಣೆಯ ಚರ್ಚ್ ರಸ್ತೆಯಲ್ಲಿ ಬಳಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಯುವತಿಯನ್ನು ಬೆಳಗ್ಗೆ 11.30ಕ್ಕೆ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.ಚಾಂದ್ ಸುಲ್ತಾನಾಳಿಗೆ 8 ತಿಂಗಳ ಹಿಂದೆ ಹರಿಹರ ಮೂಲದ ಯುವಕನೊಂದಿಗೆ ನಿಶ್ಚಿತಾರ್ಥವಾಗಿತ್ತು. ವಿವಾಹಕ್ಕೆ ವಿರೋಧಿಸಿ ಸುಲ್ತಾನಳನ್ನು ಹತ್ಯೆ ಮಾಡಲಾಗಿದೆ ಎಂದು ಶಂಕೆ ವ್ಯಕ್ತವಾಗಿದೆ. ಯುವತಿಯ ಕೊಲೆ ದೃಶ್ಯ ಸಿಸಿ ಟಿವಿಯಲ್ಲಿ ದಾಖಲಾಗಿದೆ.
ಯುವತಿ ಸ್ಕೂಟರ್ ನಲ್ಲಿ ಬಂದು ವಾಹನ ನಿಲ್ಲಿಸಿ ಕೊಲೆ ಮಾಡಿದ ವ್ಯಕ್ತಿಯ ಜೊತೆಗೆ ಮಾತನಾಡುತ್ತಿದ್ದಂತೆ ಏಕಾಎಕಿ ಚಾಕುವಿನಿಂದ ಯುವತಿಯ ಕುತ್ತಿಗೆಗೆ ಹಲವಾರು ಬಾರಿ ಇರಿದ ಯುವಕ ನಾಪತ್ತೆ ಯಾಗಿದ್ದಾನೆ. ಕೆಲವರು ಹಲ್ಲೆ ನಡೆಸುತ್ತಿದ್ದನ್ನ ನೋಡುತ್ತಿದ್ದರೂ ಯುವಕ ಬೈಕ್ ನಲ್ಲಿ ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.