ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹ
Team Udayavani, May 23, 2017, 1:20 PM IST
ಹರಿಹರ: ಇಲ್ಲಿನ ಜೈಭೀಮನಗರದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲು ಆಗ್ರಹಿಸಿ ದಸಂಸ (ಅಂಬೇಡ್ಕರ್ ವಾದಿ) ವತಿಯಿಂದ ಸಿಪಿಐ ಹಾಗೂ ಅಬಕಾರಿ ಇನ್ಸ್‌ಪೆಕ್ಟರ್ ಅವರಿಗೆ ಮನವಿ ಸಲ್ಲಿಸಲಾಯಿತು.
ನಂತರ ಸ್ಥಳೀಯ ನಿವಾಸಿ ರೂಪ್ಲಾ ನಾಯಕ್ ಮಾತನಾಡಿ, ಜೈಭೀಮನಗರ ಬಡವರು, ಕೂಲಿ ಕಾರ್ಮಿಕರೆ ಅಧಿಕ ಸಂಖ್ಯೆಯಲ್ಲಿರುವ ಜನವಸತಿ ಪ್ರದೇಶ. ಇಲ್ಲಿನ ಎರಡು ಶೆಡ್ ಅಂಗಡಿ, ಎರಡು ಕಿರಾಣಿ ಅಂಗಡಿಗಳಲ್ಲಿ ಅಕ್ರಮ ವಾಗಿ ಮದ್ಯ ಮಾರಾಟವನ್ನು ಮಾಡಲಾಗುತ್ತಿದೆ.
ಇದರಿಂದ ಈ ಭಾಗದ ಬಹುತೇಕ ಪುರುಷರು, ಕೆಲವು ಮಹಿಳೆಯರು, ಯುವಕರೂ ಕೂಡ ಮದ್ಯವ್ಯಸನಿಗಳಾಗಿದ್ದಾರೆ ಎಂದು ದೂರಿದರು. ದಸಂಸ ಜಿಲ್ಲಾ ಸಂಚಾಲಕ ಡಿ.ಹನುಂಂತಪ್ಪ ಮಾತನಾಡಿ, ಕೋಮು ವಿಷಯದಲ್ಲಿ ಸೂಕ್ಷ ಪ್ರದೇಶವಾಗಿರುವ ಈ ಬಡಾವಣೆಯಲ್ಲಿ ಇಲ್ಲಿನ ಕೋಮು ಸಾಮರಸ್ಯ ಹದಗೆಡಲು ಈ ಅಕ್ರಮ ಮದ್ಯ ಮಾರಾಟವೂ ಪ್ರಮುಖ ಕಾರಣವಾಗಿದೆ ಎಂದು ಆರೋಪಿಸಿದರು.
ತಾಲೂಕು ಸಂಚಾಲಕ ಪ್ರಭು ಪೂಜಾರ್ ಮಾತನಾಡಿ, ಅಕ್ರಮ ಮದ್ಯ ಮಾರಾಟವನ್ನು ಕೂಡಲೆ ನಿಲ್ಲಿಸಬೇಕು. ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮಕೈಗೊಂಡು ಜೈಭೀಮನಗರದ ಜನರ ಸಾಮಾಜಿಕ ಬದುಕನ್ನು ಕಾಪಾಡಬೇಕು ಎಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿದ ಸಿಪಿಐ ಜೆ.ಎಸ್. ನ್ಯಾಮಗೌಡರ್ ಮಾತನಾಡಿ, ಅಕ್ರಮ ಮದ್ಯಮಾರಾಟ ಮಾಡುವವರ ಮಾಹಿತಿ ಸಂಗ್ರಹಿಸಿ ಅಂತಹವರ ವಿರುದ್ಧ ಅಬಕಾರಿ ಪೊಲೀಸರೊಂದಿಗೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬಾರದು ಎಂದರು. ಅಬಕಾರಿ ಇನ್ಸ್‌ಪೆಕ್ಟರ್ ಎಂ.ಪಿ.ರಂಗಯ್ಯ ಮಾತನಾಡಿ, ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಈಗಾಗಲೆ ಹಲವು ಪ್ರಕರಣವನ್ನು ದಾಖಲಿಸಲಾಗಿದೆ.
ಜೈಭೀಮನಗರದಲ್ಲಿ ಮಾರಾಟ ಮಾಡುವವರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗುವುದು. ಆ ವಸತಿ ಪ್ರದೇಶದಲ್ಲಿ ಮದ್ಯ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ತಡೆಯಲಾಗುವುದೆಂದು ಎಂದರು. ರಾಜನಹಳ್ಳಿ ಬೀರಪ್ಪ, ತೆಲಗಿ ಹನುಮಂತಪ್ಪ, ನಾಗೇಂದ್ರಪ್ಪ, ಶಂಕರ್ ಹಾಗೂ ಸ್ಥಳೀಯ ನಿವಾಸಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್; ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.