ಯೂರಿಯಾ ಪೂರೈಕೆಗೆ ಆಗ್ರಹ
Team Udayavani, Aug 5, 2020, 3:36 PM IST
ಹೊಳಲ್ಕೆರೆ: ಯೂರಿಯಾ ಗೊಬ್ಬರ ಪೂರೈಕೆಗೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಗೊಬ್ಬರದ ಅಂಗಡಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಕೃಷಿ ಇಲಾಖೆ ರೈತರಿಗೆ ಅಗತ್ಯ ಗೊಬ್ಬರ ಪೂರೈಕೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದ ಪರಿಣಾಮ ತಾಲೂಕಿನಲ್ಲಿ ಗೊಬ್ಬರಕ್ಕಾಗಿ ಹಾಹಾಕಾರ ಉಂಟಾಗಿದೆ. ಗೊಬ್ಬರವಿದ್ದರೂ ಮಾರಾಟಗಾರರು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ನಿಗದಿತ ಬೆಲೆಗಿಂತ ದುಪ್ಪಟ್ಟು ಬೆಲೆಯನ್ನು ನಿಗದಿ ಮಾಡಿ ಮಾರಾಟ ಮಾಡುತ್ತಿರುವ ಅಂಗಡಿ ವಿರುದ್ಧ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳದೆ ಅವರ ಏಜಂಟರಂತೆ ಕಾರ್ಯ ನಿರ್ವಹಿಸುತ್ತಿದ್ದಾರೆಂದು ಪ್ರತಿಭಟನಾಕಾರರು ಆರೋಪಿಸಿದರು.
ರೈತ ಸಂಘದ ಕಾರ್ಯದರ್ಶಿ ಲೋಕೇಶ್ ಮಾತನಾಡಿ, ಸಿದ್ದೇಶ್ವರ ಏಜೆನ್ಸಿ ಮಾಲೀಕರು 248 ರೂ. ಬೆಲೆಯ ಗೊಬ್ಬರವನ್ನು 380 ರೂ,ಗೆ ಮಾರಾಟ ಮಾಡುತ್ತಿದ್ದಾರೆ. ರೈತರು ಗೊಬ್ಬರ ಕೇಳಿದರೆ ಇಲ್ಲವೆಂದು ತಿಳಿಸಿ ಕಾಳಸಂತೆಯಲ್ಲಿ ಗೊಬ್ಬರವನ್ನು ಆಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಏಜೆನ್ಸಿ ಪರವಾನಗಿ ರದ್ದುಪಡಿಸಬೇಕು ಎಂದು ಕೃಷಿ ಇಲಾಖೆ ಮುಂದಾಗಬೇಕೆಂದು ಆಗ್ರಹಿಸಿದರು.
ರೈತ ಸಂಘದ ಗೌರವಾಧ್ಯಕ್ಷ ಬಸವನಕೋಟೆ ನಾಗರಾಜ್, ಕಾರ್ಯದರ್ಶಿ ಅಜಯ್, ಗೌಡರ ಮಂಜುನಾಥ, ಶಿವಸ್ವಾಮಿ, ಪ್ರಕಾಶ್, ರಾಜೇಶ್, ಕುಮಾರ್, ಪರಮೇಶ್ವರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.