ಪರಿಸರ ಅಭಿಯಾನಕ್ಕೆ ಚಾಲನೆ
Team Udayavani, Jun 8, 2020, 12:23 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ದಾವಣಗೆರೆ: ವಿಶ್ವ ಪರಿಸರ ದಿನದ ಅಂಗವಾಗಿ ಭಾನುವಾರ ಕರ್ನಾಟಕ ಜನಶಕ್ತಿ ಜಿಲ್ಲಾ ಸಮಿತಿಯಿಂದ ಬೂದಾಳ್ ರಿಂಗ್ ರೋಡ್ ನಲ್ಲಿ ನಾಳೆಯ ನಾಡನ್ನು ನೆಡೋಣ… ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಜಿಲ್ಲಾ ಸಂಚಾಲಕ ಸತೀಶ್ ಅರವಿಂದ್, ಪರಿಸರವು ನಮ್ಮೆಲ್ಲರಿಗೂ ಮುಖ್ಯವಾದ ಭಾಗ. ಪರಿಸರ ಇಲ್ಲದೆ ಮನುಷ್ಯ ಜೀವಿಸಲಾರ. ಈಗಿನ ಕೋವಿಡ್ ಕಾಲದಲ್ಲಿ ನಮ್ಮ ಆರೋಗ್ಯದ ಜೊತೆ ಜೊತೆಗೆ ಪರಿಸರದ ಸಂರಕ್ಷಣೆಯನ್ನು ಸಹ ಮಾಡಬೇಕಾಗಿದೆ ಎಂದು ಮನವಿ ಮಾಡಿದರು. ನಮ್ಮ ಮುಂದಿನ ಪೀಳಿಗೆಗಾಗಿ ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಸೇರಿ ಶ್ರಮಿಸಬೇಕಿದೆ. ಅದಕ್ಕಾಗಿಯೇ ಕರ್ನಾಟಕ ಜನಶಕ್ತಿ ಜಿಲ್ಲಾ ಸಮಿತಿಯಿಂದ ನಾಳೆಯ ನಾಡನ್ನು ನೆಡೋಣ… ಎಂಬ ಕಾರ್ಯಕ್ರಮದ ಹಮ್ಮಿಕೊಳ್ಳಲಾಗಿದೆ . ಗಿಡ ನೆಡುವ ಮೂಲಕ ಪರಿಸರ ಉಳಿಸಿ, ಬೆಳೆಸಬೇಕು ಎಂದು ಹೇಳಿದರು.
ಸಂಘಟನೆಯ ಆದಿಲ್ ಖಾನ್, ಖಲೀಲ್, ಶಿವಕುಮಾರ್, ಎಂ. ಜಬೀನಾಖಾನಂ, ಪವಿತ್ರ, ಯಲ್ಲಪ್ಪ, ಪರ್ವೀನ್, ಹೀನಾ , ಮಹಬೂಬ್ ಬಾಷಾ, ಶೋಯೆಬ್, ಅಬ್ದುಲ್‌ಘ ನಿ, ಪಿ. ಕರಿಬಸಪ್ಪ, ರಹಮತ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.