ಕಳಂಕಿತ ಸಚಿವರ ರಾಜೀನಾಮೆಗೆ ಆಗ್ರಹ
Team Udayavani, Aug 22, 2017, 2:26 PM IST
ಹರಿಹರ: ಅಕ್ರಮ ಸಂಪತ್ತು ಸಂಗ್ರಹಿಸಿ ಎಸಿಬಿ ದಾಳಿಗೆ ಒಳಗಾಗಿರುವ ಸಚಿವರಾದ ಡಿ.ಕೆ. ಶಿವಕುಮಾರ್, ರಮೇಶ್ ಜಾರಕಿಹೊಳೆ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಶಿವಮೊಗ್ಗ ರಸ್ತೆ ಬಿಜೆಪಿ ಕಚೇರಿಯಿಂದ ಶಿವಮೊಗ್ಗ ವೃತ್ತ, ಮುಖ್ಯ ರಸ್ತೆ, ಗಾಂಧಿ ವೃತ್ತಕ್ಕೆ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಕೆಲ ಹೊತ್ತು ಮಾನವ ಸರಪಳಿ ರಚಿಸಿ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಮಿನಿ ವಿಧಾನಸೌಧಕ್ಕೆ ತೆರಳಿ ತಹಶೀಲ್ದಾರ್ ಜಿ.ನಳಿನಾ ಅವರಿಗೆ ಮನವಿ ನೀಡಿದರು. ಮಾಜಿ ಶಾಸಕ ಬಿ.ಪಿ.ಹರೀಶ್ ಮಾತನಾಡಿ, ಆದಾಯ ತೆರಿಗೆ ದಾಳಿಯಲ್ಲಿ ಸಾವಿರಾರು ಕೋಟಿ ರೂ. ಆಸ್ತಿ,ಪಾಸ್ತಿ ಪತ್ತೆಯಾದ ಸಚಿವ ಡಿ.ಕೆ.ಶಿವಕುಮಾರ್, ಇನ್ನೋರ್ವ ಸಚಿವ ರಮೇಶ್ ಜಾರಕಿಹೊಳೆ ಹಾಗೂ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳ್ಕರ್ ಭಷ್ಟಾಚಾರ ನಡೆಸಿದ್ದಾರೆ. ಇಬ್ಬರು ಸಚಿವರನ್ನು ಸಂಪುಟದಿಂದ ಕೈಬಿಡಬೇಕು ಹಾಗೂ ಲಕ್ಷ್ಮೀ ಹೆಬ್ಟಾಳ್ಕರ್ ಅವರನ್ನು ಸ್ಥಾನದಿಂದ ವಿಮುಕ್ತಿಗೊಳಿಸಬೇಕು. ಈ ಮೂವರ ವಿರುದ್ಧದ ಪ್ರಕರಣಗಳನ್ನು ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿದರು.
ತಾಪಂ ಅಧ್ಯಕ್ಷೆ ಶ್ರೀದೇವಿ ಮಂಜಪ್ಪ, ಮುಖಂಡರಾದ ಎಸ್. ಎಂ.ವೀರೇಶ್, ರಾಜು ರೋಖಡೆ, ಗೋವಿನಾಳ್ ರಾಜಣ್ಣ, ಜಿಪಂ ಸದಸ್ಯ ವಾಗೀಶ್ ಸ್ವಾಮಿ, ನಗರಸಭಾ ಸದಸ್ಯೆ ಅಂಬುಜಾ ರಾಜೊಳಿ, ಅಜಿತ್ ಸಾವಂತ್, ಮಾಲತೇಶ್ ಭಂಡಾರಿ, ಶಾಮೀರ್ ಆಲಂ ಖಾನ್, ರಾಘವೇಂದ್ರ, ಬಿ.ರಾಮಚಂದ್ರಪ್ಪ, ಬ್ಯಾಂಕ್ ಶಿವಣ್ಣ, ಚಂದ್ರಶೇಖರ್ ಪೂಜಾರ್ ಇತರರಿದ್ದರು.
