ಅಕ್ರಮ ಪಂಪ್‌ಸೆಟ್‌ಗಳ ತೆರವಿಗೆ ಗಡುವು
Team Udayavani, Aug 7, 2018, 6:03 PM IST
ದಾವಣಗೆರೆ: ಭದ್ರಾ ನಾಲೆಯಲ್ಲಿ ಅಳವಡಿಸಿರುವ ಅಕ್ರಮ ಪಂಪ್‌ಸೆಟ್‌ಗಳನ್ನು ಆ.10ರ ಒಳಗೆ ತೆರವುಗೊಳಿಸಿ, ಭದ್ರಾ
ಅಚ್ಚುಕಟ್ಟಿನ ಕೊನೆ ಭಾಗಕ್ಕೆ ಸಮರ್ಪಕ ಪ್ರಮಾಣದಲ್ಲಿ ನೀರು ಹರಿಸಲು ಒತ್ತಾಯಿಸಿ ಸೋಮವಾರ ಅಚ್ಚುಕಟ್ಟು ಪ್ರದೇಶದ ಕೊನೆ ಭಾಗದ ರೈತರು ನೀರಾವರಿ ಇಲಾಖೆ ಕಚೇರಿ ಮುಂದೆ ಪ್ರತಿಭಟಿಸಿದ್ದಾರೆ.
ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಿ 25 ದಿನ ಕಳೆದಿದೆ. ಆದರೆ, ದಾವಣಗೆರೆ ಜಿಲ್ಲೆಯ ಅಚ್ಚುಕಟ್ಟು ಪ್ರದೇಶದ ಕೊನೆ ಭಾಗದ ಅರಸಾಪುರ, ಸಾರಥಿ, ಕೆಂಚವ್ವನಹಳ್ಳಿ, ಸಿಂಗ್ರಿಹಳ್ಳಿ, ಕೊಂಡಜ್ಜಿ, ವಡ್ಡಿನ ಹಳ್ಳಿ, ಕುರುಬರಹಳ್ಳಿ ಇತರೆ ಭಾಗಕ್ಕೆ ಈವರೆಗೆ ನೀರು ಬಂದಿಲ್ಲ. ನೀರು ಬರದೇ ಇರುವುದಕ್ಕೆ ಬಹು ಮುಖ್ಯ ಕಾರಣ ಮೇಲ್ಭಾಗದಲ್ಲಿ
ಅಳವಡಿಸಲಾಗಿರುವ ಅಕ್ರಮ ಪಂಪ್‌ಸೆಟ್. ಅನೇಕ ವರ್ಷದಿಂದ ಇರುವ ಅಕ್ರಮ ಪಂಪ್ ಸೆಟ್ ತೆರವಿಗೊಳಿಸಲಾಗುತ್ತಿಲ್ಲ. ಸಂಬಂಧಿತ ಇಲಾಖೆಯವರ ನಿರ್ಲಕ್ಷ್ಯದಿಂದ ಈ ರೀತಿ ಆಗುತ್ತಿದೆ. ಕೂಡಲೇ ಆ. 10 ರ ಒಳಗೆ ಅಕ್ರಮ ಪಂಪ್‌ಸೆಟ್ ತೆರವುಗೊಳಿಸಲೇಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಭದ್ರಾ ಜಲಾಶಯದಿಂದ 100 ದಿನಗಳವರೆಗೆ ನೀರು ಹರಿಸಲಾಗುತ್ತಿದೆ. ಈಗಾಗಲೇ 25 ದಿನ ಆಗಿದೆ. ಇನ್ನು 75
ದಿನಗಳು ಮಾತ್ರ ನೀರು ಹರಿಸಲಾಗುತ್ತಿದೆ. ಅಕ್ರಮ ಪಂಪ್‌ಸೆಟ್ ತೆರವು ಗೊಳಿಸದೇ ಇದ್ದರೆ ಅಚ್ಚುಕಟ್ಟು ಭಾಗಕ್ಕೆ ನೀರು ಹರಿಯಲು ಸಾಧ್ಯವೇ ಇಲ್ಲ. ಹಾಗಾಗಿ ಅಧಿಕಾರಿಗಳು ಅಕ್ರಮ ಪಂಪ್‌ಸೆಟ್ ತೆರವುಗೊಳಿಸಬೇಕು. ಕೊನೆ ಭಾಗದ ರೈತರಿಗೆ ನೀರು ಒದಗಿಸಬೇಕು. ಇಲ್ಲದಿದ್ದಲ್ಲಿ, ಹೋರಾಟ ನಡೆಸಲಾಗುವುದು. ನೀರಾವರಿ ಕಚೇರಿಗಳಿಗೆ ಬೀಗ ಜಡಿಯಲಾಗುವುದು ಎಂದು ಎಚ್ಚರಿಸಿದರು.
ಭಾರತೀಯ ರೈತ ಒಕ್ಕೂಟ(ಭದ್ರಾ ಶಾಖೆ) ಪ್ರಧಾನ ಕಾರ್ಯದರ್ಶಿ ಶಾಮನೂರು ಎಚ್.ಆರ್. ಲಿಂಗರಾಜ್ ಅರಸಾಪುರ, ಸಾರಥಿ, ಕೆಂಚವ್ವನಹಳ್ಳಿ, ಸಿಂಗ್ರಿಹಳ್ಳಿ, ಕೊಂಡಜ್ಜಿ, ವಡ್ಡಿನ ಹಳ್ಳಿ, ಕುರುಬರಹಳ್ಳಿ ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.