ಗಣಿತ ಪರೀಕ್ಷೆಗೆ 20,804 ವಿದ್ಯಾರ್ಥಿಗಳು ಹಾಜರ್
Team Udayavani, Jun 28, 2020, 5:13 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ದಾವಣಗೆರೆ: ಜಿಲ್ಲೆಯ 93 ಪರೀಕ್ಷಾ ಕೇಂದ್ರಗಳಲ್ಲಿ ಶನಿವಾರ ನಡೆದ ಎಸ್ಸೆಸ್ಸೆಲ್ಸಿ ಗಣಿತ ವಿಷಯದ ಪರೀಕ್ಷೆಗೆ 20,804 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
ಒಟ್ಟು 21,991 ನೋಂದಾಯಿತ ವಿದ್ಯಾರ್ಥಿಗಳಲ್ಲಿ 20,804 ವಿದ್ಯಾರ್ಥಿಗಳು ಹಾಜರಾಗಿದ್ದರು. 1,247 ವಿದ್ಯಾರ್ಥಿಗಳು ಗೈರಾಗಿದ್ದರು. ಪರೀಕ್ಷಾ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ವರದಿಯಾಗಿಲ್ಲ. ಚನ್ನಗಿರಿಯಲ್ಲಿ 3,974 ವಿದ್ಯಾರ್ಥಿಗಳಲ್ಲಿ 3,719, ದಾವಣಗೆರೆ ಉತ್ತರದಲ್ಲಿ 3,341 ವಿದ್ಯಾರ್ಥಿಗಳಲ್ಲಿ 3,242, ದಾವಣಗೆರೆ ದಕ್ಷಿಣದಲ್ಲಿ 6,234 ವಿದ್ಯಾರ್ಥಿಗಳಲ್ಲಿ 5,299, ಹರಿಹರದಲ್ಲಿ 3,22 ವಿದ್ಯಾರ್ಥಿಗಳಲ್ಲಿ 3,059, ಜಗಳೂರಿನಲ್ಲಿ 2,312 ವಿದ್ಯಾರ್ಥಿಗಳಲ್ಲಿ 2,206 ವಿದ್ಯಾರ್ಥಿಗಳು ಹಾಜರಾಗಿದ್ದರು.
ಹೊನ್ನಾಳಿ ತಾಲೂಕಿನಲ್ಲಿ ಯಾವೊಬ್ಬ ವಿದ್ಯಾರ್ಥಿಯೂ ಗೈರಾಗಿಲ್ಲ. ನೋಂದಣಿಯಾದ ಎಲ್ಲಾ 2,908 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಜಿಲ್ಲೆಯ ವಿವಿಧ ಕಂಟೇನ್ಮೆಂಟ್ ಝೋನ್‌ನ 96 ವಿದ್ಯಾರ್ಥಿಗಳಲ್ಲಿ 80 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಚನ್ನಗಿರಿಯಲ್ಲಿ 7, ದಾವಣಗೆರೆ ಉತ್ತರದಲ್ಲಿ 21, ದಾವಣಗೆರೆ ದಕ್ಷಿಣದಲ್ಲಿ 23, ಹರಿಹರದಲ್ಲಿ 28, ಹೊನ್ನಾಳಿಯಲ್ಲಿ ಒಬ್ಬ ವಿದ್ಯಾರ್ಥಿ ಪರೀಕ್ಷೆಗೆ ಹಾಜರಾಗಿದ್ದರು. ಅನಾರೋಗ್ಯದ ಕಾರಣದಿಂದ ದಾವಣಗೆರೆ ದಕ್ಷಿಣ ವಲಯದಲ್ಲಿ ಓರ್ವ ವಿದ್ಯಾರ್ಥಿ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದರು.
ಸರ್ಕಾರಿ ಮತ್ತು ಖಾಸಗಿ ವಸತಿ ನಿಲಯಗಳಲ್ಲಿನ 167 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ 86 ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. 375 ವಲಸೆ ವಿದ್ಯಾರ್ಥಿಗಳಲ್ಲಿ 373 ವಿದ್ಯಾರ್ಥಿಗಳು ಹಾಜರಾಗಿದ್ದರೆ, ಇಬ್ಬರು ಗೈರು ಹಾಜರಾಗಿದ್ದರು ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಆರ್. ಪರಮೇಶ್ವರಪ್ಪ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ
MUST WATCH
ಹೊಸ ಸೇರ್ಪಡೆ
Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.