ಬಿಜೆಪಿ ನಾಯಕರ ಮೇಲೆ ಸೇಡಿನ ರಾಜಕಾರಣ
ಹೊನ್ನಾಳಿ: ಬಿಜೆಪಿಯ ಅಭ್ಯುದಯವನ್ನು ಸಹಿಸದ ರಾಜ್ಯದ ಮುಖ್ಯಮಂತ್ರಿಗಳು ಬಿಜೆಪಿ ನಾಯಕರ ಮೇಲೆ ಸೇಡಿನ ರಾಜಕರಣ ಮಾಡಿ ಮಾಜಿ ಮುಖ್ಯಮಂತ್ರಿ ಬಿ . ಬಿ.ಎಸ್.ಯಡಿಯೂರಪ್ಪನವರನ್ನು ಸಿಲುಕಿಸಲು ಎಸಿಬಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಎಸಿಬಿಯನ್ನು ದುರ್ಬಳಕ್ಕೆ ಮಾಡಿಕೊಂಡು ಬಿಜೆಪಿಯ ನಾಯಕರುಗಳ ಮೇಲೆ ಪ್ರಕರಣ ದಾಖಲು ಮಾಡಿಕೊಳ್ಳಲು ಹೊರಟಿರುವುದನ್ನು ಖಂಡಿಸಿ ತಾಲೂಕು ಬಿಜೆಪಿ ಘಟಕದಿಂದ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಕಳೆದ ಅವಧಿಯಲ್ಲಿ ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಬೆಂಗಳೂರಿನ ಶಿವರಾಮಕಾರಂತ ಬಡಾವಣೆಯ 3546 ಎಕರೆಯಲ್ಲಿ 257 ಎಕರೆ ರೈತರ ಭೂಮಿಯನ್ನು ಡಿನೋಟಿಪೈ ಪ್ರಕರಣದಿಂದ ಕೈಬಿಟ್ಟು ತಮ್ಮ ಭೂಮಿ ವಾಪಾಸ್ ನೀಡುವಂತೆ ರೈತರು ಅರ್ಜಿಸಲ್ಲಿಸಿದ
ಮೇರೆಗೆ ವಾಪಾಸ್ ನೀಡಲಾಗಿತ್ತು. ಇದು ಮುಖ್ಯಮಂತ್ರಿಗಳ ಪರಮಾಧಿಕಾರ ಈ ಪ್ರಕ್ರಿಯೆಗೆ ರಾಜ್ಯ ಹೈಕೋರ್ಟ್ ಕೂಡ ಮಾನ್ಯತೆ ನೀಡಿತ್ತು. ಆದರೆ ಹಿಂದಿನ ಪ್ರಕರಣವನ್ನು ಕೆದಕಿ ಯಡಿಯೂರಪ್ಪನವರನ್ನು ವೈಯುಕ್ತಿಕವಾಗಿ ತೇಜೋವಧೆ ಮಾಡುವ ಉದ್ದೇಶವಿಟ್ಟುಕೊಂಡು ಕಾಂಗ್ರೆಸ್ ಸರ್ಕಾರ ಎಫ್‌ಐಆರ್ ದಾಖಲಿಸಿರುವುದು ಖಂಡನೀಯ ಎಂದರು.
ಬಿಜೆಪಿ ತಾಲೂಕು ಅಧ್ಯಕ್ಷ ಡಿ.ಜಿ.ರಾಜಪ್ಪ, ಜಿ.ಪಂ ಸದಸ್ಯ ಎಂ.ಆರ್.ಮಹೇಶ್ ಮಾತನಾಡಿದರು. ಜಿಲ್ಲಾ ಮೋರ್ಚಾ ಅಧ್ಯಕ್ಷ ಡಿ.ಜಿ.ರಾಜಣ್ಣ, ಮುಖಂಡರಾದ ಶಾಂತರಾಜ್‌ಪಾಟೀಲ್, ಜಿಪಂ ಸದಸ್ಯ ವೀರಶೇಖರಪ್ಪ, ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಅರಕೆರೆ ನಾಗರಾಜ್, ಕುಬೇಂದ್ರಪ್ಪ, ತಾಪಂ ಸದಸ್ಯರಾದ ಮರಿಕನ್ನಪ್ಪ, ಹನುಮಂತಪ್ಪ, ತಿಪ್ಪೇಶ್, ಚಂದ್ರಮ್ಮ ಹಾಲೇಶಪ್ಪ, ಎಪಿಎಂಸಿ ನಿರ್ದೇಶಕರಾದ
ಜಿ.ವಿ.ಎಂ. ರಾಜು, ಹನುಮಂತಪ್ಪ, ಪಪಂ ಸದಸ್ಯರಾದ ಹೊಸಕೆರೆ ಸುರೇಶ್, ಸರಳಿನಮನೆ ಮಂಜುನಾಥ್, ಚಂದ್ರಶೇಖರ್ ಪಾಟೀಲ್, ರೈತಮೋರ್ಚಾ ಅಧ್ಯಕ್ಷ ರವೀಂದ್ರನಾಥ್, ಕೋನಾಯಕಹಳ್ಳಿ ಮಂಜುನಾಥ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.