ಅನ್ಯ ಭಾಷಿಕರೊಂದಿಗೆ ಕನ್ನಡದಲ್ಲೇ ವ್ಯವಹರಿಸಿ: ರಮೇಶ
ಪ್ರತಿಯೊಬ್ಬರೂ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರಾಗಬೇಕು
Team Udayavani, Sep 8, 2022, 5:27 PM IST
ನ್ಯಾಮತಿ: ರಾಜ್ಯದಲ್ಲಿ ಅನ್ಯ ಭಾಷಿಕರ ಜೊತೆ ಕನ್ನಡದಲ್ಲಿಯೇ ಮಾತನಾಡಿ ವ್ಯವಹರಿಸುವ ಮೂಲಕ ಅವರಲ್ಲಿ ಕನ್ನಡ ಭಾಷೆ ಬಗ್ಗೆ ಅಭಿಮಾನ ಮೂಡುವಂತೆ ಮಾಡುವ ಕೆಲಸ ಆಗಬೇಕಿದೆ ಎಂದು ಪಿಎಸ್‌ಐ ಪಿ.ಎಸ್. ರಮೇಶ ಹೇಳಿದರು.
ಸಮೀಪದ ದೊಡ್ಡೆತ್ತಿನಹಳ್ಳಿ ಗ್ರಾಮದಲ್ಲಿರುವ ತಾಲೂಕು ಕಸಾಪ ನಿರ್ದೇಶಕ ಜೆ.ಪಿ. ಚಂದನ್ ಅವರ ಮನೆ ಮೇಲೆ ಕನ್ನಡ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಕನ್ನಡ ಭಾಷೆಯಷ್ಟು ಸುಲಲಿತವಾದ ಭಾಷೆ ಮತ್ತೂಂದಿಲ್ಲ. ಕನ್ನಡ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಯುವಕರು, ಕನ್ನಡಾಭಿಮಾನಿಗಳು ಹೆಚ್ಚು ಗಮನ ಹರಿಸುವಂತೆ ಮನವಿ ಮಾಡಿದರು. ಕನ್ನಡ ಮಾಧ್ಯಮದಲ್ಲಿ ಓದಿ ಉನ್ನತ ಹುದ್ದೆಗಳನ್ನು ಪಡೆಯಬಹುದು. ಕಸಾಪದಿಂದ ಪ್ರತಿ ಮನೆ ಮೇಲೆ ಕನ್ನಡ ಧ್ವಜ ಹಾರಿಸುವ ಉದ್ದೇಶ ಶ್ಲಾಘನೀಯ ಎಂದರು.
ನಿವೃತ್ತ ಉಪ ತಹಶೀಲ್ದಾರ್ ಎನ್. ನಾಗರಾಜ ಮಾತನಾಡಿ, ತಾಲೂಕಿನಲ್ಲಿ ಕಸಾಪ ಚಟುವಟಿಕೆಗಳು ಉತ್ತಮವಾಗಿ ನಡೆಯುತ್ತಿವೆ. ಕನ್ನಡ ಭವನ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಸಹಕರಿಸಬೇಕೆಂದು ಮನವಿ ಮಾಡಿದರು. ತಾಲೂಕು ಕಸಾಪ ಅಧ್ಯಕ್ಷ ಡಿ.ಎಂ. ಹಾಲಾರಾಧ್ಯ ಮಾತನಾಡಿ, ಶಾಶ್ವತ ಕನ್ನಡ ಧ್ವಜಸ್ತಂಭ ಮೊದಲು ಗ್ರಾಮದಲ್ಲಿ ಆಗಿರುವುದು ಹೆಮ್ಮೆಯ ವಿಷಯ. ಪ್ರತಿಯೊಬ್ಬರೂ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರಾಗಬೇಕು. ಮನೆಗಳ ಮೇಲೆ ಕನ್ನಡ ಧ್ವಜ ಹಾರಿಸಲು ಇಚ್ಛಿಸುವವರು ಕಸಾಪ ಸಹಕರಿಸುತ್ತದೆ ಎಂದರು.
ಪ್ರಧಾನ ಕಾರ್ಯದರ್ಶಿ ಬಿ.ಜಿ. ಚೈತ್ರಾ ಮಾತನಾಡಿ, ಹೊಸದಾಗಿ ಸದಸ್ಯರಾಗಬಯಸುವವರಿಗೆ ಮೊಬೈಲ್‌ನಲ್ಲಿ ನೋಂದಣಿ ಮಾಡಲು ತಮ್ಮನ್ನು ಸಂಪರ್ಕಿಸುವಂತೆ ಮನವಿ ಮಾಡಿದರು. ಸಮುದಾಯ ಆರೋಗ್ಯ ಕೇಂದ್ರದ ಡಾ| ರೇಣುಕಾನಂದ ಮೆಣಸಿನಕಾಯಿ, ನಿಕಟಪೂರ್ವಅಧ್ಯಕ್ಷ ಜಿ. ನಿಜಲಿಂಗಪ್ಪ, ಕೋಶಾಧ್ಯಕ್ಷ ಬಸವರಾಜ, ಪ್ರಧಾನ ಕಾರ್ಯದರ್ಶಿ ಬಸವರಾಜಪ್ಪ, ನಿರ್ದೇಶಕರಾದ ಡಿ.ಎಂ. ವಿಜೇಂದ್ರ ಮಹೇಂದ್ರಕರ, ಚಂದ್ರೇಗೌಡ, ಜೆ.ಪಿ. ಚಂದನ, ಬಂಡಿ ಈಶ್ವರಪ್ಪ, ವೆಂಕಟೇಶ ನಾಯ್ಕ, ತೀರ್ಥಪ್ಪ, ಕುಬೇರಪ್ಪ, ಜಗದೀಶ, ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.