ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಪ್ರಸ್ತಾವನೆ
ಟಾಸ್ಕ್ ಫೋರ್ಸ್ ಸಭೆಹೋಬಳಿಗೊಂದರಂತೆ ಪ್ರಾರಂಭ
Team Udayavani, Mar 19, 2020, 11:23 AM IST
ದಾವಣಗೆರೆ: ಕೇಂದ್ರ ಸರ್ಕಾರ ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 2019-20 ನೇ ಸಾಲಿನಲ್ಲಿ ಪ್ರತಿ ಹೋಬಳಿ ಮಟ್ಟದಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಬುಧವಾರ ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಭೆಯಲ್ಲಿ ನಿರ್ಧರಿಸಲಾಗಿದೆ.
ಕೃಷಿ ಉತ್ಪನ್ನ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ಮಾತನಾಡಿ, ಜಿಲ್ಲೆಯಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರದ ಪ್ರಾರಂಭಿಸಲು ರೈತರು ಸಲ್ಲಿಸಿದ ಮನವಿಯ ಜೊತೆಗೆ ಪ್ರಸ್ತಕ ಸಾಲಿನಲ್ಲಿ ಪ್ರಮುಖ ಬೆಳೆಯಾದ ಮೆಕ್ಕೆಜೋಳದ ಧಾರಣೆ ಗಣನೀಯವಾಗಿ ಕುಸಿದಿದ್ದು ರೈತರು ತೀವ್ರ ನಷ್ಟ ಅನುಭವಿಸುವಂತಾಗಿದೆ. ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸಲು ಕೇಂದ್ರ ಸರ್ಕಾರ ಪ್ರತಿ ಕ್ವಿಂಟಾಲ್‌ಗೆ 1,760 ಕನಿಷ್ಟ ಬೆಂಬಲ ಬೆಲೆ ಘೋಷಣೆ ಮಾಡಿದೆ ಎಂದರು.
ಚನ್ನಗಿರಿ ಕೃಷಿ ಉತ್ಪನ್ನ ಮಾರಾಟ ಸಮಿತಿ ಕಾರ್ಯದರ್ಶಿ ಮಾತನಾಡಿ, ಪ್ರಸ್ತುತ ಹಂಗಾಮಿನಲ್ಲಿ ಕೇಂದ್ರ ಸರ್ಕಾರ ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆಗಿಂತ ಸಗಟು ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನ ಬೆಲೆ ಯೋಜನೆಯನ್ನು ಅನುಷ್ಠಾನಗೊಳಿಸಲು ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ನಡಾವಳಿಯನ್ನು ಸಹಕಾರ ಇಲಾಖೆಗೆ ಮುಂದಿನ ಕ್ರಮಕ್ಕಾಗಿ ಕಳುಹಿಸುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಬಿ. ಮುದಗಲ್ ಮಾತನಾಡಿ, ಜಿಲ್ಲೆಯಲ್ಲಿ 2019-20 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ 1,18,652 ಹೆಕ್ಟೇರ್‌ನಲ್ಲಿ 4542 ಅಂದಾಜು ಇಳುವರಿ(ಕೆಜಿ/ ಹೆಕ್ಟೇರ್) ಹಾಗೂ ಹಿಂಗಾರು ಹಂಗಾಮಿನಲ್ಲಿ 340 ಹೆಕ್ಟೇರ್‌ನಲ್ಲಿ 3221 ಅಂದಾಜು ಇಳುವರಿ(ಕೆಜಿ/ಹೆಕ್ಟೇರ್) ಮತ್ತು ಬೇಸಿಗೆ ಹಂಗಾಮಿನಲ್ಲಿ 275 ಹೆಕ್ಟೇರ್‌ನಲ್ಲಿ 3951 ಅಂದಾಜು ಇಳುವರಿ(ಕೆ.ಜಿ/ಹೆಕ್ಟೇರ್) ಬರಬಹುದು ಎಂದು ಅಂದಾಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಈಗಾಗಲೇ ಕೊಯ್ಲು ಪೂರ್ಣಗೊಂಡಿದ್ದು ಇನ್ನೂ ಕೆಲ ರೈತರು ಮಾರುಕಟ್ಟೆ ಧಾರಣೆ ಹೆಚ್ಚಾಗುವ ನಿರೀಕ್ಷೆಯಲ್ಲಿ ಮಾರಾಟ ಮಾಡಿಲ್ಲ ಎಂದು ತಿಳಿಸಿದರು. ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕ ಮಾತನಾಡಿ, ಮೆಕ್ಕೆಜೋಳದ ಸುಗ್ಗಿ ಪ್ರಾರಂಭವಾಗಿದ್ದು, ಮಾರುಕಟ್ಟೆಯಲ್ಲಿ ಧಾರಣೆ ಕುಸಿದಿದೆ. ರೈತರ ಬೇಡಿಕೆಯಂತೆ ಹೋಬಳಿ ಮಟ್ಟದಲ್ಲಿ ಖರೀದಿ ಕೇಂದ್ರ ಪ್ರಾರಂಭಿಸುವುದು ಸೂಕ್ತ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ ಮಾತನಾಡಿ, ಜಿಲ್ಲೆಯ ರೈತರಿಂದ ಎಫ್ .ಎ.ಕ್ಯೂ ಗುಣಮಟ್ಟದ ಮೆಕ್ಕೆಜೋಳವನ್ನು ಎಲ್ಲಾ ತಾಲೂಕು, ಹೋಬಳಿ ಮಟ್ಟದಲ್ಲಿ ಮೆಕ್ಕೆಜೋಳ ಖರೀದಿಸಲು ಖರೀದಿ ಏಜೆನ್ಸಿಗಳನ್ನು ತುರ್ತಾಗಿ ನೇಮಕ ಮಾಡಿ, ಹಾಗೂ ಮೆಕ್ಕೆಜೋಳಕ್ಕೆ ಪ್ರೋತ್ಸಾಹ ಧನ ನಿಗದಿಪಡಿಸಿ, ಖರೀದಿ ಕೇಂದ್ರ ತೆರೆಯುವಂತೆ ಸರ್ಕಾರಕ್ಕೆ ಪ್ರಸ್ತಾಪನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
1,760 ರೂ. ದರ ನಿಗದಿ
ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸಲು ಕೇಂದ್ರ ಸರ್ಕಾರ ಪ್ರತಿ ಕ್ವಿಂಟಾಲ್‌ಗೆ 1,760 ಕನಿಷ್ಟ ಬೆಂಬಲ ಬೆಲೆ ಘೋಷಣೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.