ಇ-ಆಫೀಸ್ ಗೆ ಡಿಸಿ ಚಾಲನೆ
Team Udayavani, Oct 2, 2019, 1:58 PM IST
ದಾವಣಗೆರೆ: ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ ಮಂಗಳವಾರ ಬೆಳಿಗ್ಗೆ ಜಿಲ್ಲಾಡಳಿತ ಕಚೇರಿಯಲ್ಲಿ ಇ-ಆಫೀಸ್ ತಂತ್ರಾಂಶಕ್ಕೆ ಚಾಲನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇ- ಆಫೀಸ್ ನಿಂದ ಕಡತಗಳ ವಿಲೇವಾರಿಗೆ ವೇಗ ಮತ್ತು ನಿಖರತೆ ಸಿಗಲಿದೆ. ಪ್ರಾದೇಶಿಕ ಆಯುಕ್ತ ಹರ್ಷಗುಪ್ತ ಸೆಪ್ಟೆಂಬರ್ 30 ರೊಳಗಾಗಿ ಎಲ್ಲಾ ಜಿಲ್ಲಾಧಿಕಾರಿಗಳು ತಮ್ಮ ತಮ್ಮ ಕಚೇರಿಗಳಲ್ಲಿ ಇ- ಆಫೀಸ್ ನಲ್ಲಿ ಕಾರ್ಯ ನಿರ್ವಹಿಸಲು ಅನುವಾಗುವಂತೆ ಸಿದ್ಧತೆ ಮಾಡಿಕೊಳ್ಳಬೇಕು. ಅಕ್ಟೋಬರ್ 1ರಿಂದ ಇ-ಆಫೀಸ್ ನಲ್ಲಿ ಕಡತಗಳ ವಿಲೇವಾರಿ ಆಗಬೇಕು ಎಂದು ಸೂಚಿಸಿದನ್ವಯ ಅಕ್ಟೋಬರ್ 1 ರಿಂದಲೇ ಚಾಲನೆ ನೀಡಲಾಗಿದೆ ಎಂದರು.
ಈ- ಆಫೀಸ್ ನಿಂದಾಗಿ ಕಡತಗಳ ವಿಲೇವಾರಿಯಲ್ಲಿನ ವಿಳಂಬ ತಪ್ಪಿ ವೇಗ ದೊರೆಯಲಿದೆಯಲ್ಲದೆ, ಕಡತವು ಯಾವ ಸಿಬ್ಬಂದಿ ಬಳಿ ಇದೆ, ಅದರ ಸ್ಥಿತಿ ಏನಿದೆ ಎಂಬ ಮಾಹಿತಿ ತಕ್ಷಣಕ್ಕೆ ದೊರಕಿ ಸಾರ್ವಜನಿಕರು ಕಚೇರಿ ಅಲೆದಾಡುವುದು ತಪ್ಪಲಿದೆ ಎಂದರು. ಇ-ಆಫೀಸ್ ಯಶಸ್ವಿಯಾಗಲು ಕಾರಣಕರ್ತರಾದ ಎನ್.ಐ.ಸಿ.ಯ ಉದಯಕುಮಾರ್, ರಮೇಶ್ ಹಾಗೂ ಸಿಬ್ಬಂದಿಗೆ ಯಶಸ್ವಿ ಕಾರ್ಯನಿರ್ವಹಣೆಗೆ ಇದೇ ಸಂದರ್ಭದಲ್ಲಿ ಶುಭ ಹಾರೈಸಿದರು.
ಪ್ರಭಾರ ಅಪರ ಜಿಲ್ಲಾಧಿಕಾರಿ ನಜ್ಮಾ, ಚುನಾವಣಾ ತಹಶೀಲ್ದಾರ್ ಪ್ರಸಾದ್, ಶಿರಸ್ತೇದಾರರಾದ ಜಿ.ಸಿ.ಕುಮಾರ್, ರಾಮಸ್ವಾಮಿ.ಎಚ್, ವಸಂತಕುಮಾರಿ ಹಾಗೂ ಸಿಬ್ಬಂದಿ ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Bengaluru: ಬೈಕ್ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು
Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್ ದಾಖಲು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Renukaswamy case: ದರ್ಶನ್ ವಿರುದ್ಧ ಸಾಕ್ಷ್ಯ “ಸೃಷಿ’: ವಕೀಲ ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.