Davangere: ತನ್ನ ಮನೆಯಲ್ಲೇ ಕಳ್ಳತನ ಮಾಡಿ, ಕಥೆ ಸೃಷ್ಟಿಸಿ ದೂರು ನೀಡಿದ್ದ ಯುವತಿ ಬಂಧನ
ಯಾರೋ ಅಪರಿಚಿತರು ಪ್ರಜ್ಞೆ ತಪ್ಪಿಸಿ ನಗದು, ಚಿನ್ನಾಭರಣ ಕದ್ದೊಯ್ದಿದ್ದಾರೆ
Team Udayavani, Oct 8, 2024, 8:34 PM IST
ದಾವಣಗೆರೆ: ತನ್ನ ಮನೆಯಲ್ಲೇ ಕಳ್ಳತನ ಮಾಡಿ ಯಾರೋ ಅಪರಿಚಿತರು ಪ್ರಜ್ಞೆ ತಪ್ಪಿಸಿ ನಗದು, ಚಿನ್ನಾಭರಣ ಕದ್ದೊಯ್ದಿದ್ದಾರೆ ಎಂದು ಕಳ್ಳತನದ ಕಥೆ ಸೃಷ್ಟಿಸಿ ದೂರು ನೀಡಿದ್ದ ಯುವತಿ ಹಾಗೂ ಕಳ್ಳತನಕ್ಕೆ ಸಹಕರಿಸಿದ್ದವನನ್ನು ಬಂಧಿಸಿರುವ ಚನ್ನಗಿರಿ ಪೊಲೀಸರು 1.27 ಲಕ್ಷ ನಗದು, 10.77 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಕಳ್ಳತನದ ಕಥೆ ಸೃಷ್ಟಿಸಿದ್ದ ಚನ್ನಗಿರಿ ತಾಲೂಕಿನ ಅಗರಬನ್ನಿಹಟ್ಟಿ ಗ್ರಾಮದ ತಸ್ಮೀಯಖಾನಂ(26), ಹಾಗೂ ಅವರ ಕುಟುಂಬದ ನಿಕಟವರ್ತಿ ಬೆಂಗಳೂರಿನ ರಾಜಾಜಿನಗರ ನಿವಾಸಿ ಮುಜೀಬುಲ್ಲಾ ಶೇಖ್ ಅಲಿಯಾಸ್ ಜಾಕೀರ್(42) ಬಂಧಿತರು.
ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಅಗರಬನ್ನಿಹಟ್ಟಿ ಗ್ರಾಮದ ಅಮಾನುಲ್ಲಾ ಎಂಬವರ ಮಗಳು ತಸ್ಮೀಯ ಖಾನಂ ಸೆ.30 ರಂದು ತಾನು ಮನೆಯಲ್ಲಿ ಒಬ್ಬಳೇ ಇದ್ದ ಸಮಯದಲ್ಲಿ ಯಾರೋ ಒಬ್ಬ ವ್ಯಕ್ತಿ ಮನೆಯೊಳಗೆ ಬಂದು ಮುಖಕ್ಕೆ ಬಾಯಿಂದ ಊದಿ, ನಂತರ ನೀರಿನಂತ ದ್ರವ ಚಿಮುಕಿಸಿದ್ದರಿಂದ ಪ್ರಜ್ಞೆ ತಪ್ಪಿದಂತಾಗಿದ್ದು, ಕುಟುಂಬದವರು ಬಂದು ಎಬ್ಬಿಸಿದ ನಂತರ ನೋಡಿದಾಗ ಮನೆಯ ಬೀರುವಿನ ಬೀಗ ಮುರಿದು 17 ತೊಲ ಬಂಗಾರದ ಒಡವೆ ಮತ್ತು 1.20 ಲಕ್ಷ ಕಳವು ಮಾಡಿಕೊಂಡು ಹೋಗಿರುವುದಾಗಿ ಚನ್ನಗಿರಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.
ಕಳ್ಳತನ ನಡೆದ ದಿನವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಆರೋಪಿಗಳ ಪತ್ತೆಗೆ ಸೂಕ್ತ ನಿರ್ದೇಶನ ನೀಡಿದ್ದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ್ ಎಂ. ಸಂತೋಷ್ ಮತ್ತು ಜಿ. ಮಂಜುನಾಥ್, ಚನ್ನಗಿರಿ ಪೊಲೀಸ್ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಸ್ಯಾಮ್ ವರ್ಗಿಸ್ ಮಾರ್ಗದರ್ಶನ, ನಿರೀಕ್ಷಕ ಬಾಲಚಂದ್ರ ನಾಯ್ಕ ನೇತೃತ್ವದಲ್ಲಿನ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿ, ತನಿಖೆ ನಡೆಸಿದಾಗ ಕಳ್ಳತನದ ದೂರು ನೀಡಿದ್ದಂತ ಸ್ವತಃ ತಸ್ಮೀಯ ಖಾನಂ ಕೃತ್ಯದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿತು.
ಹೆಚ್ಚಿನ ವಿಚಾರಣೆ ನಡೆಸಿದಾಗ ಮುಜೀಬುಲ್ಲಾ ಶೇಖ್ ಅಲಿಯಾಸ್ ಜಾಕೀರ್ ಜೊತೆ ಸೇರಿಕೊಂಡು ಕಳ್ಳತನ ಮಾಡಿದ್ದು, ಯಾರಿಗೂ ಗೊತ್ತಾಗಬಾರದು ಎನ್ನುವ ಕಾರಣಕ್ಕೆ ಸುಳ್ಳು ಕತೆ ಸೃಷ್ಟಿಸಿರುವುದು ವಿಚಾರಣೆ ವೇಳೆ ತಿಳಿಸಿದ್ದಾರೆ.
ಮುಜೀಬುಲ್ಲಾ ಮನೆಯಲ್ಲಿಟ್ಟಿದ್ದ 9.5 ಲಕ್ಷ ಬೆಲೆ ಬಾಳುವ 155 ಗ್ರಾಂ ತೂಕದ ಬಂಗಾರದ ಆಭರಣ, 1.27 ನಗದು ವಶಪಡಿಸಿಕೊಳ್ಳಲಾಗಿದೆ. ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಘಟನೆ ನಡೆದ 5 ದಿನಗಳಲ್ಲಿ ಆರೋಪಿತರನ್ನು ಬಂಧಿಸಿ ಕಳವಾಗಿದ್ದ ಸ್ವತ್ತನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ತಂಡಕ್ಕೆ ಬಹುಮಾನ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.