ಕೊರೊನಾ ವಿರುದ್ಧ ಹೋರಾಟಕ್ಕೆ ಮಾಜಿ ಯೋಧರ ಪ‌ಡೆ


Team Udayavani, Apr 26, 2021, 4:57 PM IST

26-8

„ಎಚ್‌.ಕೆ. ನಟರಾಜ

ದಾವಣಗೆರೆ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಲು ರಾಜ್ಯ ಸರ್ಕಾರ ಸ್ವಯಂ ಸೇವಕರ ನೆರವು ಪಡೆಯಲು ಮುಂದಾಗಿದ್ದರೆ, ಇತ್ತ ದಾವಣಗೆರೆ ಜಿಲ್ಲಾಡಳಿತ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಮಾಜಿ ಯೋಧರ ನೆರವು ಪಡೆಯಲು ಯೋಜನೆ ರೂಪಿಸಿದೆ. ಈ ಹಿಂದೆ ದೇಶ ರಕ್ಷಣೆ ಮಾಡಿದ ಮಾಜಿ ಸೈನಿಕರು, ಈಗ ದೇಶದ ಜನರ ಮೇಲೆ ದಾಳಿ ಇಟ್ಟಿರುವ ಕೊರೊನಾ ಮಹಾಮಾರಿಯ ಸರಪಳಿ ಮುರಿದು ಜನರ ಪ್ರಾಣ ರಕ್ಷಿಸುವ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ.

ದೇಶದ ಗಡಿ ಕಾದ ಯೋಧರು ಈಗ ಕೊರೊನಾ ಯೋಧರಾಗಿ ಬರಲಿದ್ದಾರೆ. ಮಾಸ್ಕ್ ಇಲ್ಲದೇ ಓಡಾಡುವುದು ಹಾಗೂ ಜನಜಂಗುಳಿ ಏರ್ಪಡುವುದನ್ನು ತಡೆಯಲು, ಎಲ್ಲೆಡೆ ಸಾಮಾಜಿಕ, ದೈಹಿಕ ಅಂತರ ಪಾಲನೆ ಜತೆಗೆ ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ವಿಧಿಸಿರುವ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಪಾಲನೆಗಾಗಿ ಜಿಲ್ಲಾಡಳಿತ 60ಕ್ಕೂ ಹೆಚ್ಚು ಮಾಜಿ ಸೈನಿಕರ ನೆರವು ಪಡೆಯಲು ಯೋಜನೆ ಹಾಕಿಕೊಂಡಿದೆ. ಇದಕ್ಕಾಗಿ ಈಗಾಗಲೇ ಮಾಜಿ ಯೋಧರ ಪಟ್ಟಿ ತಯಾರಿಸಲಾಗಿದ್ದು, ಪೂರ್ವಾಪರ ವಿಚಾರಣೆಗಾಗಿ ಆ ಪಟ್ಟಿಯನ್ನು ಪೊಲೀಸ್‌ ಇಲಾಖೆಗೆ ಸಲ್ಲಿಸಿದೆ. ಪೊಲೀಸ್‌ ವಿಚಾರಣೆ ಬಳಿಕ ಮಾಜಿ ಯೋಧರು ಕೊರೊನಾ ಮಾರ್ಗಸೂಚಿ ಪಾಲನೆಗೆ ರಸ್ತೆಗಿಳಿಯಲಿದ್ದಾರೆ.

ಮಾರ್ಷಲ್‌ ರೀತಿ ಕಾರ್ಯ: ಜಿಲ್ಲೆಯಲ್ಲಿ 535 ಜನ ಮಾಜಿ ಸೈನಿಕರಿದ್ದು, ಇವರಲ್ಲಿ ಬಹುತೇಕರು 50 ವರ್ಷ ಮೇಲ್ಪಟ್ಟವರೇ ಇದ್ದಾರೆ. ಇವರಲ್ಲಿ ಕೊರೊನಾ ವಾರಿಯರ್‌ ಆಗಿ ಕೆಲಸ ಮಾಡಲು ಆಸಕ್ತಿ ಇರುವ 50 ವರ್ಷದೊಳಗಿನ 60ಜನರನ್ನು ಜಿಲ್ಲಾಡಳಿತ ಗುರುತಿಸಿ ಪಟ್ಟಿ ಮಾಡಿದೆ. ಇವರನ್ನು ಆಯ್ಕೆ ಮಾಡಿಕೊಂಡ ಬಳಿಕ ಜಿಲ್ಲಾಡಳಿತ ಇವರನ್ನು ಜನಜಂಗುಳಿ ಏರ್ಪಡುವ ಮಾರುಕಟ್ಟೆ, ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣ, ದೊಡ್ಡ ದೊಡ್ಡ ಅಂಗಡಿಗಳು, ಕಲ್ಯಾಣ ಮಂಟಪ, ಪ್ರಮುಖ ವೃತ್ತಗಳಲ್ಲಿ ಕರ್ತವ್ಯಕ್ಕೆ ನಿಯೋಜಿಸಲಿದೆ. ಗುರುತಿನ ಚೀಟಿ ಹಾಗೂ ಮಿಲಿಟರಿ ಸಮವಸ್ತ್ರದೊಂದಿಗೆ ಮಾಜಿ ಯೋಧರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.

