ಪರಿಶಿಷ್ಟರ ಅಭಿವೃದ್ಧಿಗೆ 30 ಸಾವಿರ ಕೋಟಿ

ಸರ್ಕಾರದ 6 ತಿಂಗಳ ಕೆಲಸ ಬಿಎಸ್‌ವೈ ವಾಲ್ಮೀಕಿ ಸಮಾಜದ ಬಗ್ಗೆ ಹೊಂದಿರುವ ಕಳಕಳಿಗೆ ಸಾಕ್ಷಿ: ಕಾರಜೋಳ

Team Udayavani, Feb 10, 2020, 11:20 AM IST

10-February-3

ದಾವಣಗೆರೆ: ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರಕ್ಕೆ ಬಂದ 6 ತಿಂಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಸಮಗ್ರ ಅಭಿವೃದ್ಧಿಗೆ 30,445 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಉಪ ಮುಖ್ಯಮಂತ್ರಿ, ಸಮಾಜ ಕಲ್ಯಾಣ ಇಲಾಖೆ ಸಚಿವರೂ ಆಗಿರುವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಭಾನುವಾರ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ 2ನೇ ಮಹಿರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿದ ಅವರು, ಕಳೆದ ಸೆ. 16ಕ್ಕೆ ಅಧಿಕಾರಕ್ಕೆ ಬಂದಿರುವ ಯಡಿಯೂರಪ್ಪ ಅವರು ಎಸ್ಸಿ, ಎಸ್ಟಿಗೆ 30,445 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಭೂ ಒಡೆತನ ಯೋಜನೆಯಡಿ 647 ಜನರಿಗೆ 874 ಎಕರೆ ಜಮೀನು ಖರೀದಿ, ಗಂಗಾ ಕಲ್ಯಾಣ ಯೋಜನೆಯಡಿ 10 ಸಾವಿರ ಕೊಳವೆಬಾವಿ ಮಂಜೂರು ಮಾಡಿದ್ದಾರೆ ಎಂದು ತಿಳಿಸಿದರು.

ರಾಜ್ಯದ್ಯಾಂತ 12 ಸಾವಿರ ಜನರಿಗೆ ಆರ್ಥಿಕಾಭಿವೃದ್ಧಿಗೆ 300 ಕೋಟಿ ನೀಡಿದ್ದಾರೆ. 929 ಜನರಿಗೆ ಸ್ವಯಂ ಉದ್ಯೋಗ ಯೋಜನೆಯಡಿ ಸೌಲಭ್ಯ ಕಲ್ಪಿಸಲಾಗಿದೆ. ವಾಹನ ಖರೀದಿ, ಸಮೃದ್ಧಿ ಯೋಜನೆಗೂ ಅನುದಾನ ನೀಡಿದ್ದಾರೆ. ವಾಲ್ಮೀಕಿ ಸಮಾಜದ ಡಾ| ರಂಗರಾಜ ವನದುರ್ಗ, ಹೆಗ್ಗಣ್ಣನವರ್‌ ಅವರನ್ನು ಲೋಕಸೇವಾ ಆಯೋಗದ ಸದಸ್ಯರನ್ನಾಗಿ ನೇಮಿಸಿರುವುದು ಯಡಿಯೂರಪ್ಪ ಅವರು ವಾಲ್ಮೀಕಿ ಸಮಾಜದ ಬಗ್ಗೆ ಹೊಂದಿರುವ ಸಾಮಾಜಿಕ ಕಾಳಜಿ, ಕಳಕಳಿಗೆ ಸಾಕ್ಷಿ ಎಂದು ಹರ್ಷ ವ್ಯಕ್ತಪಡಿಸಿದರು.

2008 ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರದಿಂದಲೇ ವಾಲ್ಮೀಕಿ ಜಯಂತಿ ಆಚರಿಸುವ ಜೊತೆಗೆ ರಜೆ ಘೋಷಣೆಯನ್ನೂ ಮಾಡಿದವರು. ನರೇಂದ್ರ ಮೋದಿ ಅವರ ಸರ್ಕಾರ ಎಸ್ಸಿ, ಎಸ್ಟಿಯ ಮೀಸಲಾತಿ ಸೌಲಭ್ಯವನ್ನು ಇನ್ನೂ 10 ವರ್ಷಕ್ಕೆ ಮುಂದುವರೆಸಿದೆ. ಬಿಜೆಪಿಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಎಸ್ಸಿ,ಎಸ್ಟಿ ಶಾಸಕರು ಬೆನ್ನಲುಬಿಗೆ ನಿಂತಿದ್ದಾರೆ. ಸಮಾಜ ಬಿಜೆಪಿಯನ್ನ ಬೆಂಬಲಿಸುತ್ತಿದೆ ಎಂದರು.

