ಶೇಂಗಾ ಖರೀದಿ ಕೇಂದ್ರಕ್ಕೆ ಆಗ್ರಹ


Team Udayavani, Dec 21, 2019, 11:44 AM IST

dg-tdy-1

ಜಗಳೂರು : ಶೇಂಗಾ ಬೆಳೆಗೆ ವೈಜ್ಞಾನಿಕ ಬೆಲೆ ನೀಡಬೇಕು ಮತ್ತು ಖರೀದಿ ಕೇಂದ್ರಗಳನ್ನು ತೆರೆಯಲು ಕ್ರಮವಹಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ( ಹುಚ್ಚವ್ವನಹಳ್ಳಿ ಮಂಜುನಾಥ್‌ ಬಣ) ವತಿಯಿಂದ ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಸಂಘದ ಪದಾಧಿಕಾರಿಗಳು ಶುಕ್ರವಾರ ಪಟ್ಟಣದ ಪ್ರವಾಸಿ ಮಂದಿರದಿಂದ ತಾಲೂಕು ಕಚೇರಿವರೆಗೆ ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ, ತಾಲೂಕು ಕಚೇರಿಗೆ ಆಗಮಿಸಿ ಉಪ ತಹಶೀಲ್ದಾರ್‌ಗೆ ತಮ್ಮ ಬೇಡಿಕೆಗಳ ಮನವಿ ನೀಡಿದರು. ಈ ವೇಳೆ ಸಂಘದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್‌ ಮಾತನಾಡಿ,

ಕೆಲವು ವರ್ಷಗಳಿಂದ ಡೀಸೆಲ್‌, ಬಿತ್ತನೆ ಬೀಜ, ಗೊಬ್ಬರ,, ವಿದ್ಯುತ್‌ತ್ಛಕ್ತಿ, ದಿನನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಹೆಚ್ಚಾಗುತ್ತಿದ್ದು, ಇವುಗಳಿಗೆ ಮಾತ್ರ ಸರಕಾರವು ವೈಜ್ಞಾನಿಕ ಬೆಲೆಯನ್ನು ನಿಗದಿ ಮಾಡುತ್ತದೆ. ಆದರೆ, ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆಯನ್ನು ನಿಗದಿ ಮಾಡುತ್ತಿಲ್ಲ. ಕೇಂದ್ರ ಸರಕಾರವು ಮೋಸದ ಬೆಂಬಲಬೆಲೆಯನ್ನು ಘೋಷಣೆ ಮಾಡಿದ್ದು, ಕ್ವಿಂಟಲ್‌ ಶೇಂಗಾಕ್ಕೆ 5090ರೂ. ನಿಗದಿ ಮಾಡಿದ್ದಾರೆ. ಇದರಿಂದ ರೈತರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ. 1 ಎಕರೆಯಲ್ಲಿ ಶೇಂಗಾ ಬೆಳೆಯುವುದಕ್ಕೆ ಮಾಡುವ ಖರ್ಚಿಗೂ ಮತ್ತು ಬರುವ ಆದಾಯಕ್ಕೂ ಲೆಕ್ಕ ಹಾಕಿದರೆ ಪ್ರತಿ ಎಕರೆಗೆ 4 ಸಾವಿರ ರೂ. ನಷ್ಟವನ್ನು ರೈತರು ಅನುಭವಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯದಲ್ಲಿ ಸುಮಾರು 34 ಲಕ್ಷದ 40 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಶೇಂಗಾ ಬೆಳೆಯಲಾಗುತ್ತದೆ. ಜಿಲ್ಲೆಯ ಜಗಳೂರು ತಾಲ್ಲೂಕಿನಲ್ಲಿ 10 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಶೇಂಗಾ ಬೆಳೆಯುತ್ತಾರೆ. ಕೇಂದ್ರ ಸರ್ಕಾರ ನಿಗ ದಿ ಮಾಡಿರುವ ಬೆಂಬಲ ಬೆಲೆ 5090 ರೂ.ಗೆ ರಾಜ್ಯ 2500 ರೂ. ಮತ್ತು ಕೇಂದ್ರ 2500 ರೂ. ಬೋನಸ್‌ ನೀಡಿ ಒಟ್ಟು ರೂ.10,000 ಬೆಲೆಯನ್ನು ನಿಗದಿಗೊಳಿಸಬೇಕು. ಖರೀದಿ ಕೇಂದ್ರದ ಮುಖಾಂತರ ಶೇಂಗಾ ಖರೀದಿ ಮಾಡಿ ರೈತರ ಹಿತವನ್ನು ಕಾಪಾಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರವು ತತ್‌ಕ್ಷಣ ಎ.ಪಿ.ಎಂ.ಸಿ. ಕಾಯ್ದೆಯಲ್ಲಿ ತಿದ್ದುಪಡಿ ಮಾಡಿ, ಕೇಂದ್ರ ನಿಗದಿಪಡಿಸಿದ ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ಬೆಳೆ ಖರೀದಿಸುವ ಖರೀದಿದಾರರು ಹಾಗೂ ದಲ್ಲಾಳಿಗಳ ಲೈಸನ್ಸ್‌ ರದ್ದುಗೊಳಿಸುವ ಹಾಗೂ ಕ್ರಿಮಿನಲ್‌ ಕೇಸ್‌ ದಾಖಲಿಸುವ ಕಾಯ್ದೆಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು.

ಸಂಘಟನೆಯ ದಿಬ್ಬದಹಳ್ಳಿ ಗಂಗಾಧರಪ್ಪ, ಪದಾಧಿಕಾರಿಗಳಾದ ಚಿಕ್ಕಮಲ್ಲನಹೊಳೆ ಚಿರಂಜೀವಿ, ಗೌಡಗೊಂಡನಹಳ್ಳಿ ಸತೀಶ್‌, ದೊಣೆಹಳ್ಳಿ ಲೋಕೇಶ್‌, ಯರಲಕಟ್ಟೆ ಕೆಂಚಪ್ಪ, ಚಿಕ್ಕಮಲ್ಲನಹೊಳೆ ಶರಣಪ್ಪ, ಪ್ರಹ್ಲಾದಪ್ಪ, ಇತರರು ಇದ್ದರು.

ಟಾಪ್ ನ್ಯೂಸ್

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.