ಬೆಂಗಳೂರಿನಲ್ಲಿ ನಿಯೋಜಿಸಿರುವ ಮಾರ್ಷಲ್‌ ಗಳ ರೀತಿಯಲ್ಲಿ ಮಾಜಿ ಯೋಧರು ಕಾರ್ಯನಿರ್ವಹಿಸಲಿದ್ದಾರೆ. ಮಾಸ್ಕ್, ದೈಹಿಕ ಅಂತರ ಸೇರಿದಂತೆ ಸರ್ಕಾರದ ಕೊರೊನಾ ನಿಯಂತ್ರಣ ಮಾರ್ಗಸೂಚಿ ಉಲ್ಲಂಘಿಸುವವರಿಗೆ ದಂಡ ಹಾಕುವ ಜತೆಗೆ ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸ್‌ ಇಲಾಖೆಗೆ ಶಿಫಾರಸು ಸಹ ಮಾಡಲಿದ್ದಾರೆ. ಕೊರೊನಾ ಸೋಂಕು ನಿಯಂತ್ರಣ ಕಾರ್ಯದಲ್ಲಿ ನೆರವು ನೀಡುವ ಮಾಜಿ ಯೋಧರಿಗೆ ಗೃಹರಕ್ಷಕ ದಳದ ಸಿಬ್ಬಂದಿಗೆ ನೀಡುವಂತೆ ಗೌರವಧನ ನೀಡಲು ಸಹ ಜಿಲ್ಲಾಡಳಿತ ತೀರ್ಮಾನಿಸಿದೆ.

ಆಸಕ್ತರಿಗೂ ಅವಕಾಶ: ಸಾರ್ವಜನಿಕ ವಲಯದಲ್ಲಿ ಕೊರೊನಾ ಮಾರ್ಗಸೂಚಿ ಪರಿಪಾಲನೆ ಮಾಡಲು ಜಿಲ್ಲಾಡಳಿತ ಕೇವಲ ಮಾಜಿ ಸೈನಿಕರ ನೆರವು ಒಂದನ್ನೇ ನೆಚ್ಚಿಕೊಂಡಿಲ್ಲ. ಕಾಲೇಜುಗಳಲ್ಲಿರುವ ನೋಂದಾಯಿತ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂ ಸೇವಕರನ್ನು ಹಾಗೂ ಸಂಘ ಸಂಸ್ಥೆಗಳ ಮೂಲಕ ಬರಬಹುದಾದ ಸ್ವಯಂ ಸೇವಕರನ್ನು ಹಾಗೂ ನೇರವಾಗಿ ಕೆಲಸ ಮಾಡಲು ಇಚ್ಛಿಸಿ ಬರುವ ಸ್ವಯಂ ಸೇವಕರನ್ನು ಸೇರಿ 500ಕ್ಕೂ ಹೆಚ್ಚು ಜನರ ನೆರವು ಪಡೆದುಕೊಂಡು ಕೊರೊನಾ ಕಟ್ಟಿಹಾಕಲು ಯೋಜನೆ ಹಾಕಿಕೊಂಡಿದೆ. ಒಟ್ಟಾರೆ ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ, ಜಿಲ್ಲಾಡಳಿತ ಹೊರಡಿಸುವ ಮಾರ್ಗಸೂಚಿಗಳು ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ಮಾಡಲು ಮಾಜಿ ಯೋಧರು ಕೈಜೋಡಿಸಲಿದ್ದಾರೆ. ತನ್ಮೂಲಕ ಕೊರೊನಾದಿಂದ ಜನರನ್ನು ಕಾಪಾಡುವ ಕಾಯಕದಲ್ಲಿಯೂ ಭಾಗಿಯಾಗಲಿದ್ದಾರೆ.

ಟಾಪ್ ನ್ಯೂಸ್

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

6

Bantwal: ತುಂಬೆ ಜಂಕ್ಷನ್‌; ಸರಣಿ ಅಪಘಾತ

Untitled-1

Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.