ಯಡಿಯೂರಪ್ಪ ಅವರು 6,900 ಸಮುದಾಯ ಭವನ ಮಂಜೂರು ಮಾಡಿದ್ದಾರೆ. 824 ವಸತಿ ಶಾಲೆ, 4,709 ಹಾಸ್ಟೆಲ್‌ಗ‌ಳಲ್ಲಿ ಒಟ್ಟಾರೆ 4 ಲಕ್ಷ ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸಲಾಗುತ್ತಿದೆ. ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ 24 ಗಂಟೆಯಲ್ಲಿ 4.42 ಕೋಟಿ ಅನುದಾನ ಮಂಜೂರು ಮಾಡುವಂತೆ ತಮಗೆ ಸೂಚಿಸಿದ್ದರು. ಅದರಂತೆಯೇ ಅನುದಾನ ಬಿಡುಗಡೆ ಮಾಡಲಾಗಿದೆ. ಯಡಿಯೂರಪ್ಪ ಅವರು ದೀನ-ದಲಿತರ ಕಲ್ಯಾಣಕ್ಕೆ ಎಂದೆಂದಿಗೂ ಹಿಂದೆ-ಮುಂದೆ ನೋಡಿದವರೇ ಅಲ್ಲ ಎಂದು ತಿಳಿಸಿದರು.

ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಮಾತನಾಡಿ, ರಾಮಾಯಣದಂತಹ ಜಗತ್ತಿನ ಶ್ರೇಷ್ಠ ಗ್ರಂಥ ಬರೆದಿರುವ ವಾಲ್ಮೀಕಿಯವರು ಪರಿವರ್ತನೆಯ ಹರಿಕಾರರು. ವಾಲ್ಮೀಕಿಯವರು ವಚನಬದ್ಧತೆ, ಸ್ವಾಮಿ ನಿಷ್ಠೆ, ಅಧರ್ಮದ ವಿರುದ್ಧದ ಹೋರಾಟದ ಬಗ್ಗೆ ರಾಮಾಯಣದಲ್ಲಿ ಬರೆದಿದ್ದಾರೆ. ಈಗಲೂ ಎಲ್ಲರೂ ಪರಿವರ್ತನೆ ಆಗಬೇಕಿದೆ ಎಂದು ತಿಳಿಸಿದರು.

ಪರಿಶಿಷ್ಟ ವರ್ಗದ ಪಟ್ಟಿಯಲ್ಲಿ ತಳವಾರ, ಪರಿವಾರ ಪರ್ಯಾಯ ಪದಗಳ ಸೇರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಲೋಕಸಭೆಯಲ್ಲಿ ಅನುಮೋದನೆ ದೊರೆಯಲಿದೆ. ಪರಿಶಿಷ್ಟ ವರ್ಗಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಯಡಿಯೂರಪ್ಪ ಅವರು ಯಾವತ್ತಿಗೂ ವಾಲ್ಮೀಕಿ ಸಮಾಜದೊಂದಿಗೆ ಇರುತ್ತಾರೆ. ಸರ್ಕಾರ ಸಹ ನಿಮ್ಮೊಂದಿಗೆ ಇರುತ್ತದೆ ಎಂದು ತಿಳಿಸಿದರು.

ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಪ್ರಾಸ್ತಾವಿಕ ಮಾತುಗಳಾಡಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಸಚಿವ ಬಿ.ಸಿ. ಪಾಟೀಲ್‌, ಸಂಸದರಾದ ಜಿ.ಎಂ. ಸಿದ್ದೇಶ್ವರ್‌, ವೈ. ದೇವೇಂದ್ರಪ್ಪ, ಶಾಸಕರಾದ ಎಸ್‌.ವಿ. ರಾಮಚಂದ್ರ, ಪ್ರೊ. ಎನ್‌. ಲಿಂಗಣ್ಣ, ನೆಹರೂ ಚ. ಓಲೇಕಾರ, ಎನ್‌.ವೈ. ಗೋಪಾಲಕೃಷ್ಣ, ರಾಜಾ ವೆಂಕಟಪ್ಪ ನಾಯಕ್‌, ಬಸವರಾಜ್‌ ದದ್ದಲ್‌, ಅರವಿಂದ್‌ ಬೆಲ್ಲದ್‌, ಅಮೃತ್‌ ದೇಸಾಯಿ, ಕುಸುಮಾ ಶಿವಳ್ಳಿ, ಮಾಜಿ ಶಾಸಕ ಬಿ.ಪಿ. ಹರೀಶ್‌ ಇತರರು ಇದ್ದರು.

ಟಾಪ್ ನ್ಯೂಸ್

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-sid-male

Udupi; ಸಿದ್ದಾಪುರ ಪರಿಸರದಲ್ಲಿ ಮಳೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.