ಕೊಟ್ಪಾ ಕಾರ್ಯಾಚರಣೆ: 16 ಪ್ರಕರಣ ದಾಖಲು
ನೋಟಿಸ್ ನೀಡಿದ 15 ದಿನಗಳ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರು ಕಡ್ಡಾಯವಾಗಿ ತೆರವುಗೊಳಿಸಬೇಕು.
Team Udayavani, Feb 29, 2020, 11:15 AM IST
ದಾವಣಗೆರೆ: ದಾವಣಗೆರೆಯನ್ನು ಕೊಟ್ಪಾ ಉನ್ನತ ಅನುಷ್ಠಾನ ಜಿಲ್ಲೆ ಎಂದು ಘೋಷಿಸುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ತಂಬಾಕು ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ನಗರದ ಎಚ್. ಕೆ.ಆರ್. ಸರ್ಕಲ್ ಸುತ್ತಮುತ್ತ ಪ್ರದೇಶಗಳಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳ ದಾಳಿ ನಡೆಸಿ, ಒಟ್ಟು 16 ಪ್ರಕರಣ ದಾಖಲಿಸಿದೆ.
ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆ, ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಈ ವಿಶೇಷ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು. ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಅಧಿ ನಿಯಮ-2003 ಸೆಕ್ಷನ್ 4ರಡಿ 3 ಹಾಗೂ ಸೆಕ್ಷನ್ 6ಎ ಅಡಿ 2 ಪ್ರಕರಣ, ಸೆಕ್ಷನ್ 6ಬಿರ ಅಡಿ 11ಪ್ರಕರಣ ಸೇರಿ ಒಟ್ಟು 16 ಪ್ರಕರಣ ದಾಖಲಿಸಿಕೊಂಡು, 1,600 ರೂ. ದಂಡವನ್ನು ಸ್ಥಳದಲ್ಲಿಯೇ ಸಂಗ್ರಹಿಸಲಾಗಿದೆ.
ತಂಡವು ನಗರದ ಎಚ್.ಕೆ.ಆರ್. ಸರ್ಕಲ್ ಸುತ್ತಮುತ್ತ ಪ್ರದೇಶಗಳಲ್ಲಿರುವ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ಹೊಟೇಲ್, ಬಾರ್ ಆ್ಯಂಡ್ ರೆಸ್ಟೋರೆಂಟ್, ಪಾನ್‌ಶಾಪ್ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಮಾರುವವರು ಹಾಗೂ ತಂಬಾಕು ಉತ್ಪನ್ನ ಸೇವಿಸುವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಿದೆ. ಸಾರ್ವಜನಿಕ ಸ್ಥಳದಲ್ಲಿರುವ ಅಂಗಡಿ ಮಾಲೀಕರು ಧೂಮಪಾನ ನಿಷೇಧದ ಬಗ್ಗೆ ಪ್ರದರ್ಶಿಸಬೇಕಾದ ಫಲಕಗಳನ್ನು ಕಟ್ಟುನಿಟ್ಟಾಗಿ ಅಳವಡಿಸಲು ಇದೇ ಸಂದರ್ಭದಲ್ಲಿ ಸೂಚಿಸಲಾಗಿದೆ.
ತಂಬಾಕು ನಿಯಂತ್ರಣ ತನಿಖಾ ತಂಡದಲ್ಲಿ ಜಿಲ್ಲಾ ಅಂಕಿತ ಅಧಿ ಕಾರಿ ಡಾ| ರುದ್ರಸ್ವಾಮಿ, ವಿಭಾಗೀಯ ಸಂಯೋಜಕ ಮಹಾಂತೇಶ್ ಉಳ್ಳಾಗಡ್ಡಿ, ಆಹಾರ ಸುರಕ್ಷಿತ ಅಧಿಕಾರಿ ಕೊಟ್ರೇಶ್, ಆರೋಗ್ಯ ಮೇಲ್ವಿಚಾರಕ ರಾಚಪ್ಪ ಕುಪ್ಪಸ್ತ, ಶಿಕ್ಷಣ ಇಲಾಖೆಯ ಡಾ| ವೀರಪ್ಪ, ಹಿರಿಯ ಆರೋಗ್ಯ ಸಹಾಯಕ ವೆಂಕಟಾಚಾಲ ಕುಮಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾ ಧಿಕಾರಿ ಉಮಾಪತಿ, ಕೆ.ಟಿ.ಜೆ.ನಗರ ಪೊಲೀಸ್ ಠಾಣೆಯ ಎಎಸ್‌ಐ ವಿರುಪಾಕ್ಷ.ಜಿ.ಬಿ.,ಇತರರಿದ್ದರು ಎಂದು ಪ್ರಕಟಣೆ ತಿಳಿಸಿದೆ .
ಕೊಟ್ಪಾ 2003ರ ಕಾಯ್ದೆಯ ಸೆಕ್ಷನ್ 6ಬಿ ಅನುಸಾರ ಶೈಕ್ಷಣಿಕ ಸಂಸ್ಥೆಯ 100 ಗಜ ಅಂತರದಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವವರ ಅಂಗಡಿಗಳಿಗೆ ತಂಡ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ನಗರದದ್ಯಾಂತ ಸೆಕ್ಷನ್ 6ಬಿ ಪರಿಣಾಮಕಾರಿ ಅನುಷ್ಠಾನಕ್ಕೆ ತಂಬಾಕು ಮಾರಾಟ ಮಾಡುವವರ ಮಾಲೀಕರಿಗೆ ಎಚ್ಚರಿಕೆ ನೋಟಿಸ್ ನೀಡಲಾಗಿದ್ದು, ನೋಟಿಸ್ ನೀಡಿದ 15 ದಿನಗಳ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರು ಕಡ್ಡಾಯವಾಗಿ ತೆರವುಗೊಳಿಸಬೇಕು. ಒಂದು ವೇಳೆ ತೆರವುಗೊಳಿಸದೆ ಇದ್ದಲ್ಲಿ ಕಾನೂನು ರೀತಿ ನಿರ್ದಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು.
ಡಾ| ವೆಂಕಟೇಶ್,
ತಾಲ್ಲೂಕು ಆರೋಗ್ಯಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.